CONNECT WITH US  

ಕಾಂಕ್ರೀಟ್‌ ಕಾಡಿನಲ್ಲಿ ಕಾರ್ಟೂನ್‌ ಕಲರವ

ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘದಿಂದ ರಾಜ್ಯಮಟ್ಟದ ವ್ಯಂಗ್ಯಚಿತ್ರ ಸಮ್ಮೇಳನ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎನ್‌.ಆರ್‌.ವಿಶುಕುಮಾರ್‌ ಉದ್ಘಾಟಿಸಲಿದ್ದು, ಹಿರಿಯ ವ್ಯಂಗ್ಯಚಿತ್ರಕಾರ ಬಿಜಿ ಗುಜ್ಜಾರಪ್ಪ ಹಾಗೂ ವ್ಯಂಗ್ಯಚಿತ್ರಕಾರರ ಸಂಘದ ಅಧ್ಯಕ್ಷ ವಿ.ಆರ್‌. ಚಂದ್ರಶೇಖರ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ¨ªಾರೆ. ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷೆ ಎಂ.ಜೆ. ಕಮಲಾಕ್ಷಿ ಅಧ್ಯಕ್ಷತೆ ವಹಿಸಲಿ¨ªಾರೆ. ಇದೇ ಸಂದರ್ಭದಲ್ಲಿ ವ್ಯಂಗ್ಯಚಿತ್ರದ ಪುಸ್ತಕ ಬಿಡುಗಡೆ ಹಾಗೂ ಹಿರಿಯ ವ್ಯಂಗ್ಯಚಿತ್ರಕಲಾವಿದ ಸು.ವಿ. ಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ವ್ಯಂಗ್ಯಚಿತ್ರ ಕಲೆ ಕುರಿತಾದ ವಿಚಾರ ಸಂಕಿರಣ, ವ್ಯಂಗ್ಯಚಿತ್ರ ಕಾರ್ಯಾಗಾರ ನಡೆಯಲಿದೆ. ಕಲಾವಿಮರ್ಶಕ ಎಚ್‌.ಎ. ಅನಿಲ್‌ಕುಮಾರ್‌, ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕ ಬಿ.ಎಂ. ಹನೀಫ್, ವ್ಯಂಗ್ಯಚಿತ್ರಕಾರರಾದ ಪ್ರಕಾಶ್‌ ಶೆಟ್ಟಿ, ಬಾಬು ಜತ್ತಕರ್‌, ನಟರಾಜ್‌ ಅರಳಸುರಳಿ ಭಾಗವಹಿಸಲಿ¨ªಾರೆ. ಸಮ್ಮೇಳನದಲ್ಲಿ ಪ್ರದರ್ಶನಗೊಂಡ ವ್ಯಂಗ್ಯಚಿತ್ರಗಳನ್ನು ಆಗಸ್ಟ್‌ 28ರಿಂದ ಸೆಪ್ಟೆಂಬರ್‌1ರವರೆಗೆ, ಎಂ.ಜಿ.ರಸ್ತೆಯಲ್ಲಿರುವ ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿಯಲ್ಲಿ ಪ್ರದರ್ಶನಕ್ಕಿಡಲಾಗುವುದು. 

ಎಲ್ಲಿ?: ವರ್ಣ ಆರ್ಟ್‌ ಗ್ಯಾಲರಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ
ಯಾವಾಗ?: ಆಗಸ್ಟ್‌ 25- 26,  
 


Trending videos

Back to Top