ನೋಟ್‌ಬ್ಯಾನ್‌ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Team Udayavani, Nov 20, 2018, 12:46 PM IST

m3-note.jpg

ಮೈಸೂರು: ನೋಟು ಅಮಾನ್ಯಿಕರಣ ಮಾಡಿ ಎರಡು ವರ್ಷ ಕಳೆದರೂ ದೇಶದ ಜನರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫ‌ಲವಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ಸ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. 

ನಗರದ ರೈಲ್ವೆ ನಿಲ್ದಾಣದ ಎದುರಿನ ಡಾ.ಬಾಬು ಜಗಜೀವನ್‌ ರಾಮ್‌ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ನೋಟ್‌ಬ್ಯಾನ್‌ ತೀರ್ಮಾನ ಕೈಗೊಂಡ ಸಂದರ್ಭದಲ್ಲಿ 50 ದಿನ ಕಾಲಾವಕಾಶ ನೀಡಿದರೆ ದೇಶದ ಆರ್ಥಿಕ ಪರಿಸ್ಥಿತಿ ಸರಿಪಡಿಸುವ ಭರವಸೆ ನೀಡಿದ್ದರು.

ಆದರೆ, ನೋಟ್‌ಬ್ಯಾನ್‌ ಆದೇಶ ಜಾರಿಯಾಗಿ ಎರಡು ವರ್ಷ ಕಳೆದರೂ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ ಹಾಗೂ ನೋಟ್‌ಬ್ಯಾನ್‌ನಿಂದ ಉಂಟಾಗಿದ್ದ ಸಮಸ್ಯೆಗಳು ಇಂದಿಗೂ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿಗೆ ತಕ್ಕಪಾಠ: ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ, ಭಯೋತ್ಪಾದನೆಗೆ ಕಡಿವಾಣ ಹಾಕುವ ಜತೆಗೆ ಕಪ್ಪುಹಣ ವಾಪಸ್‌ ತರುವ ಭರವಸೆಯೊಂದಿಗೆ ನೋಟ್‌ಬ್ಯಾನ್‌ ಮಾಡಿರುವುದಾಗಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ, ಅಪನಗದೀಕರಣ ನಂತರವೂ ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ.

ನೋಟ್‌ಬ್ಯಾನ್‌ನಿಂದಾಗಿ ಅಸಂಖ್ಯಾತ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದು, ಬಡವರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದವರ ಜನರ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿದೆ. ಬಹುತೇಕ ಸಣ್ಣ ಕೈಗಾರಿಕೆಗಳು ಮುಚ್ಚುವ ಸ್ಥಿತಿಗೆ ತಲುಪಿದ್ದು, ಮುಂದಿನ ಚುನಾವಣೆಯಲ್ಲಿ ದೇಶದ ಮತದಾರರು ಮೋದಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು. 

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮೋಸಿನ್‌ ಖಾನ್‌, ನಗರಾಧ್ಯಕ್ಷ ಡಿ. ರಾಜರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಕುರುಬಾರಹಳ್ಳಿ ಹೇಮಂತ್‌, ಪ್ರಮುಖರಾದ ಸೈಯದ್‌ ಖಾದರ್‌, ಲೋಕೇಶ್‌, ಸಂಪತ್‌, ಹಿನಕಲ್‌ ಮಂಜು, ಪ್ರವೀಣ್‌, ಬಸವಣ್ಣ, ಕೃಷ್ಣೇಗೌಡ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.