ಮುಂಬರುವ ಚುನಾವಣೆಗೆ ದಿಕ್ಸೂಚಿಯಲ್ಲ: ಕೃಷ್ಣ

Team Udayavani, Apr 4, 2017, 11:54 AM IST

mys5.jpg

ಮೈಸೂರು: ವಿ. ಶ್ರೀನಿವಾಸಪ್ರಸಾದ್‌ ಅವರ ಸ್ವಾಭಿಮಾನದ ಬಾವುಟ ಬಹಳ ಎತ್ತರಕ್ಕೆ ಹಾರಬೇಕಿದೆ. ಹೀಗಾಗಿ ನಂಜನಗೂಡು ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿ ಅವರನ್ನು ವಿಧಾನಸಭೆಗೆ ಕಳುಹಿಸಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಮನವಿ ಮಾಡಿದರು.

ಬಿಜೆಪಿ ಸೇರಿದ ನಂತರ ಇದೇ ಮೊದಲ ಬಾರಿಗೆ ನಂಜನಗೂಡಿಗೆ ಆಗಮಿಸಿದ ಅವರು, ಪಟ್ಟಣದಲ್ಲಿ ತೆರೆಯಲಾಗಿರುವ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಾತನಾಡಿದರು. ನನ್ನ ಅನುಭವದ ಪ್ರಕಾರ ಈ ಉಪ ಚುನಾವಣೆ, ಮುಂಬರುವ ಚುನಾವಣೆಯ ದಿಕ್ಸೂಚಿಯಾಗಲಾರದು. ಉಪ ಚುನಾವಣೆಗಳಲ್ಲಿ ಅಭ್ಯರ್ಥಿ ಹಾಗೂ ಸ್ಥಳೀಯ ವಿಚಾರಗಳು ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತವೆ. ಹೀಗಾಗಿ ಯಾವ ಉಪ ಚುನಾವಣೆಗಳೂ ಮುಂಬರುವ ಚುನಾವಣೆಯ ದಿಕ್ಸೂಚಿಯಾಗಲಾರದು ಎಂದರು.

ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಈಗಾಗಲೇ ಪ್ರಾರಂಭವಾಗಿದೆ. ಅದು ಅವ್ಯಾಹತವಾಗಿ ನಡೆಯುತ್ತದೆ. ನಾನು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಕಾರಣಗಳನ್ನು ಈಗಾಗಲೇ ಜನತೆಯ ಮುಂದೆ ಇಟ್ಟಿದ್ದೇನೆ ಎಂದು ತಿಳಿಸಿದರು. ಶ್ರೀನಿವಾಸಪ್ರಸಾದ್‌ ಅವರನ್ನು ಬಹಳ ವರ್ಷಗಳಿಂದ ಕಂಡಿದ್ದೇನೆ. 1972ರಲ್ಲಿ ದೇವರಾಜ ಅರಸರ ಸಂಪುಟದಲ್ಲಿ ನಾನು ಮಂತ್ರಿಯಾಗಿದ್ದಾಗ ಮೈಸೂರಿನ ಕ್ಷೇತ್ರವೊಂದಕ್ಕೆ 1974ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದರು.

ದೇವರಾಜ ಅರಸು ಮತ್ತು ನನ್ನ ಗುರಿ ಅಂದು ಪ್ರಸಾದ್‌ರನ್ನು ಸೋಲಿಸುವುದಾಗಿತ್ತು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗಿಂತ ಪ್ರಸಾದ್‌ ಅಂದು ಹೆಚ್ಚಿನ ಮತಗಳಿಸಿದ್ದರು. ಇದನ್ನು ಕಂಡು ಅರಸರು ಈ ಹುಡುಗನನ್ನೇ ಕಾಂಗ್ರೆಸ್‌ ಅಭ್ಯರ್ಥಿ ಮಾಡಬಹುದಿತ್ತು ಎಂದು ಹೇಳಿದ್ದರು ಎಂದು ನೆನಪಿನ ಬುತ್ತಿ ಬಿಚ್ಚಿಟ್ಟರು.

ನಿಸ್ವಾರ್ಥವಾಗಿ ಜನಸೇವೆ ಮಾಡುತ್ತಾ ಬಂದಿದ್ದ ಪ್ರಸಾದ್‌ ಅವರ ಸ್ವಾಭಿಮಾನಕ್ಕೆ ಧಕ್ಕೆ ಬಂದ ಸಂದರ್ಭದಲ್ಲಿ ಅದನ್ನು ಪ್ರತಿಭಟಿಸಿ, ರಾಜೀನಾಮೆ ಕೊಟ್ಟು ಜನರ ಮುಂದೆ ಬಂದಿದ್ದಾರೆ. ಬಹಳ ಜನ ರಾಜಕಾರಣಿಗಳು ಈ ತೀರ್ಮಾನ ಮಾಡಲ್ಲ. ಸುಲಭವಾಗಿ ಮುಂದುವರಿಯಲು ನೋಡುತ್ತಾರೆ ಎಂದರು.

ವಿ.ಶ್ರೀನಿವಾಸಪ್ರಸಾದ್‌ ಮಾತನಾಡಿ, ಸ್ವಾಭಿಮಾನ ಮತ್ತು ಆತ್ಮ ಗೌರವದ ಪ್ರಶ್ನೆ ಈ ಉಪ ಚುನಾವಣೆ. ಕ್ಷೇತ್ರದ ಯಾವುದೇ ಹಳ್ಳಿಗೆ ಹೋದರೂ ಸ್ವಾಭಿಮಾನದ ಪ್ರಜ್ಞೆ ಜಾಗೃತವಾಗಿ, ಒಳ್ಳೆಯ ವಾತಾವರಣವಿದೆ. ಇದರಿಂದ ಆತ್ಮಸ್ಥೈರ್ಯ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.