ಕೊಳೆರೋಗ: ಅಡಿಕೆ ಕೃಷಿಕರಿಗೆ ಅಪಾರ ನಷ್ಟ


Team Udayavani, Sep 13, 2018, 2:14 PM IST

13-sepctember-20.jpg

ಎಡಪದವು: ಅಡಿಕೆತೋಟಕ್ಕೆ ಕೊಳೆರೋಗ ಉಂಟಾಗಿ ಹಲವಾರು ರೈತರು ನಷ್ಟ ಅನುಭವಿಸುತ್ತಿದ್ದು, ಸೂಕ್ತ ನಷ್ಟ ಪರಿಹಾರಕ್ಕಾಗಿ ತೋಟಗಾರಿಕಾ ಇಲಾಖೆಯ ಕದ ತಟ್ಟಿದ್ದಾರೆ.

ಜಿಲ್ಲೆಯಾದ್ಯಂತ ಕೊಳೆರೋಗದಿಂದ ರೈತರು ಕೋಟ್ಯಂತರ ರೂ. ನಷ್ಟ ಅನುಭವಿಸಿದ್ದಾರೆ. ಇದೇ ಪರಿಸ್ಥಿತಿ ಕುಪ್ಪೆಪದವು, ಎಡಪದವು ವ್ಯಾಪ್ತಿಯಲ್ಲೂ ನಡೆದಿದೆ. ಈ ಬಾರಿ ಎಡೆಬಿಡದೆ ಸುರಿದ ಮಳೆಯೇ ಕೊಳೆರೋಗ ಭಾದಿಸಲು ಕಾರಣವಾಗಿದೆ. ಕೊಳೆರೋಗ ನಿವಾರಣೆಗೆ ಔಷಧ ಸಿಂಪಡಿಸಲು ಎಡೆಬಿಡದೆ ಉಂಟಾದ ಮಳೆ ಅಡ್ಡಿಪಡಿಸಿದ್ದರಿಂದ ಈ ಭಾದೆ ಉಂಟಾಗಲು ಕಾರಣವಾಗಿದೆ. ಔಷಧ ಸಿಂಪಡಿಸಿದ ಬಳಿಕ ಕನಿಷ್ಠ ಎರಡು ಗಂಟೆಯಾದರೂ ಬಿಸಿಲು ಬಿದ್ದರೆ ಕೊಳೆರೋಗ ಬಾರದಂತೆ ತಡೆಗಟ್ಟುಲು ಸಾಧ್ಯವಾಗಬಹುದಿತ್ತು. ಆದರೆ ಈ ಬಾರಿ ಮಳೆಯಿಂದಾಗಿ ಇದು ಸಾಧ್ಯವಾಗಲಿಲ್ಲ ಎಂಬುವುದು ಕೃಷಿಕರ ಅಭಿಪ್ರಾಯ.

ಅಪಾರ ನಷ್ಟ
ಕಿಲೆಂಜಾರ್‌, ಕುಳವೂರು, ಮುತ್ತೂರು ಸೇರಿ ಹಲವಾರು ಪ್ರದೇಶದಲ್ಲಿ ರೋಗ ಬಾಧೆ ಉಂಟಾಗಿದ್ದು ಇಲ್ಲಿನ ಭಾಸ್ಕರ ಶೆಟ್ಟಿ ಬಾರ್ದಿಲ, ರಾಜೇಶ್‌ ಶೆಟ್ಟಿ ಉಳಿಪಾಡಿ, ದಯಾನಂದ ಶೆಟ್ಟಿ ಕುಳವೂರು ಅಪಾರ ನಷ್ಟ ಅನುಭವಿಸಿದ್ದಾರೆ. ಅಡಿಕೆಯು ಪಕ್ವವಾಗುವ ಮುನ್ನವೇ ಉದುರಿ ಬಿದ್ದು ಲಕ್ಷಾಂತರ ರೂ. ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರಕಾರ ಸೂಕ್ತ ಪರಿಹಾರ ಕೊಡುವಂತೆ ಆಗ್ರಹಿಸಿದ್ದಾರೆ.

ಕೊಳೆರೋಗ: ಅರ್ಜಿನೀಡಿ
ಕೊಳೆರೋಗ ನಷ್ಟ ಅನುಭವಿಸಿದ ಕೃಷಿಕರಿಗೆ ಪಂಚಾಯತ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಕೃಷಿಕರು ಗ್ರಾಮ ಕರಣಿಕರಲ್ಲಿ ಅಥವಾ ಪಂಚಾಯತ್‌ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಬಹುದು. ಬ್ಯಾಂಕ್‌ ಪಾಸ್‌ಬುಕ್‌, ಆಧಾರ್‌ ಕಾರ್ಡ್‌ ಹಾಗೂ ಆರ್‌ಟಿಸಿ ಅಗತ್ಯವಿದ್ದು ಕೃಷಿಕರು ಅರ್ಜಿ ಸಲ್ಲಿಸಿದರೆ ಅದನ್ನು ಕಂದಾಯ ಹಾಗೂ ತೋಟಗಾರಿಕೆ ಇಲಾಖೆಯವರು ಸ್ವೀಕರಿಸುತ್ತಾರೆ. ನಮ್ಮ ಪಂಚಾಯತ್‌ಗೆ ಇದುವರೆಗೆ ಹತ್ತು ಅರ್ಜಿಗಳು ಬಂದಿದೆ. ಈ ಬಗ್ಗೆ ಪಂಚಾಯತ್‌ನಲ್ಲಿ ಸಮಗ್ರ ಮಾಹಿತಿ ನೀಡಲಾಗುವುದು.
– ಡಾ| ಮನೋಹರ್‌,ಕುಪ್ಪೆಪದವು ಪಿಡಿಒ 

ಮಳೆಯಿಂದ ಕೊಳೆರೋಗ
ಈ ಬಾರಿ ಎಡೆಬಿಡದೆ ಉಂಟಾದ ಮಳೆಯಿಂದಾಗಿ ಕೊಳೆರೋಗ ಉಂಟಾಗಿದ್ದು, ಔಷ ಧ ಸಿಂಪಡಿಸಲು ಸಾಧ್ಯವಾಗಿಲ್ಲ. ಇದರಿಂದ ಅಡಿಕೆ ಉದುರಿ ಅಪಾರ ನಷ್ಟ ಉಂಟಾಗಿದೆ ಇದಕ್ಕೆ ಸೂಕ್ತ ಪರಿಹಾರ ಕೊಡಬೇಕು.
– ಭಾಸ್ಕರ ಶೆಟ್ಟಿ ಬಾರ್ದಿಲ, ಕೃಷಿಕರು

ಗಿರೀಶ್‌ ಮಳಲಿ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.