ಪ್ರವಾಹದ ಅಬ್ಬರಕ್ಕೆ ಅಸ್ಸಾಂನಲ್ಲಿ 4 ಬಲಿ
Team Udayavani, Aug 13, 2017, 7:55 AM IST
ಗುವಾಹಟಿ: ಕಳೆದ 4 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತೀವ್ರಗೊಂಡಿದೆ. ಅಸ್ಸಾಂ, ತ್ರಿಪುರಾ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹವಾಮಾನ ಇಲಾಖೆಯು ಇಲ್ಲಿ ರವಿವಾರದವರೆಗೂ ರೆಡ್ ಅಲರ್ಟ್ ಘೋಷಿಸಿದೆ.
ಅಸ್ಸಾಂನಲ್ಲಿ 19 ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು, ಶನಿವಾರ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ 10 ಲಕ್ಷಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ. ಸುಮಾರು 63 ಸಾವಿರ ಮಂದಿಯನ್ನು 268 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ರಾಜ್ಯದಲ್ಲಿ 1,750 ಗ್ರಾಮಗಳು ಹಾಗೂ 1 ಲಕ್ಷ ಹೆಕ್ಟೇರ್ನಷ್ಟು ಕೃಷಿ ಭೂಮಿ ಮುಳುಗಡೆಯಾಗಿವೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ರಾಷ್ಟ್ರೀಯ ವಿಪತ್ತು ಕ್ರಿಯಾ ಪಡೆ ರಾಜ್ಯಾದ್ಯಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ತುರ್ತು ರಕ್ಷಣಾ ಕಾರ್ಯಕ್ಕೆಂದು ಸೇನೆಯನ್ನೂ ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.
ಬ್ರಹ್ಮಪುತ್ರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನರ ನಿದ್ದೆಗೆಡಿಸಿದೆ. ಇಲ್ಲಿನ ಇನ್ನೂ 9 ನದಿಗಳು ಕೂಡ ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್