CONNECT WITH US  

ದಸರಾಗೆ ಹೊಸತನದ ಕಾರ್ಯಕ್ರಮಗಳ ಆಯೋಜನೆ

ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು ಸರ್ಕಾರ ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಿರುವುದರಿಂದ ಹೊಸತನದಿಂದ ಕೂಡಿದ ಹಾಗೂ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹೇಳಿದರು.

ನಾಡಹಬ್ಬ ದಸರಾ ಆಚರಣೆ ಹಿನ್ನೆಲೆಯಲ್ಲಿ ಅರಮನೆ ಮಂಡಳಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ರೈತ ದಸರಾ, ಮಹಿಳಾ ದಸರಾ, ಆಹಾರ ಮೇಳ, ದಸರಾ ಕವಿಗೋಷ್ಠಿ, ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಆಯೋಜಿಸಬೇಕಾದ ಕಾರ್ಯಕ್ರಮಗಳು ಸೇರಿದಂತೆ ಈ ಬಾರಿ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮತ್ಸéಪ್ರದರ್ಶನ, ಪ್ರೀತಿಯ ಪ್ರಾಣಿ-ಪಕ್ಷಿಗಳ ಪ್ರದರ್ಶನ (ಪೆಟ್‌ ಶೋ), ವಿವಿಧ ತಳಿಗಳ ಸಾಕು ಪ್ರಾಣಿಗಳ ಪ್ರದರ್ಶನ, ಕವಿ, ಕಿರುಚಿತ್ರ ತಯಾರಿಕೆ ಕುರಿತು ಕಾರ್ಯಾಗಾರ ಆಯೋಜಿಸುವುದು. ಚಲನಚಿತ್ರೋತ್ಸವದ ಸಂದರ್ಭದಲ್ಲಿ ಕೆಲವು ನಿರ್ದಿಷ್ಟ ವಿಷಯಗಳ ಬಗ್ಗೆ ಸಂವಾದ ಏರ್ಪಡಿಸುವುದು.

ಅರಮನೆ ಆವರಣದಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸುವುದು ಸೇರಿದಂತೆ ದಸರೆಯ 9 ದಿನಗಳ ಕಾಲ ಪ್ರವಾಸಿಗರು ಮತ್ತು ಸಾರ್ವಜನಿಕರನ್ನು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚರ್ಚೆ ನಡೆಸಿದರು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ್‌, ಗ್ರಂಥಾಲಯ ಇಲಾಖೆ ಉಪ ನಿರ್ದೇಶಕ ಮಂಜುನಾಥ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದ್ರು,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಕೆ.ರಾಧಾ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಅಜಿತ್‌ ಕುಮಾರ್‌, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಹಬಿಬಾ ನಿಶಾತ್‌, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್‌.ಸುಬ್ರಹ್ಮಣ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್‌.ರಾಜು ಉಪಸ್ಥಿತರಿದ್ದರು.

Trending videos

Back to Top