ಶಬರಿಮಲೆಗೆ ಸಂಸದ ನಳಿನ್‌ ಅಧ್ಯಯನ ಪ್ರವಾಸ

Team Udayavani, Nov 20, 2018, 9:24 AM IST

nalin.jpg

ಮಂಗಳೂರು: ಶ್ರೀ ಕ್ಷೇತ್ರ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಎದುರಾಗಿರುವ ಸನ್ನಿವೇಶ, ಯಾತ್ರಿಗಳಿಗೆ ಮಾಡಲಾಗಿರುವ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು ಸಂಸದ ಹಾಗೂ ಕೇರಳದ ಬಿಜೆಪಿ ಸಹ ಉಸ್ತುವಾರಿಯೂ ಆಗಿರುವ ನಳಿನ್‌ ಕುಮಾರ್‌ ಕಟೀಲು ಅವರು ನ. 20ರಂದು ಶಬರಿಮಲೆಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸೂಚನೆಯ ಮೇರೆಗೆ ಶಬರಿಮಲೆಯ ಈಗಿನ ವಾಸ್ತವಾಂಶದ ಕುರಿತಂತೆ ನಳಿನ್‌ ನೇತೃತ್ವದ ತಂಡ ಅಧ್ಯಯನ ನಡೆಸಲಿದೆ. ನಳಿನ್‌ ಜತೆಗೆ ಬಿಜೆಪಿ ರಾಷ್ಟ್ರೀಯ ನಾಯಕ ಮುರಳೀಧರ್‌ ರಾವ್‌ ಹಾಗೂ ಇತರರು ಇದ್ದು, ಶಬರಿಮಲೆಗೆ ತೆರಳಲಿದ್ದಾರೆ. ಈ ಸಂಬಂಧ ಮಂಗಳವಾರ ಬೆಳಗ್ಗೆ 10 ಗಂಟೆಗೆ ಕೇರಳದ ಚೆಂಗನ್ನೂರಿನಲ್ಲಿ ನಳಿನ್‌ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಪಂಪಾಕ್ಕೆ ತೆರಳಿ ಅಲ್ಲಿಂದ ಶಬರಿಮಲೆ ತಲುಪಲಿದ್ದಾರೆ. 

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್‌ ಬೈಠಕ್‌ನಲ್ಲಿ ಭಾಗವಹಿಸಿದ್ದ ಶಾ ಅವರು ಬಿಜೆಪಿ ಪ್ರಮುಖರ ಜತೆಗೆ ಖಾಸಗಿ ಹೊಟೇಲ್‌ನಲ್ಲಿ ರಾಜಕೀಯದ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದರು. ಶ್ರೀ ಕ್ಷೇತ್ರ ಶಬರಿಮಲೆ ವಿಚಾರದಲ್ಲಿ ಬಿಜೆಪಿ ಹೋರಾಟವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವಂತೆ ಸಂಸದ ನಳಿನ್‌ಗೆ ಶಾ ಅವರು ಸಲಹೆ ನೀಡಿದ್ದರು. 

ಇದಕ್ಕೆ ಮುನ್ನುಡಿಯಾಗಿ ಶಬರಿಮಲೆಯ ವಾಸ್ತವ ವಿಚಾರಗಳನ್ನು ತಿಳಿದುಕೊಳ್ಳಲು ಹಾಗೂ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಈ ರೀತಿಯ ಅಧ್ಯಯನ ಪ್ರವಾಸ ಕೈಗೊಂಡು ವರದಿ ಸಿದ್ಧಗೊಳಿಸುವಂತೆ ಶಾ ಅವರು ನಳಿನ್‌ ಕುಮಾರ್‌ ಅವರಿಗೆ ಸೂಚಿಸಿದ್ದರು. ಇದರಂತೆ ನಳಿನ್‌ ಅವರು ವರದಿ ಸಿದ್ಧಪಡಿಸಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಶ್ರೀ ಕ್ಷೇತ್ರ ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ವಿಸ್ತೃತ ವರದಿ ನೀಡುವುದಕ್ಕಾಗಿ ನ.20ರಂದು ಶಬರಿಮಲೆಗೆ ತೆರಳುತ್ತಿದ್ದೇನೆ. ಅಲ್ಲಿ ಯಾತ್ರಾರ್ಥಿಗಳಿಗೆ ನೀಡಲಾಗುತ್ತಿರುವ ವ್ಯವಸ್ಥೆ ಸೇರಿದಂತೆ ವಾಸ್ತವಾಂಶದ ಬಗ್ಗೆ ಪರಿಶೀಲಿಸಿ ವರಿಷ್ಠರಿಗೆ ವರದಿ ಸಲ್ಲಿಸಲಾಗುವುದು.
ನಳಿನ್‌ ಕುಮಾರ್‌ ಕಟೀಲು, ಸಂಸದ

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.