CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಕಿಶೋರ್ ಬಗ್ಗೆ ಮಾಹಿತಿ ಕೊಟ್ರೆ 5 ಲಕ್ಷ ಇನಾಮು;ಯುಪಿಯಲ್ಲಿ ಪೋಸ್ಟರ್!

ಲಕ್ನೋ: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಹಾಗೂ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರನ್ನು ಹುಡುಕಿ ಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಉತ್ತರಪ್ರದೇಶ ಬಲ್ಲಿಯಾ ಜಿಲ್ಲೆಯ ಕಾಂಗ್ರೆಸ್ ಮುಖಂಡ ಲಕ್ನೋ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಹಾಕಿಸಿರುವ ಪೋಸ್ಟರ್ ನಲ್ಲಿ ಘೋಷಿಸಿದ್ದಾರೆ!

ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ತಂತ್ರಗಾರಿಕೆ ರೂಪಿಸುವ ಹೊಣೆ ಹೊತ್ತಿರುವ ಐ ಪ್ಯಾಕ್‌ ಸಂಘಟನೆ ಮುಖ್ಯಸ್ಥ ಪ್ರಶಾಂತ್‌ ಕಿಶೋರ್ ಅವರನ್ನು ಪಂಚರಾಜ್ಯಗಳಲ್ಲಿ ಪ್ರಮುಖವಾಗಿದ್ದ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಉಸ್ತುವಾಗಿ ವಹಿಸಿತ್ತು. ಆದರೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿಕೂಟ ಧೂಳೀಪಟವಾಗಿತ್ತು. ಫಲಿತಾಂಶ ಪ್ರಕಟವಾದ ಮೇಲೆ ಪ್ರಶಾಂತ್ ಕಿಶೋರ್ ಕೂಡಾ ನಾಟ್ ರಿಚೇಬಲ್ ಆಗಿದ್ದರು!

ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರ ಆಶಯದಂತೆ ಕಿಶೋರ್ ಪತ್ತೆಗಾಗಿ ಈ ಪೋಸ್ಟರ್ ಹಾಕಿಸಲಾಗಿದೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ರಾಜೇಶ್ ಸಿಂಗ್ ತಿಳಿಸಿದ್ದಾರೆ.

Back to Top