CONNECT WITH US  

ಶಾಸಕರ ಕಚೇರಿ ಆರಂಭಿಸಿದ ರಾಮದಾಸ್‌

ಮೈಸೂರು: ನಗರದ ಕಾವೇರಿ ಅಚ್ಚುಕಟ್ಟು ಪ್ರಾಧಿಕಾರ (ಕಾಡಾ) ಕಚೇರಿಯಲ್ಲಿ ಆರಂಭಿಸಲಾದ ಶಾಸಕ ಎಸ್‌.ಎ.ರಾಮದಾಸ್‌ ಅವರ ಶಾಸಕರ ಕಚೇರಿಯನ್ನು ಶನಿವಾರ ವಿಧಾನಪರಿಷತ್‌ ಮಾಜಿ ಸದಸ್ಯ ತೋಂಟದಾರ್ಯ  ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಸ್‌.ಎ.ರಾಮದಾಸ್‌, ಎಲ್ಲಾ  ಇಲಾಖೆಗಳ ನಿರಂತರ ಸಂಪರ್ಕಕ್ಕೆ ಕಚೇರಿ ವ್ಯವಸ್ಥೆಯಿಂದ ಅನುಕೂಲವಾಗಲಿದೆ. ಕೆ.ಆರ್‌.ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಅದಕ್ಕೆ ಪೂರಕವಾಗಿ ಕಚೇರಿಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಬೆಳಗ್ಗೆ 9ರಿಂದ ರಾತ್ರಿ 7ರವರೆಗೆ ಕಚೇರಿ ತೆರೆದಿರಲಿದ್ದು, ಕಚೇರಿಗೆ ಜನಸಾಮಾನ್ಯರು ತಮ್ಮ ಕುಂದು-ಕೊರತೆ ಸಂಬಂಧ ಮನವಿ ಸಲ್ಲಿಸಬಹುದು. ಸಾರ್ವಜನಿಕರು ತಮ್ಮನ್ನು ಖುದ್ದು ಭೇಟಿ ಮಾಡಬಹುದು. ತ್ವರಿತಗತಿಯಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ, ನಗರ ಅಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌, ಜಿಲ್ಲಾ ಬ್ರಾಹ್ಮಣರ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್‌, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.


Trending videos

Back to Top