ಬಿದಿರು ಇನ್ನು ಮುಂದೆ ಮರವಲ್ಲ !

Team Udayavani, Nov 24, 2017, 6:00 AM IST

bamboo.jpg

ಹೊಸದಿಲ್ಲಿ: ಬಿದಿರು ಮರವಲ್ಲ. ಹೀಗಾಗಿ ಇನ್ಮುಂದೆ ಮರಗಳಿಗೆ ಅನ್ವಯವಾಗುವ ಯಾವುದೇ ನಿಬಂಧನೆಗಳು ಬಿದಿರಿಗೆ ಅನ್ವಯಿಸುವುದಿಲ್ಲ!

ಹೌದು. ಇಂಥದ್ದೊಂದು ಮಹತ್ವದ ಅಧ್ಯಾದೇಶಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಬಳಕೆಯಾಗುವ ಬಿದಿರನ್ನು ಕಡಿಯಲು ಹಾಗೂ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಾಗಿಸಲು ಇನ್ನು ಮುಂದೆ ಅರಣ್ಯ ಇಲಾಖೆಯ ಪರವಾನಿಗೆಯ ಅಗತ್ಯವಿಲ್ಲ. 1927ರ ಅರಣ್ಯ ಸಂರಕ್ಷಣೆ ಕಾಯ್ದೆಗೆ ಬಿದಿರು ಒಳಪಡುವುದಿಲ್ಲ ಎಂಬ ಅಧ್ಯಾದೇಶಕ್ಕೆ ರಾಷ್ಟ್ರಪತಿ ರಾಮನಾಥ  ಕೋವಿಂದ್‌ ಅವರಿಂದ ಅಂಕಿತ ಬಿದ್ದಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ನಿರಾಳವಾಗಿದ್ದರೆ, ಮುಂದಿನ ದಿನಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಬಿದಿರು ಬಳಕೆ ಸಾಧ್ಯವಾಗಲಿದೆ.

ಹೊಸ ನಿಯಮದ ಪ್ರಕಾರ ಖಾಸಗಿ ಪ್ರದೇಶದಲ್ಲಿ ಬೆಳೆದ ಬಿದಿರನ್ನು ಕಡಿಯಲು, ಬಳಸಲು ಅರಣ್ಯ ಇಲಾಖೆ ಅನುಮತಿ ಪಡೆಯಬೇಕಿಲ್ಲ. ಆದರೆ ಖಾಸಗಿ ಜಮೀನಿನಲ್ಲಿಲ್ಲದ ಬಿದಿರು ಅರಣ್ಯ ಇಲಾಖೆಗೆ ಒಳಪಡಲಿದ್ದು, ಇದನ್ನು ಕಡಿಯಲು ಇರುವ ನಿರ್ಬಂಧ ಮುಂದುವರಿಯಲಿದೆ. ಈ ಹಿಂದೆ ಬಿದಿರನ್ನೂ ಮರ ಎಂದು ಪರಿಗಣಿಸಲಾಗಿದ್ದರಿಂದ, ಅರಣ್ಯ ಕಾಯ್ದೆಯಲ್ಲಿ ಮರಗಳಿಗೆ ಅನ್ವಯಿಸುವ ಎಲ್ಲ ನಿಬಂಧನೆಗಳು ಬಿದಿರಿಗೂ ಅನ್ವಯಿಸುತ್ತಿತ್ತು.

ರೈತರ ಆದಾಯ ಹೆಚ್ಚಳ: ಬಿದಿರಿಗೂ ರೈತರ ಆದಾಯಕ್ಕೂ ನೇರ ಸಂಬಂಧವಿದೆ. ಬಿದಿರು ಕೋಟ್ಯಂತರ ರೈತರಿಗೆ ಪರ್ಯಾಯ ಆದಾಯದ ಮೂಲ. ಇದರಿಂದ ಥರಹೇವಾರಿ ಸಾಮಗ್ರಿಗಳನ್ನು ತಯಾರಿಸಬಹುದಾಗಿದ್ದು, ರೈತರು ಬಿಡುವಿನ ಸಮಯದಲ್ಲಿ ಇದರ ಲಾಭ ಪಡೆದುಕೊಳ್ಳುತ್ತಾರೆ. ಕೃಷಿ ಸಲಕರಣೆಗಳ ತಯಾರಿಕೆಯಿಂದ ಪೀಠೊಪ ಕರಣಗಳವರೆಗೂ ಬಿದಿರು ಉಪಯುಕ್ತ. 2022ರ ವೇಳೆ ರೈತರ ಆದಾಯ ದುಪ್ಪಟ್ಟುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಉದ್ದೇಶಿಸಿದ್ದರು.

ವಿಶ್ವದಲ್ಲೇ ಅಧಿಕ: ವಿಶ್ವದಲ್ಲೇ ಅತ್ಯಧಿಕ ಪ್ರಮಾಣ ದಲ್ಲಿ ಭಾರತದಲ್ಲಿ ಬಿದಿರು ಸಂಪನ್ಮೂಲವಿದೆ. ಆದರೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಅರಣ್ಯ ಕಾಯ್ದೆಯಲ್ಲಿನ ಮಿತಿಯಿಂದಾಗಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ತಿಂಗಳುಗಳ ಹಿಂದೆ ಪ್ರಧಾನಿ ಕಚೇರಿ ಈ ವಿಷಯವನ್ನು ವಿವಿಧ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿತ್ತು. ಹುಲ್ಲಿನ ಪ್ರಭೇದದ ಬಿದಿರಿನ ವಿವಿಧ ತಳಿಗಳನ್ನು ಹಲವು ರಾಜ್ಯಗಳು ಅರಣ್ಯ ಕಾಯ್ದೆ ವ್ಯಾಪ್ತಿಯಿಂದ ಹೊರಗಿಟ್ಟಿವೆ. ಆದರೆ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಬಿದಿರು ಸಾಗಿಸಲು ಈಗಲೂ ಅನುಮತಿ ಅಗತ್ಯ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.