ಮೀನು ಅಲಭ್ಯ: ದರ ಏರಿಕೆ ​​​​!


Team Udayavani, Jan 16, 2019, 4:22 AM IST

16-january-1.jpg

ಮಹಾನಗರ: ಮೀನುಗಳ ಅಲಭ್ಯ ಮತ್ತು ಮೀನುಗಾರರ ಕೊರತೆಯಿಂದಾಗಿ ಮಾರುಕಟ್ಟೆಯಲ್ಲಿ ಮೀನಿನ ದರ ಹೆಚ್ಚಾಗಿದೆ. ಒಂದು ವಾರದ ಹಿಂದೆ ಇದ್ದ ದರಕ್ಕೆ ಹೋಲಿಕೆ ಮಾಡಿದರೆ ಈಗ ದುಪ್ಪಟ್ಟಾಗಿದ್ದು, ಗ್ರಾಹಕರ ಸಂಖ್ಯೆಯೂ ಇಳಿಮುಖವಾಗಿದೆ.

ಮಂಗಳೂರು ಸೇರಿದಂತೆ ಇತರ ಬಂದರಿನಿಂದ ಮೀನುಗಾರಿಕೆಗೆ ತೆರಳುವ ಹೆಚ್ಚಿನ ಮೀನುಗಾರರು ತಮಿಳುನಾಡು ಮೂಲದವರು. ಸದ್ಯ ತಮಿಳುನಾಡಿನಲ್ಲಿ ಪೊಂಗಲ್‌ ಹಬ್ಬ ನಡೆಯುತ್ತಿದ್ದು, ಇವರು ಹಬ್ಬಕ್ಕೆಂದು ತಮ್ಮ ಊರುಗಳಿಗೆ ತೆರಳಿದ್ದಾರೆ. ಇದರಿಂದಾಗಿ ಆಳ ಸಮುದ್ರದ ಮೀನುಗಾರಿಕೆಗೆ ತೆರಳುವ ಶೇ. 50ಕ್ಕೂ ಹೆಚ್ಚಿನ ಬೋಟ್‌ಗಳು ಬಂದರಿನಲ್ಲಿಯೇ ಲಂಗರು ಹಾಕಿವೆ.

ಪೂರೈಕೆ 200 ಟನ್‌ನಿಂದ 130 ಟನ್‌ಗೆ ಇಳಿಕೆ
ನಗರದ ಬಂದರಿಗೆ ಸಾಮಾನ್ಯ ದಿನಗಳಲ್ಲಿ ಸುಮಾರು 200 ಟನ್‌ ಮೀನು ಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಸುಮಾರು 130 ಟನ್‌ ಮೀನುಗಳು ಮಾತ್ರ ಬರುತ್ತಿವೆ. ಒಂದೆಡೆ ಮೀನುಗಾರರ ಅಲಭ್ಯ ಇದ್ದರೆ ಮತ್ತೂಂದೆಡೆ, ಚಳಿಗಾಲದಿಂದಾಗಿ ಮೀನುಗಳು ಸಮುದ್ರದ ಆಳಕ್ಕೆ ಇಳಿಯುತ್ತಿವೆ. ಇದರಿಂದಾಗಿ ಮೀನು ಬಲೆಗೆ ಬೀಳುವುದಿಲ್ಲ. ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಪ್ರಕಾರ ಇನ್ನೂ ಎರಡು ತಿಂಗಳುಗಳ ಕಾಲ ಸಮುದ್ರದಲ್ಲಿ ಮೀನಿನ ಕೊರತೆ ಉಂಟಾಗಲಿದೆ.

ನಗರದ ಬಂದರಿನ ಹೆಚ್ಚಿನ ಬೋಟ್‌ಗಳು ಆಳ ಸಮುದ್ರದ ಮೀನು ಗಾರಿಕೆಗೆಂದು ಮಹಾರಾಷ್ಟ್ರದ ಕಡೆಗೆ ತೆರಳುತ್ತವೆ. ಈ ಬೋಟ್‌ಗಳು 11 ದಿನಗಳ ಬಳಿಕ ಬರುವ ಸಮಯದಲ್ಲಿ ಒಂದು ಬೋಟ್‌ನಲ್ಲಿ ಸುಮಾರು 7 ಲಕ್ಷ ರೂ. ಮೌಲ್ಯದಷ್ಟು ಮೀನುಗಳನ್ನು ಹೊತ್ತು ತರುತ್ತವೆ. ಆದರೆ ಇತ್ತೀಚೆಗೆ ಆಳ ಸಮುದ್ರದಲ್ಲಿ ಬೋಟ್ ನಾಪತ್ತೆ ಬಳಿಕ ಮಹಾರಾಷ್ಟ್ರ ರಾಜ್ಯದತ್ತ ಮೀನುಗಾರರು ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಕೆಲವು ತಿಂಗಳುಗಳಿಂದ ಮೀನು ಗಾರರು ಸಂಕಷ್ಟ ಅನುಭವಿಸು ತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಅರಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಪರಿಣಾಮ ಮೀನುಗಾರಿಕೆಯನ್ನೇ ನಂಬಿಕೊಂಡಿದ್ದ ಕಾರ್ಮಿಕರು ಕೋಟಿಗಟ್ಟಲೆ ರೂ. ನಷ್ಟ ಅನುಭವಿಸಿದ್ದರು. ಇತ್ತೀಚೆಗೆ ಮಲ್ಪೆಯಲ್ಲಿ ನಡೆದ ‘ರಸ್ತೆತಡೆ ಚಳವಳಿ’ಯ ಒಂದೇ ದಿನ 5 ಕೋಟಿ ರೂ.ಗೂ ಹೆಚ್ಚಿನ ನಷ್ಟ ಉಂಟಾಗಿತ್ತು. ಇದಾದ ಬಳಿಕ ಮೀನುಗಾರರ ಅಲಭ್ಯದಿಂದಾಗಿ ಸುಮಾರು 15 ಕೋಟಿ ರೂ.ಗೂ ಹೆಚ್ಚಿನ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.

ಮಹಾರಾಷ್ಟ್ರ ಕಡೆ ಮೀನುಗಾರಿಕೆಗೆ ತೆರಳಲು ಹಿಂದೇಟು
ಕರ್ನಾಟಕ ಪರ್ಸಿನ್‌ ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ಮೋಹನ್‌ ಬೆಂಗ್ರೆ ‘ಉದಯವಾಣಿ’ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರದಲ್ಲಿ ಮೀನುಗಾರಿಕೆ ನಡೆಸುವ ಬೋಟ್‌ಗಳ ಸಂಖ್ಯೆ ಕಡಿಮೆ ಇದೆ. ಆ ಕಡೆಗೆ ಮೀನುಗಾರಿಕೆಗೆ ತೆರಳಿದರೆ ಹೆಚ್ಚಿನ ಮೀನುಗಳು ಸಿಗುತ್ತದೆ. ಇತ್ತೀಚೆಗೆ ಮಲ್ಪೆಯಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮತ್ತು ಮೀನುಗಾರರು ನಾಪತ್ತೆಯಾದ ಕಾರಣದಿಂದಾಗಿ ಇಲ್ಲಿನ ಮೀನುಗಾರರು ಮಹಾರಾಷ್ಟ್ರ ಕಡೆಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಮೀನು ದರ ಜಾಸ್ತಿಯಾಗಲು ಇದು ಕೂಡ ಒಂದು ಕಾರಣ ಎನ್ನುತ್ತಾರೆ.

ಮೀನಿನ ದರ ಹೆಚ್ಚಳ
ನಗರದಲ್ಲಿ ಕಳೆದ ಎರಡು ವಾರಗಳಿಗೆ ಹೋಲಿಕೆ ಮಾಡಿ ದರೆ ಮೀನುಗಳ ದರದಲ್ಲಿ ಭಾರೀ ಏರಿಕೆಯಾಗಿದೆ. ಈ ಹಿಂದೆ ಒಂದು ಕೆ.ಜಿ.ಗೆ 600 ರೂ. ಇದ್ದ ಅಂಜಲ್‌ ಮೀನಿಗೆ ಸದ್ಯ 1,000 ರೂಪಾಯಿ. ಈ ಹಿಂದೆ ಕೆ.ಜಿ.ಗೆ 150 ರೂ. ಇದ್ದ ಬಂಗುಂಡೆ ಮೀನಿಗೆ ಸದ್ಯ 250 ರೂ., ಈ ಹಿಂದೆ ಒಂದು ಬೂತಾಯಿ ಮೀನಿಗೆ ಸುಮಾರು 5-6 ರೂ. ಇತ್ತು. ಇದೀಗ 13 ರೂ.ಗೆ ಏರಿಕೆಯಾಗಿದೆ.

ಮೀನುಗಳ ಲಭ್ಯತೆ ಕಡಿಮೆ
ಮೀನುಗಾರರು ಪೊಂಗಲ್‌ ಹಬ್ಬಕ್ಕೆಂದು ತಮ್ಮ ರಾಜ್ಯಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಮೀನುಗಳ ದರ ಏರಿಕೆಯಾಗುವ ಸಾಧ್ಯತೆಯಿದೆ. ಕೆಲವು ಮೀನುಗಾರರು ಇನ್ನೂ ಮೂರ್‍ನಾಲ್ಕು ದಿನಗಳ ಕಾಲ ತಮ್ಮ ಊರಿನಲ್ಲೇ ಇರಲಿದ್ದು, ಇದರಿಂದಾಗಿ ಬಂದರಿಗೆ ಬರುವ ಮೀನುಗಳ ಲಭ್ಯತೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
– ವಾಸುದೇವ ಬೋಳೂರು,
ನ್ಯಾಶನಲ್‌ ಫಿಶ್‌ ವರ್ಕರ್ ಫಾರಂ ಉಪಾಧ್ಯಕ್ಷ

•ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.