ಪಾಲಿಕೆ ನೂತನ ಮೇಯರ್‌ ಪುಷ್ಪಲತಾ


Team Udayavani, Nov 18, 2018, 11:27 AM IST

m1-palike.jpg

ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಯಶಸ್ವಿಯಾಗಿದ್ದು, ಪಾಲಿಕೆಯ ನೂತನ  ಮೇಯರ್‌ ಆಗಿ 11ನೇ ವಾರ್ಡ್‌ ಕಾಂಗ್ರೆಸ್‌ ಸದಸ್ಯೆ ಪುಷ್ಪಲತಾ ಜಗನ್ನಾಥ್‌ ಹಾಗೂ ಉಪಮೇಯರ್‌ ಆಗಿ 31ನೇ ವಾರ್ಡಿನ ಜೆಡಿಎಸ್‌ನ ಸದಸ್ಯ ಶಫಿ ಅಹಮ್ಮದ್‌ ಆಯ್ಕೆಯಾದರು.

ಈ ಬಾರಿಯ ಮೇಯರ್‌ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್‌ ಸ್ಥಾನ ಬಿಸಿಎಗೆ ಮೀಸಲಾಗಿತ್ತು. ಮೈತ್ರಿ ಧರ್ಮದ ಆಧಾರದ ಮೇಲೆ ಕಾಂಗ್ರೆಸ್‌-ಜೆಡಿಎಸ್‌ ಕ್ರಮವಾಗಿ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನ ಅಲಂಕರಿಸಿದವು.

ನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣದಲ್ಲಿ ಶನಿವಾರ ನಡೆದ ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್‌ ಹಾಗೂ ಉಪ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್‌ನ ಶಫಿ ಅಹಮ್ಮದ್‌ ತಲಾ 48 ಮತ ಪಡೆದರು. ಆ ಮೂಲಕ ಪಾಲಿಕೆಯ 21ನೇ ಅವಧಿಗೆ ಮೇಯರ್‌ ಹಾಗೂ ಉಪ ಮೇಯರ್‌ ಆಗಿ ಆಯ್ಕೆಯಾದರು. 

ಕೈ ಎತ್ತುವ ಮೂಲಕ ಆಯ್ಕೆ: ಪ್ರಾದೇಶಿಕ ಆಯುಕ್ತರಾದ ಯಶವಂತ್‌ ಅವರ ಅಧ್ಯಕ್ಷತೆಯಲ್ಲಿ ಮೇಯರ್‌ ಹಾಗೂ ಉಪ ಮೇಯರ್‌ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಬೆಳಗ್ಗೆ 11.30ಕ್ಕೆ ಆರಂಭವಾದ ವಿಶೇಷ ಸಭೆಯಲ್ಲಿ ಮೇಯರ್‌ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಮೊದಲು ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರ ಆಯ್ಕೆಗಾಗಿ ಮತದಾನ ನಡೆಸಲಾಯಿತು. ಈ ವೇಳೆ ಬಿಜೆಪಿ ಅಭ್ಯರ್ಥಿ ಪರವಾಗಿ 24 ಹಾಗೂ ವಿರುದ್ಧವಾಗಿ 48 ಮಂದಿ ಮತ ಚಲಾಯಿಸಿದರು.

ಮೈತ್ರಿ ಪಕ್ಷದ ಅಭ್ಯರ್ಥಿ ಕಾಂಗ್ರೆಸ್‌ನ  ಪುಷ್ಪಲತಾ ಜಗನ್ನಾಥ್‌ ಪರವಾಗಿ 48 ಮಂದಿ ಮತಚಲಾಯಿಸಿದರೆ, ಇವರ ವಿರುದ್ಧವಾಗಿ ಮತ ಹಾಕಲಿಲ್ಲ. ಅಂತೆಯೇ ಉಪ ಮೇಯರ್‌ ಆಯ್ಕೆ ಪ್ರಕ್ರಿಯೆಯಲ್ಲೂ ಸಹ ಬಿಜೆಪಿ ಅಭ್ಯರ್ಥಿ ಪರವಾಗಿ 24 ಹಾಗೂ ವಿರುದ್ಧವಾಗಿ 48 ಮಂದಿ ಸದಸ್ಯರು ಮತ ಹಾಕಿದರೆ, ಜೆಡಿಎಸ್‌ನ ಶಫಿ ಅಹಮ್ಮದ್‌ ಪರ 48 ಮಂದಿ ಮತ ಹಾಕಿದರು. ಈ ಎರಡೂ ಸ್ಥಾನಗಳಿಗೂ ಕೈ ಎತ್ತುವ ಮೂಲಕ ಆಯ್ಕೆಗೆ ಅವಕಾಶ ನೀಡಲಾಯಿತು.

ಪುಷ್ಪಲತಾಗೆ ಒಲಿದ ಅದೃಷ್ಟ: ಪಾಲಿಕೆ ಮೇಯರ್‌ ಸ್ಥಾನ ಬಹುತೇಕ ಕಾಂಗ್ರೆಸ್‌ಗೆ ಎಂಬುದು ಶುಕ್ರವಾರ ಸಂಜೆ ವೇಳೆಗೆ ಖಚಿತವಾಗಿತ್ತು. ಆದರೆ ಮೇಯರ್‌ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಲ್ಲಿ ಶಾಂತಕುಮಾರಿ ಹಾಗೂ ಶೋಭಾ ಅವರು ಮೇಯರ್‌ ಸ್ಥಾನದ ರೇಸ್‌ನಲ್ಲಿದ್ದರು. ಈ ನಡುವೆ ಮೂರನೇ ಆಕಾಂಕ್ಷಿಯಾಗಿ ಪುಷ್ಪಲತಾ ಜಗನ್ನಾಥ್‌ ಸಹ ಮೇಯರ್‌ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು.

ಆದರೆ ಇವರಲ್ಲಿ ಯಾರಿಗೆ ಮೇಯರ್‌ ಪಟ್ಟ ನೀಡಬೇಕೆಂಬ ಜವಾಬ್ದಾರಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೆಗಲಿಗೆ ಕಟ್ಟಲಾಗಿತ್ತು. ಆದರೆ ಅಂತಿಮವಾಗಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಪುಷ್ಪಲತಾ ಜಗನ್ನಾಥ್‌, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಡಳಿತದ ಮೇಯರ್‌ ಆಗಿ ಆಯ್ಕೆಯಾದರು.

ನಾಮಪತ್ರ ಸಲ್ಲಿಕೆ: ಇದಕ್ಕೂ ಮುನ್ನ ಶನಿವಾರ ಬೆಳಗ್ಗೆ 7ರಿಂದ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆ ಪ್ರಕ್ರಿಯೆ ಆರಂಭವಾಯಿತು. ಈ ವೇಳೆ ಮೇಯರ್‌ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಪುಷ್ಪಲತಾ ಜಗನ್ನಾಥ್‌ ಹಾಗೂ ಉಪಮೇಯರ್‌ ಸ್ಥಾನಕ್ಕೆ ಜೆಡಿಎಸ್‌ನ ಶಫಿ ಅಹಮ್ಮದ್‌ ನಾಮಪತ್ರ ಸಲ್ಲಿಸಿದ್ದರು. ಪುಷ್ಪಲತಾ ಜಗನ್ನಾಥ್‌ಗೆ ಸೂಚಕರಾಗಿ ಅಯೂಬ್‌ ಖಾನ್‌, ಅನುಮೋದಕರಾಗಿ ಶೋಭಾ ಸುನೀಲ್‌ ಸಹಿ ಹಾಕಿದ್ದರು.

ಉಪ ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಜೆಡಿಎಸ್‌ನ ಶಫಿ ಅಹಮ್ಮದ್‌ಗೆ ಸೂಚಕರಾಗಿ ನಮ್ರತಾ ರಮೇಶ್‌, ಅನುಮೋದಕರಾಗಿ ಎಸ್‌ಬಿಎಂ ಮಂಜು ಸಹಿ ಹಾಕಿದ್ದರು. ಬಿಜೆಪಿಯಿಂದ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಸುನಂದಾ ಪಾಲನೇತ್ರಗೆ ಸೂಚಕರಾಗಿ ಬಿ.ವಿ.ಮಂಜುನಾಥ್‌, ಅನುಮೋದಕರಾಗಿ ಸತೀಶ್‌ ಸಹಿ ಹಾಕಿದ್ದರು. ಉಪ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಸತೀಶ್‌ ಅವರಿಗೆ ಸೂಚಕರಾಗಿ ಚಂಪಕಾ, ಅನುಮೋದಕರಾಗಿ ಸುನಂದಾ ಪಾಲನೇತ್ರ ಸಹಿ ಮಾಡಿದ್ದರು.

ರಾಮ್‌ಪ್ರಸಾದ್‌ ತಟಸ್ಥ: ನಗರ ಪಾಲಿಕೆ ಮೇಯರ್‌ ಹಾಗೂ ಉಪಮೇಯರ್‌ ಆಯ್ಕೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಮ.ವಿ.ರಾಮಪ್ರಸಾದ್‌ ತಟಸ್ಥರಾಗಿ ಉಳಿದರು. ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮ.ವಿ.ರಾಮಪ್ರಸಾದ್‌ ಮೇಯರ್‌ ಹಾಗೂ ಉಪ ಮೇಯರ್‌ ಸ್ಥಾನಕ್ಕಾಗಿ ಸ್ಪರ್ಧಿಸಿದ್ದ ಯಾವುದೇ ಪಕ್ಷದ ಅಭ್ಯರ್ಥಿಗಳಿಗೂ ಬೆಂಬಲ ನೀಡಲಿಲ್ಲ.

ಈ ಹಿಂದೆ ಬಿಜೆಪಿಯಲ್ಲಿದ್ದ ಮ.ವಿ.ರಾಮಪ್ರಸಾದ್‌ ಕಳೆದ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷೇತರ 6ನೇ ವಾರ್ಡಿನಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಟೋ ಚಿಹ್ನೆಯಲ್ಲಿ ಗೆದ್ದಿರುವ ಮ.ವಿ.ರಾಮಪ್ರಸಾದ್‌ ಮೈಸೂರು ಪೇಟ ಧರಿಸಿ, ಆಟೋದಲ್ಲಿ ನಗರ ಪಾಲಿಕೆಗೆ ಆಗಮಿಸಿದರು.

ಬಿಜೆಪಿ ಸಂಸದರ ಗೈರು: ಮೇಯರ್‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿಯ ಸದಸ್ಯರ ಜತೆಗೆ ಸ್ಥಳೀಯ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಬಿಜೆಪಿ ಸಂಸದ ಪ್ರತಾಪಸಿಂಹ ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆ ಚುನಾವಣೆಗೆ ಗೈರಾಗಿದ್ದರು. ಚುನಾವಣೆ ಪ್ರಕ್ರಿಯೆ ಮುಗಿಯುವ ವೇಳೆಗೆ ಪ್ರತಾಪಸಿಂಹ ಪಾಲಿಕೆಗೆ ಆಗಮಿಸಿದರು. ಆದರೆ  ಈ ಹೊತ್ತಿಗೆ ಚುನಾವಣಾ ಹಾಜರಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಮತಚಾಲಾಯಿಸಲು ಅವಕಾಶವಾಗಲಿಲ್ಲ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.