ಪಾಕ್ನಲ್ಲಿ ರಂಜಾನ್ ವೇಳೆ ಘೋರ ದುರಂತ: ಪೆಟ್ರೋಲ್ ಆಸೆಗೆ 140 ಬಲಿ
Team Udayavani, Jun 25, 2017, 10:57 AM IST
ಬಹಾವಲ್ಪುರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಲ್ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಘೋರ ದುರಂತ ಸಂಭವಿಸಿದ್ದು, ತೈಲ ಟ್ಯಾಂಕರ್ ಹೊತ್ತಿ ಉರಿದ ಪರಿಣಾಮ 140 ಮಂದಿ ಸಜೀವ ದಹನಗೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಲ್ಟಿಯಾದ ಟ್ಯಾಂಕರ್ನಿಂದ ಸೋರಿಕೆಯಾಗುತ್ತಿದ್ದ ಅಪಾರ ಪ್ರಮಾಣದ ಪೆಟ್ರೋಲ್ ಒಟ್ಟುಗೂಡಿಸಲು ಜನರು ಮುಗಿಬಿದ್ದ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.
ಹಲವರು ಗಾಯಗೊಂಡಿದ್ದು ಅವರನ್ನು ಬಹವಲ್ಪುರದ ವಿಕ್ಟೊರೀಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 123 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ 17 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಹಲವರ ದೇಹಗಳು ಗುರುತು ಪತ್ತೆಯಾಗದಷ್ಟು ಸುಟ್ಟು ಕರಕಲಾಗಿರುವುದು ಭೀಕರತೆಯನ್ನು ಸಾರಿ ಹೇಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ