ಟಿಪ್ಪು ಜಯಂತಿ ವಿರುದ್ಧ  ಉಭಯ ಜಿಲ್ಲೆಗಳಲ್ಲಿ  ಪ್ರತಿಭಟನೆ

Team Udayavani, Nov 10, 2018, 9:42 AM IST

tippu.jpg

ಮಂಗಳೂರು/ಉಡುಪಿ: ಟಿಪ್ಪು ಸುಲ್ತಾನ್‌ ಜಯಂತಿಯ ಆಚರಣೆಯನ್ನು ರಾಜ್ಯ ಸರಕಾರ ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿ ಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮತ್ತು ಉಡುಪಿ ಜಿಲ್ಲಾ ಘಟಕದಿಂದ ಜಿಲ್ಲಾ ಬಿಜೆಪಿ ಕಚೇರಿ ಎದುರು ಶುಕ್ರವಾರ ಪ್ರತಿಭಟನ ಸಭೆ ನಡೆಯಿತು.

ಬಹುಸಂಖ್ಯಾಕರ ಭಾವನೆಗೆ ಘಾಸಿ: ನಳಿನ್‌
ಟಿಪ್ಪು ಮತಾಂಧ ಎಂಬ ಭಾವನೆ ಜನರಲ್ಲಿದೆ. ಟಿಪ್ಪು ಜಯಂತಿ ಬಹುಸಂಖ್ಯಾಕ ಮಂದಿಯ ನಂಬಿಕೆಗೆ ಧಕ್ಕೆ ತರುತ್ತದೆ. ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಹಿಂದೂ, ಮುಸ್ಲಿಂ, ಕ್ರೆçಸ್ತರ ಭಾವನೆಗೆ ಘಾಸಿ ಮಾಡುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಮಂಗಳೂರಿನಲ್ಲಿ ಹೇಳಿದರು.

ಟಿಪ್ಪು ಮೀರಿಸಿದ ಮತಾಂಧ ಸಿದ್ದು
“ಸಿಎಂ ಕುಮಾರಸ್ವಾಮಿ ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸುವ ರೀತಿಯಲ್ಲಿ ಸಿದ್ದರಾಮಯ್ಯನವರ ಜಯಂತಿಯನ್ನೂ ಆಚರಿಸಲಿ. ಟಿಪ್ಪು ಜಯಂತಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು 2015ರಲ್ಲಿ ಆಚರಿಸುವ ಮೂಲಕ ಟಿಪ್ಪುವಿಗಿಂತ ದೊಡ್ಡ ಮತಾಂಧ ಎಂಬುದನ್ನು ತೋರಿಸಿದ್ದಾರೆ’ ಎಂದು ಲೇವಡಿ ಮಾಡಿದರು.

ಸಿಎಂ ವಿರುದ್ಧ  ಅವಹೇಳನಕಾರಿ ಪದ
“ಟಿಪ್ಪು ಜಯಂತಿ ಆಮಂತ್ರಣ ಪತ್ರದಲ್ಲಿ ಸಿಎಂ ಕುಮಾರಸ್ವಾಮಿ ತನ್ನ ಹೆಸರನ್ನೇ ನಮೂದಿಸದೆ ಸಂಶಯಕ್ಕೆ ಎಡೆ ಮಾಡಿದ್ದಾರೆ’ ಎನ್ನುವ ಮೂಲಕ ನಳಿನ್‌ ಅವರು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ.

ದ.ಕ. ಜಿಲ್ಲಾದ್ಯಂತ ನಿಷೇಧಾಜ್ಞೆ ; ಬಿಗಿ ಪೊಲೀಸ್‌ ಬಂದೋಬಸ್ತು 
ಮಂಗಳೂರು: ಸರಕಾರಿ ಕಾರ್ಯಕ್ರಮವಾಗಿರುವ ಟಿಪ್ಪು ಜಯಂತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ 6 ಗಂಟೆಯಿಂದ ರವಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಸಿಆರ್‌ಪಿಸಿ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್‌. ಶಶಿಕಾಂತ ಸೆಂಥಿಲ್‌ ಆದೇಶಿಸಿದ್ದಾರೆ.

ಮಂಗಳೂರು ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ರವಿಕಾಂತೇ ಗೌಡ ಅವರ ವರದಿಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭ ಯಾವುದೇ ಸಾರ್ವಜನಿಕ, ರಾಜ ಕೀಯ ಮುಂತಾದ ಬಹಿರಂಗ ಸಭೆ, ಸಮಾರಂಭ, ಜಾಥಾ, ಮೆರವಣಿಗೆ ನಡೆಸುವುದನ್ನು; ಯಾವುದೇ ವ್ಯಕ್ತಿ, ಸಂಘಟನೆಯ ಸದಸ್ಯರು ಪ್ರತಿಭಟನ ಮೆರವಣಿಗೆ, ಬ್ಯಾನರ್, ಬಂಟಿಂಗ್ಸ್‌, ಬಾವುಟ, ಧ್ವನಿವರ್ಧಕ ಅಳವಡಿಸಿ ಘೋಷಣೆ ಕೂಗುವುದನ್ನು ಹಾಗೂ ಗುಂಪು ಗುಂಪಾಗಿ ಸೇರಿ ಪ್ರತಿಭಟನೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎರಡು ಪ್ಲಟೂನ್‌ ಕೆಎಸ್‌ಆರ್‌ಪಿ
ಟಿಪ್ಪು ಜಯಂತಿಗೆ ಸಂಬಂಧಿಸಿ ನಗರದಲ್ಲಿ ಒಂದು ಒಳಾಂಗಣ (ಇಂಡೋರ್‌) ಸಭೆಯನ್ನು ಮಾತ್ರ ನಡೆಸಲು ಅವಕಾಶವಿದೆ. ಹಾಲಿ ಇರುವ ಪೊಲೀಸರ ಹೊರತಾಗಿ 2 ಪ್ಲಟೂನ್‌ ಕೆಎಸ್‌ಆರ್‌ಪಿ ಸಿಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ತಿಳಿಸಿದ್ದಾರೆ.

ಟಿಪ್ಪು  ಪರಿಣಾಮ !
ಟಿಪ್ಪುವಿನ ಖಡ್ಗವನ್ನು ದೇಶಕ್ಕೆ ತಂದ ಉದ್ಯಮಿ ವಿಜಯ ಮಲ್ಯ ಅವರಿಗೆ ಭಾರತ ಬಿಟ್ಟು ವಿದೇಶದಲ್ಲಿ ಕದ್ದು ಬದುಕುವ ಪರಿಸ್ಥಿತಿ ಬಂದಿದೆ. ಅದೇ ರೀತಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಇದೀಗ ಕುಮಾರಸ್ವಾಮಿ ಅವರು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಿದ್ದು, ಮುಂದಿನ ಒಂದು ತಿಂಗಳಿನಲ್ಲಿ ಅವರಿಗೂ ಅದೇ ಗತಿ ಬರಬಹುದು ಎಂದು ನಳಿನ್‌ ಕುಮಾರ್‌ ಹೇಳಿದರು.

ಬಿಜೆಪಿ ಗೆದ್ದರೆ ಟಿಪ್ಪು  ಜಯಂತಿ ರದ್ದು : ಕೋಟ
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ತತ್‌ಕ್ಷಣವೇ ವಿವಾದಿತ ಟಿಪ್ಪು ಜಯಂತಿಯನ್ನು ರದ್ದು ಗೊಳಿಸಲಾಗುವುದು ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯಲ್ಲಿ ಹೇಳಿದರು. “ಟಿಪ್ಪು ಜಯಂತಿಗೂ ಹಿಟ್ಲರ್‌ ಜಯಂತಿಗೂ ವ್ಯತ್ಯಾಸವಿಲ್ಲ. ಕುಮಾರ ಸ್ವಾಮಿ ಅವರಿಗೆ ಪ್ರಾಮಾಣಿಕತೆ ಇದ್ದರೆ ಅವರು ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಜರಗಲಿರುವ ಟಿಪ್ಪು ಜಯಂತಿಯನ್ನು ಉದ್ಘಾಟನೆ ಮಾಡಬಾರದು’ ಎಂದವರು ಆಗ್ರಹಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.