ಮರಳಿನಲ್ಲಿ ಅರಳಿದ ಸಿದ್ಧಗಂಗಾ ಶ್ರೀ

Team Udayavani, Feb 18, 2019, 7:27 AM IST

m5-marali.jpg

ತಿ.ನರಸಿಪುರ: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರಿಗೆ ಕುಂಭಮೇಳದಲ್ಲಿ ಮರಳು ಕಲಾಕೃತಿಯ ಮೂಲಕ ಕಲಾವಿದರು ಅಂತಿಮ ನಮನ ಸಲ್ಲಿಸಿದ್ದಾರೆ.

ತಿರುಮಕುಡಲು ಶ್ರೀ ಅಗಸ್ತೇಶ್ವರ ಸ್ವಾಮಿ ದೇವಸ್ಥಾನ ಸಮೀಪದ ಎದುರಿನಲ್ಲಿ  ಪ್ರತ್ಯೇಕವಾದ ಚಪ್ಪರ ನಿರ್ಮಿಸಿ ಅದರೊಳಗೆ ಸುಮಾರು 1.50 ಟನ್‌ ಮರಳು ಬಳಸಿ ಕಲಾವಿದ ಎನ್‌.ರಘುನಂದನ್‌ ಮತ್ತು ತಂಡದವರು ಈ ಕಲಾಕೃತಿಗಳನ್ನು ರಚಿಸಿದ್ದಾರೆ. 

ಸಿದ್ಧಗಂಗಾ ಮಠಾಧೀಶರಾಗಿದ್ದ  ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯರ ನಗುಮುಖವನ್ನು ಮರಳಿನಲ್ಲಿ ಕೆತ್ತಲಾಗಿದೆ. ಅದೇ ಮರಳಿನ ಗುಡ್ಡೆಯ ಹಿಂಭಾಗದಲ್ಲಿ ಸೈನ್ಯದ ಟೋಪಿ ಧರಿಸಿ, ಬಂದೂಕು ಹಿಡಿದರುವ ಇಬ್ಬರು ಸೈನಿಕರ ಮರಳು ಶಿಲ್ಪ ಸಿದ್ಧಪಡಿಸಲಾಗಿದೆ.

ಸುಮಾರು 12 ಗಂಟೆ ನಿರಂತರ ಶ್ರಮವಹಿಸಿರುವ ಕಲಾವಿದರು, ಸಿದ್ಧಗಂಗಾ ಸ್ವಾಮೀಜಿ ಮತ್ತು ಇತ್ತೀಚೆಗೆ ಹುತಾತ್ಮರಾದ ಸೈನಿಕರಿಗೆ ಕಲಾಕೃತಿಯ ಮೂಲಕ ನಮನ ಸಲ್ಲಿಸಿದ್ದಾರೆ. ಸೈನಿಕರ ತಲೆಯ ಮೇಲ್ಭಾಗದಲ್ಲಿ ಗೋಳಾಕಾರದ ಭೂಮಿ ಮತ್ತು ಅದರ ಮಧ್ಯದಲ್ಲಿ ಭಾರತದ ಭೂಪಟ ಮೂಡಿ ಬಂದಿದೆ.

ಅತ್ಯಂತ ನಾಜೂಕು ಹಾಗು ಅಚ್ಚುಕಟ್ಟಾಗಿ ಮರಳಿನಲ್ಲಿ ಕಲಾಕೃತಿಯನ್ನು ಬಿಡಿಸಲಾಗಿದೆ. ಇದು ಈಗ ಕುಂಭ ಮೇಳಾದ ಆಕರ್ಷಣೆಗಳಲ್ಲಿ ಒಂದಾಗಿದ್ದು ಭಕ್ತರು ಇದರ ಎದರು ನಿಂತು ಸೆಲ್ಫಿ ತೆಗೆಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಕುರಿತು ಮಾತನಾಡಿದ ಮರಳು ಶಿಲ್ಪಿ ಎನ್‌.ರಘುನಂದನ್‌, ಶಿಕ್ಷಣ, ಊಟ ಮತ್ತು ವಸತಿ ಕಲ್ಪಿಸಿ ಲಕ್ಷಾಂತರ ವಿದ್ಯಾರ್ಥಿಗ ಬಾಳ ಜ್ಯೋತಿಯಾಗಿ ಬೆಳಗುತ್ತಿರುವ- 

ಸಿದ್ಧಗಂಗೆಯ ಡಾ.ಶಿವಕುಮಾರ ಸ್ವಾಮೀಜಿಯ ಸ್ಮರಣೆಯನ್ನು ಮಣ್ಣಿನ ಕಲಾಕೃತಿ ಮೂಲಕ ಮಾಡಿದ್ದೇನೆ. ಹಾಗೆಯೇ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಸೈನಿಕರಿಗೆ ಸಲಾಂ ಸಲ್ಲಿಸಲು ಹಾಗೂ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಹೀನ ಕೃತ್ಯ ಖಂಡಿಸಿ, ಹುತಾತ್ಮರಾದ  ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯತ್ನ ಕಲೆಯ ಮೂಲಕ ಮಾಡಿದ್ದೇನೆ ಎಂದು ವಿವರಿಸಿದರು.

1.50 ಟನ್‌ ಮರಳು: ಯುವಬ್ರಿಗೇಡ್‌ ಸಂಘಟನೆಯವರು ಮರಳು ಮತ್ತು ಸ್ಥಳದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಸುಮಾರು 1.50 ಟನ್‌ ಮರಳು ಬಳಸಲಾಗಿದೆ. ನಿರಂತರ 12 ಗಂಟೆಗಳ ಶ್ರಮದಿಂದ ಇದು ಸಾಧ್ಯವಾಗಿದೆ. ಫೆ.19ರ ತನಕವೂ ಇರಲಿದೆ.

ಮರಳು ಒಣಗಿದರೆ ಕಲಾಕೃತಿಗೆ ಹಾನಿಯಾಗುವ ಸಾಧ್ಯತೆ ಇರುವುರಿಂದ ಸದಾ ಎಚ್ಚರ ವಹಿಸುತ್ತಿರಬೇಕು. ಮರಳಿನಲ್ಲಿ ನೀರಿನ ಅಂಶ ಇರುವಂತೆ ನೋಡಿಕೊಳ್ಳಬೇಕಾಗುತ್ತದೆ.  ಹೀಗಾಗಿ ಮೂರು ದಿನವೂ ಕಲಾಕೃತಿಯ ಬಳಿ ಇರಲಿದ್ದೇನೆ ಎಂದು ಹೇಳಿದರು.

ಸಿದ್ಧಗಂಗಾ ಸ್ವಾಮೀಜಿ ಹಾಗೂ ಹುತಾತ್ಮರಾದ ಸೈನಿಕರಿಗೆ ಈ ಮೂಲಕ ಶ್ರದ್ಧಾಂಜಲಿ ಸಲ್ಲಿಸುವ ಸಣ್ಣ ಪ್ರಯತ್ನ ಮಾಡಿದ್ದೇನೆ. ಸಿದ್ಧಗಂಗಾ ಶ್ರೀಗಳ ಕುತ್ತಿಗೆಯಿಂದ ಕೆಳ ಭಾಗಕ್ಕೆ ಕೇಸರಿ ಬಣ್ಣ ಹಚ್ಚಿದ್ದೆವೆ. ಸ್ವಾಮೀಜಿ ಸದಾ ಖಾವಿ ಧಿರುತ್ತಿದ್ದರಿಂದ ಈ ಬಣ್ಣ ಹಾಕಿದ್ದೇವೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.