CONNECT WITH US  

ಪಾಕ್‌ ಗುಂಡಿನ ದಾಳಿ,ಓರ್ವ ಸಾವು, ಐವರಿಗೆ ಗಾಯ

ಶ್ರೀನಗರ: ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘನೆ ಮಾಡಿ ನಡೆಸುತ್ತಿರುವ ಗುಂಡಿನ ದಾಳಿಯನ್ನು ಮುಂದುವರಿಸಿದ್ದು, ಭಾನುವಾರ ಅರ್ನಿಯಾ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಪೋಸ್ಟ್‌ಗಳನ್ನು ಗುರಿಯಾಗಿರಿಸಿಕೊಂಡು ನಡೆಸಿದ ದಾಳಿಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಸುಕಿನ ವೇಳೆ ಆರಂಭಿಸಿದ ಗುಂಡಿನ ದಾಳಿಗೆ 6 ಮಂದಿ ಗಾಯಗೊಂಡಿದ್ದರು, ಅವರನ್ನು ಭದ್ರತಾ ಪಡೆಗಳು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಓರ್ವ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಪಾಕ್‌ ನಿನ್ನೆ ನಡೆಸಿದ ಗುಂಡಿನ ದಾಳಿಯಲ್ಲಿ  ಬಿಎಸ್‌ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದರು. ಕೆಲವರು ಗಾಯಗೊಂಡಿದ್ದರು. 

ಪಾಕ್‌ ದಾಳಿಗೆ ಬಿಎಸ್‌ಎಫ್ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. 


Trending videos

Back to Top