ಶಿವರಾತ್ರಿ ಜಾಗರಣೆ, ಉತ್ಸವ, ರಥೋತ್ಸವದಲ್ಲಿ ಮಿಂದೆದ್ದ ಭಕ್ತರು

Team Udayavani, Feb 26, 2017, 12:32 PM IST

mys6.jpg

ಹುಣಸೂರು: ತಾಲೂಕಿನ ಮಹಾ ಶಿವರಾತ್ರಿ ಅಂಗವಾಗಿ ವಿವಿಧ ದೇವಸ್ಥಾನಗಳಲ್ಲಿ ಪೂಜೆ, ಹೋಮ – ಹವನ, ಜಾಗರಣೆ, ಉತ್ಸವ, ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿ ಶಿವನ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಮಹಾಶಿವರಾತ್ರಿ ಪ್ರಯುಕ್ತ ಹನ ಗೋಡು ಹೋಬಳಿ ರಾಮೇನಹಳ್ಳಿ ಬೆಟ್ಟದ ಮೇಲಿನ ಓಂಕಾರೇಶ್ವರದೇವರ ರಥೋತ್ಸವ, ಕಲ್ಲೂರಪ್ಪನಗುಡ್ಡದಲ್ಲಿ ಕೊಂಡೋತ್ಸವ ನಡೆಯಿತು. ಕೊಳವಿಗೆ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಚಿಕ್ಕಹುಣಸೂರಿನ ಮಹದೇಶ್ವರ ದೇವಸ್ಥಾನದಲ್ಲಿ ಉತ್ಸವ ನಡೆದರೆ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ನಡೆಯಿತು. ಈ ಎಲ್ಲಾ ದೇವಾಲಯಗಳೂ ಲಕ್ಷಣ ತೀರ್ಥ ನದಿ ತಟದಲ್ಲಿರುವುದು ವಿಶೇಷವಾಗಿದೆ.

ಓಂಕಾರೇಶ್ವರ ಸ್ವಾಮಿ ರಥೋತ್ಸವ: ನಗರಕ್ಕೆ ಮೂರು ಕಿ.ಮೀ. ದೂರಲ್ಲಿರುವ ರಾಮೇನಹಳ್ಳಿಬೆಟ್ಟದ ಮೇಲಿನ ದೇವಾ ಲಯದಲ್ಲಿ ಓಂಕಾರೇಶ್ವರ ಸ್ವಾಮಿ ರಥೋತ್ಸವವು ಶನಿವಾರ ಬೆಳಗ್ಗೆ ವಿಜ್ರಂಭಣೆಯಿಂದ ಜರುಗಿತು. ಶುಕ್ರುವಾರ ರಾತ್ರಿಯಿಡೀ ಬೆಟ್ಟದಲ್ಲಿ ವಿಶೇಷ ಹೋಮ, ಹವನ, ಭಜನೆ ಮೂಲಕ ಜಾಗರಣೆ ನಡೆಯಿತು. ರಾತ್ರಿ ಜಾಗರಣೆಯಲ್ಲಿ ತೊಡಗಿದ್ದವರು ಬೆಳಗ್ಗೆ ನದಿಯಲ್ಲಿ ಸ್ಥಾನಮಾಡಿ ಪುನೀತರಾದರು.

ಬೆಟ್ಟದ ಮೇಲಿನ ದೇವಾಲಯಕ್ಕೆ 500 ಮೆಟ್ಟಿಲು ಮೂಲಕ ಬೆಟ್ಟ ಹತ್ತಿ, ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. ಇದಕ್ಕೂ ಮುನ್ನ ಹರಕೆ ಹೊತ್ತ ಮಂದಿ ಗ್ರಾಮದ ಬಳಿ ಇರುವ ಲಕ್ಷಣತೀರ್ಥನದಿಯಲ್ಲಿ ಮುಡಿಕೊಟ್ಟು ಬಾಯಿಗೆ ಬೀಗ ಹಾಕಿಕೊಂಡು ಬೆಟ್ಟ ಹತ್ತಿ ಉರುಳುಸೇವೆ ಸಲ್ಲಿಸಿದರು.

20 ಸಾವಿರ ಮಂದಿಗೆ ದಾಸೋಹ: ಜಾತ್ರಾ ಸಮಿತಿವತಿಯಿಂದ ಭಕ್ತರಿಗೆ ಬೆಟ್ಟದ ಆವರಣದಲ್ಲಿ ಬಗೆ ಬಗೆಯ ಊಟದ ವ್ಯವಸ್ಥೆ ಕಲ್ಪಿಸ ಲಾಗಿತ್ತು. ಜಾತ್ರೆಯಲ್ಲಿ ಹುಣಸೂರಿನ ಗಾಡಿಕಾರ್ಖಾನೆ ನಾರಾಯಣ ಸ್ವಾಮಿಯವರ ಕುಟುಂಬದಿಂದ ಮಜ್ಜಿಗೆ, ಪಾನಕ ವಿತರಿಸಲಾಯಿತು.

ಕೊಳುವಿಗೆಯಲ್ಲಿ ರಾಮಲಿಂಗೇಶ್ವರ ಉತ್ಸವ: ಹನಗೋಡಿಗೆ ಸಮೀಪ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವನಕ್ಕಂಟಿಕೊಂಡಿರುವ ಕೊಳುವಿಗೆಯ ಲಕ್ಷಣತೀರ್ಥನದಿದಂಡೆಯಲ್ಲಿರುವ ಶ್ರೀ ರಾಮಲಿಂಗೇಶ್ವರ ದೇವಾಲಯ ದಲ್ಲಿ ಜಾಗರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು, ಶನಿವಾರ ಬೆಳಗ್ಗೆ ದೇವರ ಉತ್ಸವ ನಡೆಯಿತು. ಮಧ್ಯಾಹ್ನ ಅನ್ನದಾಸೋಹ ನಡೆಯಿತು. ಸುತ್ತ ಮುತ್ತಲ ಗ್ರಾಮಗಳು ಹಾಗೂ ಹಾಡಿಗಳಿಂದ ಸಾವಿರಾರು ಮಂದಿ ಭಾಗವಹಿಸಿದ್ದರು.

ಕಲ್ಲೂರೇಶ್ವರ ಜಾತ್ರೆ: ನಾಗರಹೊಳೆ ಉದ್ಯಾನದಂಚಿನಲ್ಲಿರುವ ಸಮಿಪದ ಮಾದಳ್ಳಿಯ ಕಲ್ಲೂರಪ್ಪನಬೆಟ್ಟದಲ್ಲಿ ಕಲ್ಲುಬಂಡೆಗಳ ನಡುವೆ ವಿರಾಜಮಾನವಾಗಿರುವ ಕಲ್ಲೂರೇಶ್ವರಸ್ವಾಮಿಗೆ ಹಬ್ಬದಂದು ವಿಶೇಷ ಪೂಜೆ ಸಲ್ಲಿಸ ಲಾಯಿತು. ಜಾಗರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆೆಯಿತು. ಶನಿವಾರ ಬೆಳಿಗ್ಗೆ ದೀವಟಿಕೆ ಪೂಜೆ ಬಳಿಕ ಕೊಂಡೊತ್ಸವ ನಡೆಸಲಾಯಿತು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.