ಪ್ರವಾಹದ ಭೀತಿಯಲ್ಲಿ ನಂಜನಗೂಡು

Team Udayavani, Aug 17, 2018, 11:20 AM IST

m5-pravaha.jpg

ನಂಜನಗೂಡು: ಕೇರಳದಲ್ಲಿ ವರುಣನ ಭೋರ್ಗರೆರಕ್ಕೆ ಕಾವೇರಿ ಕಣಿವೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿ ಮತ್ತೆ ಪ್ರವಾಹ ಭೀತಿ ಆವರಿಸಿಕೊಂಡಿದೆ. ಗುರುವಾರ ಮಧ್ಯಾಹ್ನ ಕಬಿನಿ ಜಲಾಶಯದಿಂದ 70 ಸಾವಿರಕ್ಕೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ.

ಆರು ದಿನಗಳ ಹಿಂದೆಯಷ್ಟೇ ಪ್ರವಾಹ ಮುಳುಗಡೆಯಿಂದ ಚೇತರಿಸಿಕೊಳ್ಳುತ್ತಿದ್ದ ನಂಜನಗೂಡಿನ ನದಿದಡದಲ್ಲಿರುವ ಶ್ರೀಕಂಠೇಶ್ವರ ದೇವಾಲಯ ಆವರಣ, ಕಪಿಲಾ ಸ್ನಾನಘಟ್ಟ, ತೋಪಿನ ಬೀದಿ, ಸರಸ್ವತಿ ಕಾಲೋನಿ, ರಾಜಾಜಿ ಕಾಲೋನಿ, ಹಳ್ಳದಕೇರಿ ಗ್ರಾಮಾಂತರದ ಹೆಜ್ಜಿಗೆ ತೊರೆಮಾವು, ಬೊಕ್ಕಳ್ಳಿ ಕುಳ್ಳಂಕನ ಹುಂಡಿ, ಕತ್ಯಾಡಿಪುರ, ಸುತ್ತೂರು ಸೇರಿದಂತೆ ನದಿ ತೀರದ ಗ್ರಾಮಗಳು ಮತ್ತೆ ಪ್ರವಾಹಕ್ಕೆ ಒಳಗಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ. 

ಶ್ರೀಕಂಠೇಶ್ವರ ದೇವಳದ ದಾಸೋಹ ಭವನದಲ್ಲಿದ್ದ ಪ್ರವಾಹ ಸಂತ್ರಸ್ತರು ಇನ್ನೇನು ಮನೆಗೆ ಹಿಂತಿರುಗಬೇಕೆನ್ನುವ ಸಮಯದಲ್ಲಿ ಮತ್ತೆ ಕಪಿಲಾ ನದಿಗೆ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಬಿಡಲಾಗಿದೆ. ಪ್ರವಾಹ ಸಂತ್ರಸ್ತರು ಮತ್ತೆ ಅಲ್ಲಿಯೇ ಉಳಿದು ಕಾದು ನೋಡುವಂತಾಗಿದೆ.

ಮಳೆ ಇಲ್ಲದ ಪ್ರವಾಹ: ಕಳೆದ ವಾರ ನೀರು ಬಿಟ್ಟಾಗ ಜಲಾಶಯದ ಕೆಳಭಾಗದಲ್ಲೆಲ್ಲೂ ಮಳೆ ಇರಲಿಲ್ಲ. ಆದರೆ ಈಗ ಹಾಗಲ್ಲ. ನದಿಪಾತ್ರದ ನಂಜನಗೂಡು, ಹೆಗ್ಗಡದೇವನ ಕೋಟೆ, ಗುಂಡ್ಲುಪೇಟೆ ತಾಲೂಕಿನ ಅನೇಕ ಪ್ರದೇಶಗಳಲ್ಲಿ ಈಗ ಧಾರಾಕಾರ ಮಳೆ ಸುರಿಯುತ್ತಿದೆ. ಆ ನೀರು ಕಬಿನಿ ಒಡಲು ಸೇರಿದರೆ ಆಕೆಯ ರೌದ್ರನರ್ತನ ಇನ್ನೆಷ್ಟು ಭಯಾನಕವಾದೀತು ಎಂಬುದು ನದಿತೀರದ ಗ್ರಾಮಸ್ಥರ ಆತಂಕವಾಗಿದೆ.

ಮುನ್ನೆಚ್ಚರಿಕೆ: ಕಬಿನಿಯಲ್ಲಿ ಹೊರ ಬಿಟ್ಟಿರುವ ಅಧಿಕ ನೀರು ಹಾಗೂ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಬಂದರೂ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತಾಲೂಕು ಆಡಳಿತ ಕೈಗೊಂಡಿದೆ. ಕಬಿನಿ ಜಲಾಶಯದಿಂದ ಮತ್ತೆ ಭಾರೀ ಪ್ರಮಾಣದ ನೀರು ಹೊರ ಬಿಡುತ್ತಿರುವ ವಿಷಯ ತಿಳಿದ ಕೂಡಲೇ ಕಂದಾಯ ಮತ್ತು ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಕಾ ಕ್ರಮ ಕೈಗೊಳ್ಳಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ತಹಶೀಲ್ದಾರ್‌ ದಯಾನಂದ್‌ ಹೇಳಿದರು.

ಬೊಕ್ಕಳ್ಳಿ ಸಂತ್ರಸ್ತರ ಶಿಬಿರ ಮುಂದುವರಿಕೆ: ಕಳೆದ ವಾರ ಪ್ರವಾಹದ ವೇಳೆ ಇಲ್ಲಿನ ಸರ್ಕಾರಿ ಶಾಲೆಯಲ್ಲಿ  ಪ್ರಾರಂಭಿಸಿದ್ದ ಸಂತ್ರಸ್ತರ ಶಿಬಿರ ಮತ್ತೆ ಮುಂದುವರಿಸಲಾಗಿದೆ. ಪ್ರವಾಹ ನಿರಾಶ್ರಿತರು ಮಂಗಳವಾರ ಹಾಗೂ ಬುಧವಾರ  ರಾತ್ರಿ ಮನೆಗೆ ತೆರಳಿದ್ದರು. ಇಂದಿನಿಂದ ಮತ್ತೆ ಪ್ರವಾಹ ಮರುಕಳಿಸುತ್ತಿರುವ ಕಾರಣ ಅವರಿಗೆ ಶಾಲೆಯಲ್ಲೆ ಮಲಗಲು ತಿಳಿಸಲಾಗಿದೆ. ಹಾಗೆಯೇ ತಾತ್ಕಾಲಿಕ ಆರೋಗ್ಯ ಕೇಂದ್ರದ ಸೇವೆಯೂ ಮುಂದುವರಿಯಲಿದೆ ಎಂದು ಉಪ ತಹಶೀಲ್ದಾರ್‌ ಬಾಲಸುಬ್ರಹ್ಮಣ್ಯ ತಿಳಿಸಿದ್ದಾರೆ.

ಸಂಚಾರ ಸ್ಥಗಿತ: ಮೈಸೂರು ನಗರಕ್ಕೆ ಕೇವಲ 24 ಕಿಲೋ ಮೀಟರ್‌ ದೂರದಲ್ಲಿರುವ ನಂಜನಗೂಡು ಈಗ ಮತ್ತೆ ಪ್ರವಾಹಕ್ಕೆ ಸಿಲುಕುವ ಭೀತಿ ಇದೆ. ಗುರುವಾರ ಮಧ್ಯಾಹ್ನ ಕಬಿನಿ ಜಲಾಶಯದಿಂದ ಅಧಿಕ ನೀರು ಹೊರ ಬಿಟ್ಟಿರುವ ಕಾರಣ ಮತ್ತೆ ಮೈಸೂರು-ನಂಜನಗೂಡಿನ ರಾಷ್ಟ್ರೀಯ ಹೆದ್ದಾರಿ 766 ಮಲ್ಲನಮೂಲೆ ಬಳಿ ಜಲಾವೃತಗೊಳ್ಳುವುದರಿಂದ ಸಂಚಾರ ಸ್ಥಗಿತಗೊಳಿಸಿದೆ.

ಭೇಟಿ ನೀಡದ ಜನಪ್ರತಿನಿಧಿಗಳು: ತಾಲೂಕಿನ ಸಹಸ್ರಾರು ಎಕರೆ ಕೃಷಿ ಭೂಮಿ ನೀರಿನಲ್ಲಿ ಮುಳುಗಿ ಬೆಳೆಹಾನಿಯಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಆಥವಾ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳಾರೂ ಆಗಮಿಸಿಲ್ಲ ಎಂದು ಪ್ರವಾಹ ಪೀಡಿತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.