ಕುಂಭಮೇಳದ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವ


Team Udayavani, Feb 17, 2019, 7:35 AM IST

m3-kumb.jpg

ತಿ.ನರಸೀಪುರ: ತಿರಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಭಾನುವಾರ ನಡೆಯಲಿರುವ ಕುಂಭಮೇಳದ ಅಂತಿಮ ಸಿದ್ಧತೆಯನ್ನು ಶನಿವಾರ ರಾತ್ರಿವರೆಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಪರಿಶೀಲಿಸಿದರು. ಶನಿವಾರ ಸಂಜೆ ಸಂಗಮಕ್ಕೆ ಅಧಿಕಾರಿಗಳೊಂದಿಗೆ ಆಗಮಿಸಿದ ಸಚಿವರು, ಕುಂಭಮೇಳದ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿ ಪಡೆದರು.

ನಂತರ ಸಭಾಮಂಟಪ, ಯಾಗ ಮಂಟಪ, ಗಣ್ಯರ ವಸತಿ ಗೃಹ ಸೇರಿದಂತೆ ವಿವಿಧ ಸ್ಥಳಗಳನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದೇವೇಗೌಡ, ಕುಂಭಮೇಳವನ್ನು ಬಹಳ ವಿಜೃಂಭಣೆಯಿಂದ ಆಚರಿಸಲು ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪರಮ ಪೂಜ್ಯರು ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕುಂಭಮೇಳಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಒದಗಿಸುವಂತೆ ಆದೇಶ ನೀಡಿದ್ದರು. ಆದರಂತೆ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಶ್ರೀಕ್ಷೇತ್ರದಲ್ಲಿ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. ಅಧಿಕಾರಿಗಳು ತಮಗೆ ನೀಡಿದ್ದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ ಎಂದು ಹೇಳಿದರು.

5ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ: ಮುಖ್ಯಮಂತ್ರಿಗಳು, ಸಚಿವರು, ಸಂಸದರಿಗೆ ಆಹ್ವಾನ ಪತ್ರ ನೀಡಲಾಗಿದೆ. ಮಹೋದಯ ಪುಣ್ಯ ಸ್ನಾನದ ದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವರಾದ ಎಚ್‌.ಡಿ.ರೇವಣ್ಣ, ಸಾ.ರಾ. ಮಹೇಶ್‌, ಡಿ.ಸಿ.ತಮ್ಮಣ್ಣ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಸಚಿವರು ಭಾಗವಹಿಸಲಿದ್ದಾರೆ. ಈ ಕುಂಭಮೇಳಕ್ಕೆ 5 ರಿಂದ 10 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ. ಕನಿಷ್ಠ 5 ಲಕ್ಷ ಮಂದಿಯಂತೂ ಈ ಮೇಳದಲ್ಲಿ ಭಾಗವಹಿಸುವ ವಿಶ್ವಾಸವಿದೆ ಎಂದು ಹೇಳಿದರು.

ವೀರಾ ಯೋಧರಿಗೆ ಶ್ರದ್ಧಾಂಜಲಿ: ಇದೇ ವೇಳೆ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ತುತ್ತಾದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುತ್ತಿದೆ. ದೇಶವನ್ನು ಕಾಯುವ ಯೋಧರು ತಮ್ಮ ರಕ್ಷಣೆಗೆ ಪ್ರಾಣ ತ್ಯಾಗ ಮಾಡಿದ್ದಾರೆ.

ಉಗ್ರರ ಈ ದಾಳಿ ನಿಜಕ್ಕೂ ಅಮಾನವೀಯ ಹಾಗೂ ಖಂಡನೀಯ. ಇಂತಹ ಘಟನೆಗಳು ಮರುಕಳಿಸಬಾರದು. ಯೋಧರಿಗೆ ಸಂತಾಪ ಸೂಚಿಸೋಣ. ಇದೇ ವೇಳೆ ಕುಂಭಮೇಳ ಬಂದಿದೆ. ನಾಡಿನ ಜನರ ಕಲ್ಯಾಣಕ್ಕಾಗಿ ಈ ಉತ್ಸವದಲ್ಲಿ ಎಲ್ಲರೂ ಭಾಗವಹಿಸೋಣ ಎಂದು ಮನವಿ ಮಾಡಿದರು.

ಶಾಸಕ ಎಂ.ಅಶ್ವಿ‌ನ್‌ಕುಮಾರ್‌, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌, ಆದಿಚುಂಚನಗಿರಿ ಶಾಖಾ ಮಠದ ಸೋಮನಾಥನಂದ ಸ್ವಾಮೀಜಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮಿತ್‌ಸಿಂಗ್‌, ತಹಶೀಲ್ದಾರ್‌ ಪಿ.ಎನ್‌.ನಾಗಪ್ರಶಾಂತ್‌, ತಾಪಂ ಇಒ ಡಾ.ನಂಜೇಶ್‌, ಜಿಪಂ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಂ, ಸದಸ್ಯ ಜಯಪಾಲ್‌ ಭರಣಿ, ಪುರಸಭಾ ಸದಸ್ಯರಾದ ಕಿರಣ್‌, ಟಿ.ಎಂ.ನಂಜುಂಡಸ್ವಾಮಿ, ಮುಖಂಡ ಸ್ವಾಮಿನಾಥ್‌ಗೌಡ, ಮರಯ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.