ಕೃಷ್ಣ ಮೃಗ ಬೇಟೆ: ಸಲ್ಲೂ, ಸೈಫ್, ಟಬುಗೆ ಕೋರ್ಟ್ ಬುಲಾವ್
Team Udayavani, Jan 14, 2017, 10:05 AM IST
ಜೋಧಪುರ: 1998ರಲ್ಲಿ ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣ ಸಂಬಂಧ ಜ.25ರಂದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ನೀಲಂ ಹಾಗೂ ಟಬು ಅವರಿಗೆ ಜೋಧಪುರ ನ್ಯಾಯಾಲಯ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷಿಗಳ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿದ ನ್ಯಾಯಾಲಯ, ನಟರ ಹೇಳಿಕೆ ದಾಖಲು ಮಾಡಿಕೊಳ್ಳಲು 25ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು. 1998ರ ಅ.1ರಂದು “ಹಮ್ ಸಾಥ್ ಸಾಥ್ ಹೈ’ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಅವರು ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಜತೆಗೆ ಇತರ ನಟರು ಸಹ ಆರೋಪಿಯಾಗಿದ್ದಾರೆ. ಬೇಟೆಗೆ ಅಕ್ರಮ ಶಸ್ತ್ರಾಸ್ತ್ರ ಬಳಸಿದ ಆರೋಪವೂ ಸಲ್ಮಾನ್ ಖಾನ್ ಮೇಲಿದ್ದು, ಅದರ ತೀರ್ಪು ಜ.18ರಂದು ಹೊರಬೀಳಲಿದೆ. ಅಂದು ವಿಚಾರಣೆಗೆ ಹಾಜರಾಗುವಂತೆ ಸಲ್ಲೂ ಅವರಿಗೆ ಕೋರ್ಟ್ ಈಗಾಗಲೇ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್