ದೇಶಕ್ಕೆ ಉಗ್ರರ ನುಸುಳಿಸಿದ್ದೇ ಬಿಜೆಪಿ ಸಾಧನೆ

Team Udayavani, Feb 22, 2019, 7:26 AM IST

m2-ugrara.jpg

ನಂಜನಗೂಡು: ಉಗ್ರಗಾಮಿಗಳು ದೇಶದೊಳಗೆ ನುಗ್ಗಲು ಬಿಟ್ಟಿದ್ದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು  ಸಂಸದ ಆರ್‌.ಧ್ರುವನಾರಾಯಣ ಟೀಕಿಸಿದರು.

ನಗರದ ಚಾಮಲಾಪುರದ ಹುಂಡಿಯಲ್ಲಿ ಗುರುವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಆಡಳಿತ ವೈಫ‌ಲ್ಯದ ಕುರಿತು ವಿವರವಾಗಿ ಮುದ್ರಿಸಿರುವ ಹೊತ್ತಿಗೆಗಳನ್ನು ಮನೆ ಮನೆಗೆ ತಲುಪಿಸಿ  ಕಾಂಗ್ರೆಸ್‌ ಗೆಲುಗೆ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಪೊಳ್ಳು ಭರವಸೆ: ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ದೇಶದ ಪ್ರತಿಯೊಬ್ಬರ ಖಾತೆಗೂ ಹಣ ಜಮೆ ಮಾಡುವುದಾಗಿ ನೀಡಿದ್ದ ಭರವಸೆ ಏನಾಯಿತು?, ಯಾರ ಖಾತೆಗೆ ಎಷ್ಟು ಹಣ ಬಂದಿದೆ ಎಂದು ಪ್ರಶ್ನಿಸಿದ ಅವರು, ವಾರ್ಷಿಕ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಬಿಜೆಪಿ ಕಳೆದ ಐದು ವರ್ಷಗಳಲ್ಲಿ ಕೇವಲ 37 ಲಕ್ಷ ಮಂದಿಗೆ ಮಾತ್ರ ಕೆಲಸ ನೀಡಿದೆ.  ಸುಳ್ಳು ಪ್ರಚಾರ, ಪೊಳ್ಳು ಘೋಷಣೆಗಳಲ್ಲಿ ನಿರತವಾಗಿದೆ. ಬಡವರು, ರೈತರು, ಕೂಲಿ ಕಾರ್ಮಿಕರ ಬಗ್ಗೆ ಕಾಳಜಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧ್ರುವ ಕಾಂಗ್ರೆಸ್‌ ಆಸ್ತಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವಿಷ್ಣುನಾಧನ್‌ ಮಾತನಾಡಿ, ಅತ್ಯಂತ ಕ್ರಿಯಾಶೀಲ ಸಂಸದ ಎಂಬ ಪ್ರಸಿದ್ಧಿ ಪಡೆದಿರುವ ಆರ್‌.ಧ್ರುವನಾರಾಯಣ ಪಕ್ಷದ ಆಸ್ತಿಯಾಗಿದ್ದಾರೆ. ಸಾಧನೆಯಲ್ಲಿ ರಾಜ್ಯಕ್ಕೆ ಪ್ರಥಮರಾಗಿ, ರಾಷ್ಟ್ರದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಇವರ ಗೆಲುವು ಕಟ್ಟಿಟ್ಟಬುತ್ತಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಧ್ರುವನಾರಾಯಣ ಸಾಧನೆ ಹಾಗೂ ಬಿಜೆಪಿ ದುರಾಡಳಿತದ ಕುರಿತು ಹೊರತಂದಿರುವ ಕಿರುಹೊತ್ತಿಗೆಯನ್ನು ಮತದಾರರಿಗೆ ತಲುಪಿಸಿ ಭಾರಿ ಮತಗಳ ಅಂತರದಿಂದ ಅವರನ್ನು ಗೆಲ್ಲಿಸಬೇಕು ಎಂದು ಕೋರಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಕ್ಷೇತ್ರದಲ್ಲಿ ಪ್ರತಿ ಕಾರ್ಯಕರ್ತರೂ ತಲಾ 25 ಮನೆಗಳ ಜವಾಬ್ದಾರಿ ಹೊತ್ತು ಕಾಂಗ್ರೆಸ್‌ಗೆ ಮತ ತರಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿಜಯಕುಮಾರ್‌, ಕ್ಷೇತ್ರ ವೀಕ್ಷಕ ಶ್ರೀಕಂಠು, ಪಕ್ಷದ ನಗರಾಧ್ಯಕ್ಷ ಪಿ.ಶ್ರೀನಿವಾಸ್‌, ನಗರಸಭಾಧ್ಯಕ್ಷೆ ಪುಷ್ಪಲತಾ ಕಮಲೇಶ, ಉಪಾಧ್ಯಕ್ಷ ಪ್ರದೀಪ್‌, ನಗರಸಭೆ ಸದಸ್ಯರಾದ ಸಿ.ಎಂ. ಶಂಕರ, ಲಿಂಗಪ್ಪ, ಚಲುವರಾಜು, ಆರ್‌ ರಾಜು, ಮಂಜುನಾಥ, ಮುಖಂಡರಾದ ಕುರಹಟ್ಟಿ ಮಹೇಶ, ಎಸ್‌.ಸಿ.ಬಸವರಾಜು, ಮಂಜು. ನಂದಕುಮಾರ, ಆರ್‌.ಮಹದೇವು, ಅರಸು, ಶ್ರೀಧರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.