ಈಗ ಸಾಲಮನ್ನಾ ಮಾಡೋದು ಫ್ಯಾಶನ್ ಆಗ್ಬಿಟ್ಟಿದೆ!; ವೆಂಕಯ್ಯ ನಾಯ್ಡು
Team Udayavani, Jun 22, 2017, 1:34 PM IST
ಮುಂಬೈ:ರೈತರ ಸಾಲಮನ್ನಾ ವಿಚಾರ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ರೈತರ ಸಾಲ ಮನ್ನಾ ಮಾಡುವುದು ಇತ್ತೀಚೆಗೆ ಫ್ಯಾಶನ್ ಆಗಿಬಿಟ್ಟಿದೆ. ಸಾಲಮನ್ನಾ ಮಾಡುವುದೇ ಎಲ್ಲದಕ್ಕೂ ಪರಿಹಾರವಲ್ಲ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡುವುದು ಶೋಕಿಯಾಗಿಬಿಟ್ಟಿದೆ. ತೀರಾ ಅಗತ್ಯಬಿದ್ದಾಗ ಮಾತ್ರ ಸಾಲಮನ್ನಾ ಮಾಡಬೇಕು. ಯಾಕೆಂದರೆ ಸಾಲಮನ್ನಾ ಎಲ್ಲದಕ್ಕೂ ಪರಿಹಾರವಲ್ಲ. ಈ ಭಾರವನ್ನು ರೈತರೂ ಕೂಡಾ ಹೊರಬೇಕಾಗುತ್ತದೆ ಎಂದು ಹೇಳಿದರು.
ರೈತರ ಸಾಲಮನ್ನಾ ಮಾಡುವ ಯಾವುದೇ ವಿಚಾರ ಕೇಂದ್ರದ ಮುಂದೆ ಇಲ್ಲ ಎಂಬ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿಕೆ ಬಳಿಕ ವೆಂಕಯ್ಯ ನಾಯ್ಡು ಈ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಾ ಸಹಕಾರಿ ಸಂಘಗಳ ಮೂಲಕ ರೈತರು ಮಾಡಿದ್ದ ಬೆಳೆ ಸಾಲದ ಪೈಕಿ 50 ಸಾವಿರ ರೂಪಾಯಿವರೆಗಿನ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದರು. ಅಷ್ಟೇ ಅಲ್ಲ ತಮ್ಮ ಹೋರಾಟದ ಫಲವಾಗಿಯೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ