CONNECT WITH US  

ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಗ್ಯಾಂಗ್ ರೇಪ್ ಗೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿ ...

ಮೈಸೂರು: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮೈಸೂರಿನ ನಜರಬಾದ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೊಳ್ಳೇಗಾಲಕ್ಕೆ ತೆರಳುವ ರಸ್ತೆಯ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಯುವತಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದ ನಾಲ್ವರು ಅತ್ಯಾಚಾರ ನಡೆಸಿರುವುದಾಗಿ ಯುವತಿ ದೂರು ನೀಡಿದ್ದಾಳೆ.

ಫೆಬ್ರುವರಿ 3ರಂದು ಈ ಘಟನೆ ನಡೆದಿತ್ತು. ಗ್ಯಾಂಗ್ ರೇಪ್ ಗೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿ ಮನೆಯವರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವಾಗಿದ್ದು, ಸ್ನೇಹಿತೆಯ ಜೊತೆ ತೆರಳಿ ನೊಂದ ಸಂತ್ರಸ್ತ ಯುವತಿ ಚಿಕಿತ್ಸೆ ಪಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದ ನಜರಾಬಾದ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.


Trending videos

Back to Top