ದಸರಾ ವೀಕ್ಷಿಸಲು ಪ್ರವಾಸಿಗರ ದಂಡು

Team Udayavani, Oct 17, 2018, 11:29 AM IST

m4-dasara.jpg

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು, ನಗರಕ್ಕಾಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದ ಪ್ರಮುಖ ಪ್ರವಾಸಿತಾಣವಾದ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಪ್ರವಾಸಿಗರ ದಂಡೇ ಹರಿದು ಬಂದಿತು.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿರುವ ಭಕ್ತರು ಮಂಗಳವಾರ ಬೆಳಗ್ಗಿನಿಂದಲೇ ಚಾಮುಂಡಿಬೆಟ್ಟಕ್ಕೆ ಬೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಮುಂಜಾನೆಯಿಂದಲೇ ಅಪಾರ ಸಂಖ್ಯೆ ಭಕ್ತರು ಆಗಮಿಸಿದ ಪರಿಣಾಮ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಮುಗಿಬಿದ್ದರು. 100 ರೂ., 30 ರೂ. ಪಾವತಿಸಿ ಟಿಕೆಟ್‌ ಖರೀದಿಸಿದ ಭಕ್ತರ ಜತೆಗೆ ಧರ್ಮದರ್ಶನಕ್ಕಾಗಿ ನಿಂತಿದ್ದ ಭಕ್ತರ ಸಂಖ್ಯೆಯೂ ಹೆಚ್ಚಾಗಿತ್ತು.

ನವರಾತ್ರಿ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಅಮ್ಮನವರಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಪೂಜೆ ಮಾಡಲಾಗುತ್ತಿದೆ. ಹೀಗಾಗಿ ಅಧಿದೇವತೆಯ ದರ್ಶನಕ್ಕೆ ಹೊರ ರಾಜ್ಯ, ದೇಶಗಳಿಂದ ಪ್ರವಾಸಿಗರು ಬೆಟ್ಟಕ್ಕೆ ಆಗಮಿಸಿದ್ದರಿಂದ ಭಕ್ತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡು ಬಂದಿತು. 

ಬೆಟ್ಟಹತ್ತಿದ ಹರಿಪ್ರಿಯ: ಯುವದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೇಕ್ಷಕರ ಮನರಂಜಿಸಿದ್ದ ನಟಿ ಹರಿಪ್ರಿಯ ಬರಿಗಾಲಿನಲ್ಲಿ ಮೆಟ್ಟಿಲು ಹತ್ತಿ ಚಾಮುಂಡಿಬೆಟ್ಟಕ್ಕೆ ತೆರಳಿ, ಬೆಳ್ಳಂಬೆಳಗ್ಗೆ ಮೆಟ್ಟಿಲುಗಳನ್ನು ಹತ್ತಿ ಬೆಟ್ಟವನ್ನೇರಿದ ಹರಿಪ್ರಿಯ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರೆಂದರೆ ನನಗೆ ಇಷ್ಟದ ಊರು, ಬೆಟ್ಟ ಹತ್ತುವುದು ನನಗೆ ಇಷ್ಟ. ಎರಡನೇ ಬಾರಿಗೆ ಚಾಮುಂಡಿಬೆಟ್ಟ ಹತ್ತುತ್ತಿದ್ದೇನೆ ಎಂದರು. 

ಸಚಿವರಿಂದ ದರ್ಶನ: ನವರಾತ್ರಿ ಉತ್ಸವ ಹಿನ್ನೆಲೆಯಲ್ಲಿ ಸಚಿವರಾದ ಎಚ್‌.ಡಿ.ರೇವಣ್ಣ ಹಾಗೂ ಬಂಡೆಪ್ಪ ಕಾಶಂಪೂರ ಕುಟುಂಬ ಸಮೇತರಾಗಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.