3 ದಶಕದ ಬಳಿಕ ಮೈದುಂಬಿದ ತ್ರಿವೇಣಿ ಸಂಗಮ

Team Udayavani, Jul 16, 2018, 3:43 PM IST

mys-1.gif

ತಿ.ನರಸೀಪುರ: ಮೂರು ದಶಕಗಳ ಬಳಿಕ ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ನದಿಗೆ ಅಧಿಕ ನೀರು ಬಿಟ್ಟಿರುವುದರಿಂದ ಶ್ರೀರಂಗಪಟ್ಟಣ ಕಡೆಯಿಂದ ಹರಿದು ಬರುವ ಕಾವೇರಿ, ನಂಜನಗೂಡು ಕಡೆಯಿಂದ ಹರಿದು ಬರುವ ಕಪಿಲಾ ಹಾಗೂ ಇಲ್ಲಿಯೇ ಉದ್ಭವಿಸಿ ಅಂತರ್ಗಾಮಿ (ಗುಪ್ತ ಗಾಮಿನಿ)ಯಾಗಿ ಹರಿವ ಸ್ಫಟಿಕ ಸರೋವರಗಳು ಸೇರುವ ತ್ರಿವೇಣಿ ಸಂಗಮ ಮೈದುಂಬಿ ಹರಿಯುತ್ತಿದೆ.

ಕೇರಳದ ವೈನಾಡು, ಕಾವೇರಿ ಕಣಿವೆಗಳಲ್ಲಿ ಸುರಿಯುತ್ತಿರುವ ವ್ಯಾಪಕ ವರ್ಷ ಧಾರೆಯಿಂದ ಕಪಿಲಾ – ಕಾವೇರಿ – ಗುಪ್ತಗಾಮಿನಿ ನದಿಗಳ ತ್ರಿವೇಣಿ ಸಂಗಮ ಮೈದುಂಬಿ ಹರಿಯುತ್ತಿದೆ. ನದಿಪಾತ್ರದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಭಾಗದಲ್ಲಿ ಇಂತಹ ಪ್ರವಾಹವನ್ನು ಕಂಡು ಮೂರು ದಶಕಗಳೇ ಕಳೆದಿವೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮ ಮೈದುಂಬಿ ಹರಿಯು
ತ್ತಿರುವುದು ತಾಲೂಕಿನ ಜನರಲ್ಲಿ ಹರ್ಷ ಉಂಟು ಮಾಡಿದೆ. ಭಾನುವಾರದಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚುತ್ತಿದೆ.

ಹೆಮ್ಮಿಗೆ ಸೇತುವೆ ಮೇಲೆ ಸಂಚಾರ ಸ್ಥಗಿತ: ಪಟ್ಟಣದ ಕಾವೇರಿ ಮತ್ತು ಕಪಿಲಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ತಲಕಾಡು ಹೆಮ್ಮಿಗೆ ಸೇತುವೆ ಮುಳುಗಡೆ ಯಾಗುವ ಸಾಧ್ಯತೆಗಳಿವೆ. ತಿ.ನರಸೀಪುರ- ತಲಕಾಡು ಮಾರ್ಗದಲ್ಲಿ ಸೇತುವೆ ಸಂಚಾರ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ತಹಶೀಲ್ದಾರ್‌ ರಾಜು ಸೂಚನೆ ನೀಡಿದ್ದಾರೆ.

ಬಿಗಿ ಭದ್ರತೆ: ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ನೀರು ಹೊರ ಬರುತ್ತಿರುವುದ ರಿಂದ ಕಪಿಲಾ-ಕಾವೇರಿ ನದಿ ಪಾತ್ರಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಿದೆ. ನದಿ ತೀರ ಪ್ರದೇಶಗಳು ಜಲಾವೃತಗೊಂಡಿವೆ. ಹೆಮ್ಮಿಗೆ ಸೇತುವೆ ಮುಳುಗಡೆ ಯಾಗುವ ಸಾಧ್ಯತೆ ಇದೆ. ಜನಜಾನುವಾರು ಹಾಗೂ ವಾಹನಗಳ ಸಂಚಾರ ನಿಷೇಧಿಸಿ ದಿನದ 24 ಗಂಟೆ ಪೊಲೀಸ್‌ ಬಿಗಿ ಭದ್ರತೆ ವ್ಯವಸ್ಥೆ ಹಾಗೂ ಬ್ಯಾರಿಕೇಡ್‌ ಅಳವಡಿಸುವಂತೆ ಸೂಚಿಸಲಾಗಿದೆ.

ನರಸಿಂಹಸ್ವಾಮಿ ದೇಗುಲ ವಿಶೇಷ: ನದಿ ದಂಡೆಯಲ್ಲಿರುವ ಗುಂಜಾ ನರಸಿಂಹ ಸ್ವಾಮಿ ದೇವಾಲಯಕ್ಕೆ ಪ್ರತಿವರ್ಷ ಯುಗಾದಿ ಹಬ್ಬದ ಹಿಂದಿನ ದಿನವೇ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ, ದೇವಾಲಯದಲ್ಲಿ ತಂಗಿ, ಯುಗಾದಿ ಹಬ್ಬದ ದಿನ ಮುಂಜಾನೆಯಿಂದಲೇ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ, ದೇವರ ದರ್ಶನ ಪಡೆಯುವುದು ಇಲ್ಲಿನ ಸಂಪ್ರದಾಯ ಜೊತೆಗೆ ಪ್ರತಿ ಮೂರು ವರ್ಷಗಳಿಗೊಮ್ಮೆ ಇಲ್ಲಿ ಕುಂಭಮೇಳ ನಡೆಯುತ್ತದೆ. ತ್ರಿವೇಣಿ ಸಂಗಮ ಸೇರಿದಂತೆ ನದಿ ಪಾತ್ರಗಳಲ್ಲಿರುವ ಜನರಿಗೆ ನದಿ ಪಾತ್ರಕ್ಕೆ ತೆರಳಬಾರದು ಹಾಗೂ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿ¨

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.