CONNECT WITH US  

ರೈತರ ಸಾಲಮನ್ನಾ; ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ

ನವದೆಹಲಿ: ಎಲ್ಲಾ ಬರಗಾಲ ಪೀಡಿತ ಪ್ರದೇಶದ ರೈತರ ಸಾಲಮನ್ನಾ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸೋಮವಾರ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ನವದೆಹಲಿಯ ಜಂತರ್ ಮಂತರ್ ನಲ್ಲಿ 23 ದಿನಗಳ ನಿರಂತರ ಪ್ರತಿಭಟನೆಯ ಬಳಿಕ ಮದ್ರಾಸ್ ಹೈಕೋರ್ಟ್, ರೈತರ ಎಲ್ಲಾ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. 

ಅಷ್ಟೇ ಅಲ್ಲ ಮದ್ರಾಸ್ ಹೈಕೋರ್ಟ್ ನ ಮದುರೈ ಪೀಠ ಕೂಡ ಸಹಕಾರಿ ಬ್ಯಾಂಕ್ ಗಳು ಮತ್ತು ಬ್ಯಾಂಕ್ ಗಳು ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ಆದೇಶಿಸಿತ್ತು. ಏತನ್ಮಧ್ಯೆ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

Trending videos

Back to Top