ಈಶ್ವರ ದೈತೋಟಗೆ ತಾತಯ್ಯ ಪ್ರಶಸ್ತಿ ಪ್ರದಾನ

Team Udayavani, Sep 9, 2018, 11:17 AM IST

m5-eshwar.jpg

ಮೈಸೂರು: ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶಿಷ್ಟ ಕೊಡುಗೆ ನೀಡಿರುವ ಎಂ.ವೆಂಕಟಕೃಷ್ಣಯ್ಯ (ತಾತಯ್ಯ )ಅವರ ಹೆಸರಿನಲ್ಲಿ ಪುಸ್ತಕ ಹೊರತಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಕಾಲೇಜುಗಳಲ್ಲಿ ಅಧ್ಯಯನಕ್ಕೆ ಅಳವಡಿಸಲಿ ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಸಲಹೆ ನೀಡಿದರು.

ಅನಾಥಾಲಯ ಹಾಗೂ ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ವತಿಯಿಂದ ಎಂ.ವೆಂಕಟಕೃಷ್ಣಯ್ಯ ಅವರ 174ನೇ ಜಯಂತಿ ಪ್ರಯುಕ್ತ ಶನಿವಾರ ಶಾರದಾ ವಿಲಾಸ ಕಾನೂನು ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಎಂ.ವೆಂಕಟಕೃಷ್ಣಯ್ಯ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ತಾತಯ್ಯ ಅಪಾರ ಕೊಡುಗೆ ನೀಡಿದ್ದಾರೆ. ಅವರ ಹೆಸರಿನಲ್ಲೇ ಒಂದು ಪುಸ್ತಕ ಹೊರತರಬೇಕಿದೆ. ಅದರಲ್ಲಿ ತಾತಯ್ಯ ಅವರ ಪತ್ರಿಕೋದ್ಯಮ ಸಾಧನೆ, ಅಭ್ಯುದಯ ಪತ್ರಿಕೋದ್ಯಮ ಕಲ್ಪನೆ ಮತ್ತು ಅದರ ಪರಿಣಾಮ ಕುರಿತು ಅಧ್ಯಯನ ಮಾಡುವಂತಹ ವಿಷಯಗಳಿರಬೇಕು. ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಕಾಲೇಜುಗಳಲ್ಲಿ ಪುಸ್ತಕವನ್ನು ವಿದ್ಯಾರ್ಥಿಗಳ ಅಧ್ಯಯನಕ್ಕೆ ಇಡಬೇಕು. 

ಮಹಾತ್ಮ ಗಾಂಧೀಜಿಗೂ ಮೊದಲು ತಾತಯ್ಯ ಪತ್ರಿಕೋದ್ಯಮ ಶುರುಮಾಡಿದ್ದರು. ಅವರ ಪತ್ರಿಕೋದ್ಯಮ ಪ್ರಯೋಗ ರಾಷ್ಟ್ರಮಟ್ಟದಲ್ಲಿ ದಾಖಲಿಸಬಹುದಾದದ್ದು. ಜನತೆಗೆ ಮಾಹಿತಿ, ತಿಳಿವಳಿಕೆ ನೀಡುವುದರ ಜತೆಗೆ ಪ್ರೋತ್ಸಾಹಕ ಬರಹಗಳನ್ನೂ ಬರೆದರು. ವಿಧವಾ ವಿವಾಹ, ದಲಿತೋದ್ಧಾರ, ಗ್ರಾಮೀಣ ಜನರ ಶಿಕ್ಷಣದ ಅಗತ್ಯತೆ ಕುರಿತು ವಿಚಾರ ಮಾಡುತ್ತಿದ್ದರು ಎಂದರು. 

ವಿದ್ವಾಂಸ ಡಾ.ಟಿ.ವಿ. ವೆಂಕಟಾಚಲಶಾಸಿ ಮಾತನಾಡಿ, ಬೆಂಗಳೂರಿನಲ್ಲಿ ಗೋಖಲೆ ಅವರ ಜೀವನ, ಸಾಧನೆ ಪ್ರಚಾರಕ್ಕೆ ಗೋಖಲೆ ಸಾರ್ವಜನಿಕ ಸಂಸ್ಥೆಯನ್ನು ಡಿ.ವಿ.ಗುಂಡಪ್ಪ ಸ್ಥಾಪಿಸಿದರು. ಅದೇ ರೀತಿ ಮೈಸೂರಿನಲ್ಲಿ ವೆಂಕಟಕೃಷ್ಣಯ್ಯ ಇನ್‌ಸ್ಟಿಟ್ಯೂಟ್‌ ಆಫ್ ಪಬ್ಲಿಕ್‌ ಅಫೇರ್ ಸ್ಥಾಪಿಸಿ ಅವರ ಚಿಂತನೆ ಪ್ರಚಾರ ಮಾಡುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಅಧ್ಯಕ್ಷ ಬಿ.ಎಸ್‌.ಪಾರ್ಥಸಾರಥಿ, ಅನಾಥಾಲಯ ಉಪಾಧ್ಯಕ್ಷ ಸಿ.ವಿ.ಗೋಪಿನಾಥ್‌, ಪ್ರೊ. ಶ್ರೀಧರಮೂರ್ತಿ, ಅನಾಥಾಲಯ ಕಾರ್ಯಕಾರಿ ಮಂಡಳಿ ಸದಸ್ಯ ಪ್ರೊ.ಸತ್ಯನಾರಾಯಣ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.