ಕಾವೇರಿ, ಕಬಿನಿ, ಕಪಿಲೆ ರೌದ್ರಾವತಾರಕ್ಕೆ ಜನತೆ ತತ್ತರ 


Team Udayavani, Aug 19, 2018, 11:23 AM IST

m1-kaveri.jpg

ಕೇರಳ, ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೈಸೂರು ಜಿಲ್ಲೆ ಹಾಗೂ ಚಾಮರಾಜನಗರದ ಹಲವು ಗ್ರಾಮಗಳು ತತ್ತರಿಸಿ ಹೋಗಿವೆ. ಕೆಆರ್‌ಎಸ್‌ನಿಂದ 1.27 ಲಕ್ಷ ಕ್ಯೂಸೆಕ್‌, ಕಬಿನಿಯಿಂದ 76,250 ಕ್ಯೂಸೆಕ್‌ ನೀರನ್ನು  ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳು ಜಲಾವೃತಗೊಂಡಿದ್ದು, ಸಹಸ್ರಾರು ಎಕರೆ ಗದ್ದೆಗಳು ಮುಳುಗಿ ಹೋಗಿವೆ. ನೂರಾರು ಮನೆಗಳು ಕುಸಿದಿವೆ. ಪ್ರವಾಹದಿಂದ ಜನರು ಬೀದಿಪಾಲಾಗಿದ್ದು, ಕೆಲವಡೆ ಗಂಜಿ ಕೇಂದ್ರ ತೆರೆಯಲಾಗಿದೆ. ನೆರೆ ಪ್ರದೇಶಕ್ಕೆ ಸಚಿವರಾದ ದೇಶಪಾಂಡೆ, ಜಿ.ಟಿ. ದೇವೇಗೌಡ, ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌ ಭೇಟಿ ನೀಡಿ ಪರಿಶೀಲಿಸಿದರು. ನೆರೆ ಸಂತ್ರಸ್ತರಿಗೆ ನೆರವು ನೀಡಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಮಳೆಗೆ ನಲುಗಿತು ಮೈಸೂರು ಜಿಲ್ಲೆ
ಮೈಸೂರು:
ಕೇರಳ ಹಾಗೂ ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೈಸೂರು ಜಿಲ್ಲೆಯೂ ನಲುಗಿ ಹೋಗಿದ್ದು, ನೂರಾರು ಎಕರೆ ಜಮೀನು ಜಲಾವೃತವಾಗಿ, ಜನಜೀವನ ಅಸ್ತವ್ಯಸ್ತವಾಗಿ ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಕೇರಳದ ವೈನಾಡು ಪ್ರದೇಶ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ 81,091 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, 2284 ಅಡಿ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಹೆಚ್ಚಿನ ಒಳ ಹರಿವು ಬರುತ್ತಿರುವುದರಿಂದ ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಶನಿವಾರ ಮುಂಜಾನೆ 4ಗಂಟೆ ವೇಳೆಗೆ ಜಲಾಶಯದಿಂದ ನದಿಗೆ 75 ಸಾವಿರ ಕ್ಯೂಸೆಕ್‌ ಹಾಗೂ ನಾಲೆಗಳಿಗೆ 1250 ಕ್ಯೂಸೆಕ್‌ ಸೇರಿದಂತೆ ಒಟ್ಟಾರೆ 76,250 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದ್ದು, ಇದರ ಪರಿಣಾಮ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.

ಇದರಿಂದಾಗಿ ಕಪಿಲಾ ನದಿ ಪಾತ್ರದಲ್ಲಿ ಬರುವ ನಂಜನಗೂಡು, ತಿ.ನರಸೀಪುರ ತಾಲೂಕುಗಳಲ್ಲಿ ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ತಿ.ನರಸೀಪುರದಿಂದ ಇತಿಹಾಸ ಪ್ರಸಿದ್ಧ ತಲಕಾಡು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಹೆಮ್ಮಿಗೆ ಸೇತುವೆ ಮುಳುಗಡೆಯಾಗಿರುವುದರಿಂದ ಸೇತುವೆ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರೈತರು ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ. ಜೊತೆಗೆ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದರಿಂದ ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದ ಗಿರಿಜಾ ಕಲ್ಯಾಣ-ದಾಸೋಹ ಭವನದಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರದಲ್ಲಿ ಇವರಿಗೆ ಪುನರ್‌ವಸತಿ ಕಲ್ಪಿಸಲಾಗಿದೆ.

ಸಚಿವದ್ವಯರ ಭೇಟಿ:  ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಶನಿವಾರ, ಕಪಿಲಾ ನದಿ ಪ್ರವಾಹದಿಂದ ಹಾನಿಗೊಳಗಾದ ನಂಜನಗೂಡು ತಾಲೂಕು ವ್ಯಾಪ್ತಿಯ ಮೈಸೂರು-ಊಟಿ ಹೆದ್ದಾರಿಯಲ್ಲಿ ಬರುವ ಮಲ್ಲನಮೂಲೆ ಮಠ, ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದ ಮುಡಿಕಟ್ಟೆ, ತೋಪಿನ ಬೀದಿ, ತೇರಿನ ಬೀದಿ, ಹಳ್ಳದಕೇರಿ, ಒಕ್ಕಲಗೇರಿ, ಸರಸ್ವತಿ ಕಾಲೋನಿ, ಹೆಜ್ಜಿಗೆ ಸೇತುವೆ, ಚಿಕ್ಕಯನ್ನ ಛತ್ರ ಹೋಬಳಿಯ ಬೊಕ್ಕಹಳ್ಳಿ, ಕುಳ್ಳಂಕನ ಹುಂಡಿ, ಬಿಳಿಗೆರೆ ಹೋಬಳಿಯ ಸುತ್ತೂರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯಕ್ಕೆ 1.14 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ಒಳ ಹರಿವು ಬರುತ್ತಿದೆ. 124.80 ಅಡಿ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥ್ಯದ ಕೆಆರ್‌ಎಸ್‌ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದ ಜಲಾಶಯದ ಸುರಕ್ಷತೆ ದೃಷ್ಟಿಯಿಂದ 1.27 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ತಿ.ನರಸೀಪುರ ತಾಲೂಕಿನಲ್ಲಿ ನೂರಾರು ಎಕರೆ ಗದ್ದೆ ಜಲಾವೃತವಾಗಿದೆ. 

ಕೆ.ಆರ್‌.ನಗರದಲ್ಲೂ ಪ್ರವಾಹ: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಕೆ.ಆರ್‌.ನಗರ ತಾಲೂಕಿನಲ್ಲೂ ಪ್ರವಾಹ ಭೀತಿ ಎದುರಾಗಿದ್ದು, ತಾಲೂಕಿನ ಹನಗೋಡು ಗ್ರಾಮದಲ್ಲಿರುವ ಈಶ್ವರ ದೇವಸ್ಥಾನ ಮುಳುಗಡೆಯಾಗಿದೆ. ಕೆ.ಆರ್‌.ನಗರ ಪಟ್ಟಣದ ಸುತ್ತಮುತ್ತಲಿನ ಹಳೆ ಎಡತೊರೆ, ಸನ್ಯಾಸಿಪುರ, ಹಂಪಾಪುರ, ಕಪ್ಪಡಿ, ಹಳೇ ಕಪ್ಪಡಿ ಗ್ರಾಮಗಳಲ್ಲಿ ನೆರೆ ಬಂದಿದ್ದು, ನೂರಾರು ಎಕರೆ ಗದ್ದೆ ಜಲಾವೃತವಾಗಿದೆ. ಕಪ್ಪಡಿಯ ರಾಚಪ್ಪಾಜಿ ದೇವಸ್ಥಾನದ ಸನ್ನಿಧಿವರೆಗೂ ನೀರು ನುಗ್ಗಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.