ದಸರಾ ಸಾಂಸ್ಕೃತಿಕ ಮೆರವಣಿಗೆ ವೈಭವ

Team Udayavani, Oct 15, 2018, 11:36 AM IST

m1-dasara.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಮೆರವಣಿಗೆ (ಜಂಬೂಸವಾರಿ)ಗೆ ಪೂರ್ವಭಾವಿಯಾಗಿ ಜಿಲ್ಲಾಡಳಿತ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಮೆರವಣಿಗೆ ಯಶಸ್ವಿಯಾಗಿ ನಡೆಯಿತಾದರೂ ನಿರೀಕ್ಷಿಸಿದಷ್ಟು ಜನರ ಗಮನ ಸೆಳೆಯುವಲ್ಲಿ ವಿಫ‌ಲವಾಯಿತು.

ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ಥಳೀಯ ಕಲಾವಿದರರಿಗೆ ಹೆಚ್ಚಿನ ಅವಕಾಶ ಸಿಗುವುದಿಲ್ಲ ಹಾಗೂ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಅಂದು ಪ್ರವಾಸಿಗರ ದಂಡೇ ನೆರೆಯುವುದರಿಂದ ಸ್ಥಳೀಯ ಜನರು ಮೆರವಣಿಗೆ ನೋಡಲಾಗುತ್ತಿಲ್ಲ ಎಂಬ ಹಲವು ವರ್ಷಗಳ ಕೊರಗನ್ನು ಹೋಗಲಾಡಿಸಲು ಸಾಂಸ್ಕೃತಿಕ ಮೆರವಣಿಗೆ ಆಯೋಜಿಸಲಾಗಿತ್ತು. 

ಆದರೆ, ಮೊದಲ ಪ್ರಯತ್ನ ಆಗಿದ್ದರಿಂದ ಜಿಲ್ಲಾಡಳಿತ ನಿರೀಕ್ಷಿಸಿದಷ್ಟು ಜನರಿಂದ ಪ್ರತಿಕ್ರಿಯೆ ಸಿಗಲಿಲ್ಲ. ಸಾಂಸ್ಕೃತಿಕ ಮೆರವಣಿಗೆಯಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ ಸೇರಿದಂತೆ ಹತ್ತು ಆನೆಗಳನ್ನು ಬಳಸಿಕೊಳ್ಳಲಾಗಿತ್ತು. 73 ಕಲಾ ತಂಡಗಳನ್ನು ಪಟ್ಟಿ ಮಾಡಲಾಗಿತ್ತಾದರೂ ಕಲಾತಂಡಗಳ ಸಂಖ್ಯೆ 35 ನ್ನೂ ದಾಟಲಿಲ್ಲ. ಯುವ ಸಂಭ್ರಮದಲ್ಲಿ ಭಾಗವಹಿಸಿದ್ದ ತಂಡಗಳು ಹಾಗೂ ಕಾಲೇಜು ವಿದ್ಯಾರ್ಥಿಗಳ 38 ತಂಡಗಳು ಭಾಗವಹಿಸಲಿವೆ ಎಂದು ಪಟ್ಟಿಮಾಡಲಾಗಿತ್ತಾದರೂ ಮೆರವಣಿಗೆಯಲ್ಲಿ ಸಾಗಿದ್ದು ಎರಡೇ ತಂಡಗಳು.

ಸಂಘಟಕರ ನಡುವಿನ ಸಮನ್ವಯದ ಕೊರತೆಯಿಂದಾಗಿ ಮೆರವಣಿಗೆಯುದ್ದಕ್ಕೂ ಗಾಂಭೀರ್ಯತೆ ಇಲ್ಲದೆ ಒಂದು ಕಲಾ ತಂಡದಿಂದ ಮತ್ತೂಂದು ತಂಡದ ನಡುವೆ ಸಾಕಷ್ಟು ಅಂತರ ಇರುತ್ತಿದ್ದರಿಂದ ಜನರ ಗಮನ ಸೆಳೆಯುವಲ್ಲಿ ವಿಫ‌ಲವಾಯಿತು.

ನಂದಿಧ್ವಜಕ್ಕೆ ಪೂಜೆ: ಮಧ್ಯಾಹ್ನ 2 ರಿಂದ 2.30ಗಂಟೆಯೊಳಗೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಬೇಕಿದ್ದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಆಗಮಿಸಿದ್ದೇ 2.45ಕ್ಕೆ ಅವರ ಜೊತೆಗೂಡಿದ ಸಚಿವ ಜಿ.ಟಿ.ದೇವೇಗೌಡ ಅವರು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿ ಅರಮನೆ ಆವರಣಕ್ಕೆ ತೆರಳಿದರು.

ಮೊದಲಿಗೆ ನಾದಸ್ವರ, ಕೊಂಬು ಕಹಳೆ, ವೀರಗಾಸೆ ತಂಡಗಳು ತೆರಳಿದ ನಂತರ ನಿಶಾನೆ ಆನೆಗಳಾದ ಬಲರಾಮ ಮತ್ತು ಅಭಿಮನ್ಯು ಒಂದರ ಹಿಂದೆ ಒಂದು ಸಾಗಿದರೆ, ನೌಪತ್‌ ಆನೆಗಳಾದ ಪ್ರಶಾಂತ, ಚೈತ್ರ, ಧನಂಜಯ, ದ್ರೋಣ, ವಿಜಯ ಆನೆಗಳು ಒಟ್ಟಾಗಿ ಸಾಗಿದವು.

ಅವುಗಳ ಹಿಂದೆ ಪೂಜಾ ಕುಣಿತ, ನಾಸಿಕ್‌ ಡೋಲು, ಕತ್ತಿ ವರಸೆ, ದೊಣ್ಣೆ ವರಸೆ, ದಕ್ಷಿಣ ವಲಯ ಸಾಂಸ್ಕೃತಿಕ ಕಲಾ ತಂಡ, ಗಾರುಡಿ ಗೊಂಬೆ, ಫ‌ಲಕ ಕುಣಿತ, ಸೋಮನ ಕುಣಿತ, ಮಾರಿ ಕುಣಿತ, ಗೊರವರ ಕುಣಿತ, ಡೊಳ್ಳು ಕುಣಿತ, ಗೊರಕಾನ ನೃತ್ಯ, ತಮಟೆ-ನಗಾರಿ, ಝಾಂಜ್‌ ಪಥಕ್‌, ಪಟ ಕುಣಿತ, ಕಂಸಾಳೆ, ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡಗಳು, ನಾದಸ್ವರ ತಂಡಗಳು ಮೆರವಣಿಗೆಯಲ್ಲಿ ಸಾಗಿದವು.

ಮಧ್ಯಾಹ್ನ 3.10ಕ್ಕೆ ಅರಮನೆಯ ಬಲರಾಮ ದ್ವಾರದಿಂದ ವೀರಗಾಸೆ ತಂಡ ಹೊರ ಬಂದರೆ, 3.55ಕ್ಕೆ ಕೊನೆಯದಾಗಿ ನಾದಸ್ವರ ತಂಡ ಹೊರಬಂತು. ಸಂಜೆ 5.20ಕ್ಕೆ ಬನ್ನಿಮಂಟಪ ಮೈದಾನ ತಲುಪಿತು.

ಪುಷ್ಪಾರ್ಚನೆ: ಬಣ್ಣ ಬಣ್ಣದ ಚಿತ್ತಾರಗಳು, ಝರಿ ಪೋಷಾಕುಗಳಿಂದ ಅಲಂಕೃತನಾಗಿ ಎಡ-ಬಲಕ್ಕೆ ಕಾವೇರಿ, ವರಲಕ್ಷ್ಮೀಯರನ್ನಿಟ್ಟುಕೊಂಡು ಬಂದ ಕ್ಯಾಪ್ಟನ್‌ ಅರ್ಜುನನಿಗೆ ಮಧ್ಯಾಹ್ನ 3.44ಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮತ್ತು ಅವರ ಪತ್ನಿ ಕನ್ನಿಕಾ ಪರಮೇಶ್ವರಿ ಮಂಗಳವಾದ್ಯದೊಂದಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಈ ವೇಳೆಗೆ ಕುಶಾಲತೋಪು ಹಾರಿಸಲಾಯಿತು. ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌, ಶಾಸಕ ಬಿ.ಹರ್ಷವರ್ಧನ್‌, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಜಿಪಂ ಸಿಇಒ ಕೆ.ಜ್ಯೋತಿ ಇತರರಿದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.