ಶ್ರೀಮನ್ನಾರಾಯಣನ ಟಾರ್ಗೆಟ್‌ 75 ಕೋಟಿ!


Team Udayavani, Nov 9, 2017, 6:55 PM IST

Rakshith-Shetty-(6).jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಇಷ್ಟರಲ್ಲಿ ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಯಣ’ ಚಿತ್ರವು ಸೆಟ್ಟೇರಬೇಕಿತ್ತು. ಆದರೆ, “ಕಿರಿಕ್‌ ಪಾರ್ಟಿ’ ಶುರುವಾಗಿ 11 ತಿಂಗಳಾದರೂ ಚಿತ್ರ ಬಿಡುಗಡೆಯಾಗಿಲ್ಲ. ಮೊದಲು ರಕ್ಷಿತ್‌ ಮತ್ತು ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಮುಗಿಯಲಿ ಅಂತಾಯಿತು. ಈಗ ನಿಶ್ಚಿತಾರ್ಥ ಮುಗಿದು ಮೂರು ತಿಂಗಳಾಗಿವೆ. ಇನ್ನೂ ಚಿತ್ರ ಮಾತ್ರ ಸೆಟ್ಟೇರಿಲ್ಲ.

ಇಷ್ಟಕ್ಕೂ ಚಿತ್ರ ಯಾಕೆ ಸೆಟ್ಟೇರಿಲ್ಲ ಎಂದರೆ, ಪ್ರೀ-ಪ್ರೊಡಕ್ಷನ್‌ ಕೆಲಸಗಳೇ ಸುಮಾರು 12 ತಿಂಗಳಾಗಿದೆ ಎನ್ನುತ್ತಾರೆ ಚಿತ್ರದ ನಿರ್ಮಾಪಕ ಪುಷ್ಕರ್‌ ಮಲ್ಲಿಕಾರ್ಜುನಯ್ಯ. “ಕಳೆದ 12 ತಿಂಗಳುಗಳಿಂದ ಚಿತ್ರದ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ. ರಕ್ಷಿತ್‌ ಶೆಟ್ಟಿ ಬೆಳಿಗ್ಗೆಯಿಮದ ರಾತ್ರಿಯವರೆಗೂ ಚಿತ್ರಕಥೆ ಹಾಗೂ ಸಂಭಾಷಣೆಯ ಕೆಲಸವನ್ನೇ ಮಾಡುತ್ತಿರುತ್ತಾರೆ. ಈ ಬಾರಿ ಬೆಸ್ಟ್‌ ಕೊಡಬೇಕು ಎನ್ನುವುದು ಎಲ್ಲರ ಆಸೆ. ಚಿತ್ರದ ಬಜೆಟ್‌ 15ರಿಂದ 20 ಕೋಟಿಯಾಗುತ್ತದೆ. ಈ ಚಿತ್ರ 75ರಿಂದ 100 ಕೋಟಿಯಷ್ಟು ಗಳಿಕೆ ಮಾಡಬೇಕು ಎಂದು ಟಾರ್ಗೆಟ್‌ ಇಟ್ಟುಕೊಂಡಿದ್ದೇವೆ. ಚಿತ್ರದ ಬಜೆಟ್‌ ಬಹುಪಾಲು ಸೆಟ್‌ಗೆà ಖರ್ಚಾಗುತ್ತದೆ. ಹಾಲಿವುಡ್‌ ಲೆವೆಲ್‌ನಲ್ಲಿ ಒಂದಿಷ್ಟು ಸೆಟ್‌ಗಳನ್ನು ನಿಮಾಘಣ ಮಾಡುವ ಯೋಚನೆ ಇದೆ. ಒಂದು ಕೋಟೆ ಸೃಷ್ಟಿಸಬೇಕಿದೆ’ ಎನ್ನುತ್ತಾರೆ ಅವರು.

ರಕ್ಷಿತ್‌ ಶೆಟ್ಟಿ ಈ ಚಿತ್ರದಲ್ಲಿ ಐದು ಗೆಟಪ್‌ಗ್ಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಚಿತ್ರದಲ್ಲಿ ಅವರದ್ದು ಭ್ರಷ್ಟ ಪೊಲೀಸ್‌ ಅಧಿಕಾರಿಯ ಪಾತ್ರ. 80ರ ದಶಕದ ಉತ್ತರ ಕರ್ನಾಟಕದ ಊರೊಂದರಲ್ಲಿ ನಡೆಯುವ ಕಾಲ್ಪನಿಕ ಘಟನೆಯನ್ನಿಟ್ಟುಕೊಂಡು ಈ ಚಿತ್ರ ಮಾಡಲಾಗುತ್ತಿದೆ. “ಈಗಿನ ಕಾಲಕ್ಕೆ ಪೊಲೀಸ್‌ ಅಧಿಕಾರಿ ಔಟ್‌ಶರ್ಟ್‌ ಮಾಡಿಕೊಂಡು, ಗುಂಡಿ ಬಿಚ್ಚಿಕೊಂಡಿದ್ದರೆ ಜನ ನಂಬಲ್ಲ. ಏಕೆಂದರೆ, ಈಗೆಲ್ಲಾ ಬಹಳ ಸ್ಟ್ರಿಕ್ಟ್ ಆಗಿದೆ. ಹಾಗಾಗಿ ಆಗಿನ ಕಾಲದಲ್ಲಿ ಹೀಗೊಬ್ಬ ಇದ್ದ ಅಂತ ತೋರಿಸಬಹುದು. ಅಮರಾವತಿ ಎಂಬ ಪುಟ್ಟ ಕಾಲ್ಪನಿಕ ಹಳ್ಳಿಯಲ್ಲಿ ಇಡೀ ಕಥೆ ನಡೆಯುತ್ತದೆ’ ಎನ್ನುತ್ತಾರೆ ರಕ್ಷಿತ್‌.

ಈ ಚಿತ್ರದಲ್ಲಿ ರಕ್ಷಿತ್‌ಗೆ ನಾಯಕಿಯಾಗಿ ಸಾನ್ವಿ ಶ್ರೀವಾತ್ಸವ್‌ ನಟಿಸುತ್ತಿದ್ದು, ಅಚ್ಯುತ್‌ ಕುಮಾರ್‌ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ಇನ್ನು ಚಿತ್ರವನ್ನು ಪುಷ್ಕರ, ಪ್ರಕಾಶ್‌ (ರಂಗಿ ತರಂಗ) ಮತ್ತು ರಕ್ಷಿತ್‌ ಸೇರಿ ನಿರ್ಮಿಸುತ್ತಿದ್ದಾರೆ. ಚಿತ್ರವನ್ನು ಸಚಿನ್‌ ನಿರ್ದೇಶಿಸುತ್ತಿದ್ದಾರೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.