ಇಂಗ್ಲೆಂಡ್ಗೆ ತೆರಳಲು ಕಾರ್ತಿಗೆ ಸುಪ್ರೀಂ ಅನುಮತಿ
Team Udayavani, Nov 21, 2017, 6:35 AM IST
ಹೊಸದಿಲ್ಲಿ: ಪುತ್ರಿಗೆ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಕೊಡಿಸುವ ಸಲುವಾಗಿ ಯುನೈಟೆಡ್ ಕಿಂಗ್ಡಮ್ಗೆ ತೆರಳಲು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಸುಪ್ರೀಂಕೋರ್ಟ್ ಸೋಮವಾರ ಅನುಮತಿ ನೀಡಿದೆ. ಆದರೆ, ಅದಕ್ಕೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ಪೀಠ ಕೆಲವೊಂದು ಷರತ್ತುಗಳನ್ನು ವಿಧಿಸಿದೆ. ಮೂರು ದಿನಗಳ ಒಳಗಾಗಿ ಅದಕ್ಕೆ ಬದ್ಧನಾಗಿರುವ ಬಗ್ಗೆ ಒಪ್ಪಿಗೆ ಪತ್ರವನ್ನೂ ಬರೆದುಕೊಡಬೇಕೆಂದು ಸೂಚಿಸಿದೆ. ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಬಂಡವಾಳ ಹೂಡಿಕೆಗಾಗಿ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ ಮೇಲೆ ಪ್ರಭಾವ ಬೀರಿದ ಆರೋಪ ಕಾರ್ತಿ ಮೇಲಿದೆ.