CONNECT WITH US  

ರಾಜ್ಯಸಭೆಗೆ ಗೋಯೆಲ್‌, ಚಿದು, ಪ್ರಭು ಆಯ್ಕೆ

ಹೊಸದಿಲ್ಲಿ : ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಇದೀಗ ವೇದಿಕೆ ಸಿದ್ಧಗೊಂಡಿದೆ. ಜೂ. 11ರಂದು 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿಗಳು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಶುಕ್ರವಾರ ಕೊನೆಯ ದಿನವಾಗಿತ್ತು. ಇದೇ ವೇಳೆ ಕೇಂದ್ರ ಸಚಿವರಾದ ಪಿಯೂಷ್‌ ಗೋಯಲ್‌, ಸುರೇಶ್‌ ಪ್ರಭು, ಕಾಂಗ್ರೆಸ್‌ ಹಿರಿಯ ನಾಯಕ ಪಿ.ಚಿದಂಬರಂ, ಆರ್‌ಜೆಡಿಯಿಂದ ರಾಮ್‌ಜೇಠ್ಮಲಾನಿ, ಲಾಲೂ ಪ್ರಸಾದ್‌ ಯಾದವ್‌ ಅವರ ಪುತ್ರಿ ಮಿಸಾ ಭಾರತಿ, ಜೆಡಿಯು ನಾಯಕ ಶರದ್‌ ಯಾದವ್‌ ಮತ್ತು ತಮಿಳುನಾಡಿನಿಂದ ಎಐಎಡಿಎಂಕೆ ಮತ್ತು ಡಿಎಂಕೆಯ 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Trending videos

Back to Top