ಹೃದಯ ಶಸ್ತ್ರಚಿಕಿತ್ಸೆಗೆ ಬೆಂಗಳೂರಿಗೆ ಬರಬೇಕಿಲ್ಲ

Team Udayavani, Dec 18, 2018, 11:27 AM IST

m4-hrudaya.jpg

ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಪ್ರಾರಂಭವಾಗಿದ್ದು, ಈಗಾಗಲೇ 18 ಹೃದಯರೋಗಿಗಳಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು. ಮೈಸೂರಿನ ಕೆಆರ್‌ಎಸ್‌ ರಸ್ತೆಯ ಸ್ಯಾನಿಟೋರಿಯಂ ಆವರಣದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜಯದೇವ ಫಾರ್ಮ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

2018ರ ಆಗಸ್ಟ್‌ನಲ್ಲಿ ಪ್ರಾರಂಭವಾದ ಈ ಆಸ್ಪತ್ರೆಯಲ್ಲಿ ಎಲ್ಲಾ ವಿಭಾಗಗಳು ಕೆಲಸ ಮಾಡುತ್ತಿವೆ. ಹೃದಯ ಶಸ್ತ್ರಚಿಕಿತ್ಸೆಗೆ ಏನೇನು ಅತ್ಯಾಧುನಿಕ ಸೌಲಭ್ಯಗಳು ಇರಬೇಕೋ ಅವೆಲ್ಲವು ಮೈಸೂರು ಆಸ್ಪತ್ರೆಯಲ್ಲಿವೆ. ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿರುವ ಸೌಲಭ್ಯಗಳೆಲ್ಲವೂ ಇಲ್ಲಿ ಇವೆ. ರೋಗಿಗಳು ಬೆಂಗಳೂರಿಗೆ ಹೋಗುವ ಬದಲು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯಬಹುದು.

13 ಜನ ಹೃದ್ರೋಗ ತಜ್ಞರು, 5 ಜನ ಸರ್ಜನ್‌ಗಳು, 125 ಜನ ಸ್ಟಾಫ್ ನರ್ಸ್‌ ಇದ್ದಾರೆ. ಕಡು ಬಡವರು, ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಪಂಚತಾರಾ ಆಸ್ಪತ್ರೆಯ ಸೌಲಭ್ಯ ದೊರೆಯುತ್ತದೆ ಎಂದ ಅವರು, ಬೆಂಗಳೂರು, ಮೈಸೂರು, ಕಲುºರ್ಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ 50 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇವೆ. ಇದು ವಿಶ್ವದಾಖಲೆಯಾಗಿದೆ. 3 ಲಕ್ಷ ಜನರಿಗೆ ಸರ್ಜರಿ ಮತ್ತು ಕ್ಯಾತ್‌ಲ್ಯಾಬ್‌ ಪ್ರೊಸಿಜರ್ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾ.ರವೀಂದ್ರನಾಥ್‌, ಆರ್‌ಎಂಓ ಡಾ.ಪಾಂಡುರಂಗ, ಡಾ.ಸದಾನಂದ್‌, ಡಾ.ಹರ್ಷಬಸಪ್ಪ, ಡಾ.ಸಂತೋಷ್‌, ಡಾ ಹೇಮಾ ರವೀಶ್‌, ಡಾ.ವೀಣಾ ನಂಜಪ್ಪ, ಪಿಆರ್‌ಓಗಳಾದ ವೀಣಾ, ಚಂಪಕ ಮಾಲಾ, ನರ್ಸಿಂಗ್‌ ಅಧೀಕ್ಷಕ ಹರೀಶ್‌ ಹಾಜರಿದ್ದರು.

2 ಗಂಟೆಯೊಳಗೆ ಸಂಪೂರ್ಣ ರಿಪೋರ್ಟ್‌: 2,500 ರೂ. ಗೆ ಮಾಸ್ಟರ್‌ ಹೆಲ್ತ್‌ ಚೆಕಪ್‌ ಮಾಡಲಾಗುತ್ತದೆ. ರೋಗಿಯು ನೋಂದಣಿ ಮಾಡಿದ 2 ಗಂಟೆಯೊಳಗೆ ಸಂಪೂರ್ಣ ರಿಪೋರ್ಟ್‌ ಕೊಡಲಾಗುವುದು ಎಂದು ಡಾ. ಸಿ.ಎನ್‌.ಮಂಜುನಾಥ್‌ ತಿಳಿಸಿದರು. ಬೆಂಗಳೂರಿನಲ್ಲಿ 45 ಕೋಟಿ ರೂ. ವೆಚ್ಚದಲ್ಲಿ 120 ಹಾಸಿಗೆ ಸಾಮರ್ಥ್ಯದ ಹೊಸಕಟ್ಟಡ ಕಟ್ಟುತ್ತಿದ್ದೇವೆ.

ಕಲುºರ್ಗಿಯಲ್ಲಿಯೂ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ ಮಾಡುವ ಆಲೋಚನೆ ಇದೆ ಎಂದರು. ಮೈಸೂರು ಆಸ್ಪತ್ರೆಯಲ್ಲಿ 5 ಲಕ್ಷ ಜನ ಹೊರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. 40 ಸಾವಿರ ಜನ ಒಳರೋಗಿಗಳಿಗೆ ಚಿಕಿತ್ಸೆ ನೀಡಿದ್ದೇವೆ. ಪ್ರತಿದಿನ 400 ರಿಂದ 500 ಜನ ಹೊರರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಿಟಿ ಸ್ಕ್ಯಾನ್‌, ಎಂಆರ್‌ಐ ಸ್ಕ್ಯಾನ್‌ ಸೌಲಭ್ಯ ಕೂಡ ಇದೆ ಎಂದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.