ಉತ್ತರಾಖಂಡ:ಬಸ್ಸು ಕಂದಕಕ್ಕೆ ಉರುಳಿ 24 ಸಾವು; ಪ್ರಧಾನಿ ಪರಿಹಾರ ಘೋಷಣೆ

Team Udayavani, May 24, 2017, 10:49 AM IST

Gangotri Bus Accident-700.jpg

ಡೆಹರಾಡೂನ್‌ : ನಿನ್ನೆ ಮಂಗಳವಾರ ಗಂಗೋತ್ರಿಯಿಂದ ಮರಳುತ್ತಿದ್ದ ಯಾತ್ರಿಕರನ್ನು ಒಳಗೊಂಡ ಬಸ್ಸು ನಾಲೂಪಾನಿ ಎಂಬಲ್ಲಿ ಭಾಗೀರಥಿ ನದಿಗೆ ಉರುಳಿ ಬಿದ್ದ ಭೀಕರ ಅವಘಡದಲ್ಲಿ  ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ. ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಈ ಭೀಕರ ದುರಂತಕ್ಕೆ ತೀವ್ರ ಶೋಕ ಮತ್ತು ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಅಪಘಾತವು ನಿನ್ನೆ ಮಂಗಳವಾರ ಸಂಜೆ ಆರು ಗಂಟೆಯ ಹೊತ್ತಿಗೆ ಘಟಿಸಿದೆ. ನತದೃಷ್ಟ ಬಸ್ಸಿನಲ್ಲಿದ್ದವರಲ್ಲಿ ಹೆಚ್ಚಿನವರು ಮಧ್ಯಪ್ರದೇಶದವರು. ಇವರು ಗಂಗೋತ್ರಿಯಿಂದ ಹೃಷೀಕೇಶಕ್ಕೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿತು. ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸು ಸುಮಾರು 100 ಅಡಿ ಆಳದ ಕಂದಕಕ್ಕೆ ಉರುಳಿ ಬಿತ್ತು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ರಾಜ್ಯದ ವತಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದರು. 

ಐಟಿಬಿಪಿ, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್‌ ಸಿಬಂದಿಗಳ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಭರದಿಂದ ಇಂದು ಬೆಳಗ್ಗಿನ ವರೆಗೂ ನಡೆಯಿತು. ಬಸ್ಸು ಉರುಳಿ ಬಿದ್ದ ತಾಣವು ಅತ್ಯಂತ ಕಡಿದಾದ ಪರ್ವತ ಪ್ರದೇಶವಾಗಿರುವುದರಿಂದ ರಕ್ಷಣಾ ಕಾರ್ಯ ಕಷ್ಟಕರವಾಯಿತು. 

ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಅವರು ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿ ಮೃತರ ಕುಟುಂಬಗಳಿಗೆ ರಾಜ್ಯದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಪ್ರಕಟಿಸಿದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.