CONNECT WITH US  

ಈಗ ಸಾಲಮನ್ನಾ ಮಾಡೋದು ಫ್ಯಾಶನ್ ಆಗ್ಬಿಟ್ಟಿದೆ!; ವೆಂಕಯ್ಯ ನಾಯ್ಡು

ಮುಂಬೈ:ರೈತರ ಸಾಲಮನ್ನಾ ವಿಚಾರ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ರೈತರ ಸಾಲ ಮನ್ನಾ ಮಾಡುವುದು ಇತ್ತೀಚೆಗೆ ಫ್ಯಾಶನ್ ಆಗಿಬಿಟ್ಟಿದೆ. ಸಾಲಮನ್ನಾ ಮಾಡುವುದೇ ಎಲ್ಲದಕ್ಕೂ ಪರಿಹಾರವಲ್ಲ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡುವುದು ಶೋಕಿಯಾಗಿಬಿಟ್ಟಿದೆ. ತೀರಾ ಅಗತ್ಯಬಿದ್ದಾಗ ಮಾತ್ರ ಸಾಲಮನ್ನಾ ಮಾಡಬೇಕು. ಯಾಕೆಂದರೆ ಸಾಲಮನ್ನಾ ಎಲ್ಲದಕ್ಕೂ ಪರಿಹಾರವಲ್ಲ. ಈ ಭಾರವನ್ನು ರೈತರೂ ಕೂಡಾ ಹೊರಬೇಕಾಗುತ್ತದೆ ಎಂದು ಹೇಳಿದರು.

ರೈತರ ಸಾಲಮನ್ನಾ ಮಾಡುವ ಯಾವುದೇ ವಿಚಾರ ಕೇಂದ್ರದ ಮುಂದೆ ಇಲ್ಲ ಎಂಬ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿಕೆ ಬಳಿಕ ವೆಂಕಯ್ಯ ನಾಯ್ಡು ಈ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಾ ಸಹಕಾರಿ ಸಂಘಗಳ ಮೂಲಕ ರೈತರು ಮಾಡಿದ್ದ ಬೆಳೆ ಸಾಲದ ಪೈಕಿ 50 ಸಾವಿರ ರೂಪಾಯಿವರೆಗಿನ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದರು. ಅಷ್ಟೇ ಅಲ್ಲ ತಮ್ಮ ಹೋರಾಟದ ಫಲವಾಗಿಯೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Trending videos

Back to Top