CONNECT WITH US  

ಸಾವಿರ ವಿದ್ಯಾರ್ಥಿಗಳಿಗೆ ಕೇಸಿನ ಬಿಸಿ

ಲಕ್ನೋ: ಬನಾರಸ್‌ ಹಿಂದೂ ವಿವಿಯಲ್ಲಿ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿದ ಪ್ರಕರಣ ವಿವಾದ ಸೃಷ್ಟಿಸಿದ ಬೆನ್ನಲ್ಲೇ ವಾರಾಣಸಿಯ ಮೂವರು ಹೆಚ್ಚುವರಿ ನಗರ ಜಿಲ್ಲಾಧಿಕಾರಿಗಳು ಮತ್ತು ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ವಜಾ ಮಾಡಲಾಗಿದೆ. 

ಹಿಂಸಾಚಾರಕ್ಕೆ ಸಂಬಂಧಿಸಿ ಒಂದು ಸಾವಿರ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ರಿಗೆ ಕರೆ ಮಾಡಿ, ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ.

ಯುವತಿಯರನ್ನು ಚುಡಾಯಿಸಿದ್ದನ್ನು ಖಂಡಿಸಿ ಶನಿವಾರ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದರು. ಪರಿಣಾಮ ಹಲವು ವಿದ್ಯಾರ್ಥಿನಿಯರು, ಪತ್ರಕರ್ತರು, ಪೊಲೀಸರು ಗಾಯ ಗೊಂಡಿದ್ದರು. ಘಟನೆ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿ ನೇತೃತ್ವ ದಲ್ಲಿ ಸಮಿತಿ ರಚಿಸಿ, ತನಿಖೆಗೆ ಸೂಚಿಸಲಾಗಿದೆ.

ತೀಸ್ತಾ ಸೆಟಲ್ವಾಡ್‌ ವಶಕ್ಕೆ: ಲಾಠಿಪ್ರಹಾರ ಖಂಡಿಸಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಕೂಡ ಆಗಮಿಸಿದ್ದು, ಅವ ರನ್ನು ದಾರಿಮಧ್ಯೆಯೇ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ, ದೆಹಲಿಯಲ್ಲೂ ಎನ್‌ಎಸ್‌ಯುಐ, ಎಬಿವಿಪಿ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದ್ದಾರೆ.

Trending videos

Back to Top