ಕಾವೇರಿ ಮಡಿಲಿಗೆ ಗೋದಾವರಿ!

Team Udayavani, Nov 24, 2017, 6:00 AM IST

godavari.jpg

ಚೆನ್ನೈ: ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡಿನ ಸಮಸ್ಯೆಯನ್ನು ನೀಗಿಸಲು ಕೇಂದ್ರ ಸರಕಾರ ಹೊಸದೊಂದು ಯೋಜನೆ ರೂಪಿಸಿದೆ.

ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಪ್ರಸ್ತಾವದಂತೆ ಈ ಯೋಜನೆ ಜಾರಿಗೆ ಬಂದಿದ್ದೇ ಆದಲ್ಲಿ, ಕರ್ನಾಟಕದ ರೈತರಿಗೆ ನೀಡುವ ನೀರನ್ನು ತಮಿಳುನಾಡಿಗೆ ಬಿಡಬೇಕಾದ ಪ್ರಮೇಯವೇ ಇರುವುದಿಲ್ಲ. ಜತೆಗೆ ತಮಿಳುನಾಡಿಗೆ ಕರ್ನಾಟಕದಿಂದ ನೀಡಲಾಗುವ ಕಾವೇರಿ ನೀರಿನ ಅಗತ್ಯ ಕಡಿಮೆಯಾಗಿ, ರಾಜ್ಯದಲ್ಲಿ ಕಾವೇರಿ ನೀರನ್ನು ಅವಲಂಬಿಸಿರುವ ಭಾಗಗಳಿಗೆ ಸಾಕಷ್ಟು ನೀರಿನ ಪೂರೈಕೆ ಸಾಧ್ಯವಾಗಲಿದೆ.

ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ ರೂಪಿಸಿದ ಯೋಜನೆಯ ಪ್ರಕಾರ, ಗೋದಾವರಿ ನದಿಯ ಹೆಚ್ಚುವರಿ ನೀರನ್ನು ಕಾವೇರಿಗೆ ಹರಿಸಲಾಗುತ್ತದೆ. ಗೋದಾವರಿ ನದಿಯಲ್ಲಿ ಸದ್ಯ 3 ಸಾವಿರ ಟಿಎಂಸಿ ನೀರು ಸಮುದ್ರಕ್ಕೆ ಹರಿದು ಪೋಲಾಗುತ್ತಿದೆ. ಇದನ್ನು ಬಳಸಿಕೊಂಡರೆ ದಕ್ಷಿಣ ರಾಜ್ಯಗಳ ನೀರಿನ ಸಮಸ್ಯೆ ನಿವಾರಣೆ ಯಾಗಲಿದೆ. ಈ ಸಂಬಂಧ 2 ಯೋಜನೆಗಳ ಪ್ರಸ್ತಾವ ಸಚಿವಾಲಯದ ಮುಂದಿದೆ. ಈ ಸಂಬಂಧ ಮುಖ್ಯ ಮಂತ್ರಿಗಳ ಸಭೆ ನಡೆಸಿ ಎಲ್ಲ ರಾಜ್ಯಗಳೂ ಸಮ್ಮತಿಸಿದರೆ ಮುಂದುವರಿಯಲಾಗುವುದು. ಇದು ರಾಷ್ಟ್ರೀಯ ಯೋಜನೆಯಾಗಿದ್ದರಿಂದ ಕೇಂದ್ರ ಸರಕಾರವೇ ಜಾರಿ ಗೊಳಿಸಿ, ಶೇ. 90 ವೆಚ್ಚವನ್ನು ಭರಿಸಲಿದೆ. ಶೇ.10ರಷ್ಟನ್ನು ಮಾತ್ರ ರಾಜ್ಯ ಸರಕಾರಗಳು ಭರಿಸಬೇಕಾಗುತ್ತದೆ. ಈ ಯೋಜನೆ ಕರ್ನಾಟಕ, ತಮಿಳುನಾಡು, ಆಂಧ್ರ ಮತ್ತು ತೆಲಂಗಾಣಕ್ಕೆ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದ್ದಾರೆ ಸಚಿವ ನಿತಿನ್‌ ಗಡ್ಕರಿ.

ಎಲ್ಲಿಂದ ಎಲ್ಲಿಗೆ ನೀರು?: ಜಲ ಸಂಪನ್ಮೂಲ ಇಲಾಖೆಯು ಎರಡು ಯೋಜನೆಗಳನ್ನು ರೂಪಿಸಿದೆ. ಈ ಪೈಕಿ ಒಂದು ಯೋಜನೆಯಲ್ಲಿ ಗೋದಾವರಿ ನೀರನ್ನು ಕಾವೇರಿಗೆ ತರಲಾಗುತ್ತದೆ. ಗೋದಾವರಿ ನೀರನ್ನು ಆಂಧ್ರಪ್ರದೇಶದ ನಾಗಾರ್ಜುನ ಸಾಗರ ಅಣೆಕಟ್ಟೆಯ ಮೂಲಕ ಪೊಲ್ಲಾವರಂಗೆ ತಂದು ಕೃಷ್ಣಾ ನದಿಗೆ ಸಾಗಿಸಲಾಗುತ್ತದೆ. ಅಲ್ಲಿಂದ ನೀರು ಪೆನ್ನಾರ್‌ನಲ್ಲಿರುವ ಸೋಮಶಿಲೆ ಅಣೆಕಟ್ಟೆಗೆ ಬರುತ್ತದೆ. ಅನಂತರ ಇದನ್ನು ತಿರುಚಿರಾಪಳ್ಳಿ ಸಮೀಪದ ಗ್ರಾಂಡ್‌ ಅಣೆಕಟ್ಟಿನ ಮೂಲಕ ಕಾವೇರಿ ನದಿಗೆ ತಿರುಗಿಸಲಾಗುತ್ತದೆ.

ನಾಲೆಯಿಲ್ಲ , ಸ್ಟೀಲ್‌ ಪೈಪ್‌
ಸಾಂಪ್ರದಾಯಿಕ ನದಿ ತಿರುವು ಯೋಜನೆ ಯಂತೆ ಈ ಯೋಜನೆಯಲ್ಲಿ  ನಾಲೆಗಳ ಮೂಲಕ ನೀರು ಸಾಗಿಸುವುದಿಲ್ಲ. ಬದಲಿಗೆ ಸ್ಟೀಲ್‌ ಪೈಪ್‌ಗ್ಳನ್ನು ಬಳಸಲಾಗುತ್ತದೆ ಎಂದು ಗಡ್ಕರಿ ಹೇಳಿದ್ದಾರೆ. ಇದರಿಂದ ನೀರು ಪೋಲಾ ಗುವ ಪ್ರಮಾಣ ಕಡಿಮೆಯಾಗಲಿದೆ.

ಸಾವಿರ ಕಿ.ಮೀ. ಹರಿಯಲಿದೆ
ಈ ಯೋಜನೆ ಜಾರಿಯಾದರೆ ಮೂರು ಅಣೆಕಟ್ಟೆಗಳು ಸಂಪರ್ಕಗೊಳ್ಳಲಿವೆ. ಇವುಗಳನ್ನು ಸಂಪರ್ಕಿಸಲು ಸುಮಾರು ಸಾವಿರಕ್ಕೂ ಹೆಚ್ಚು  ಕಿ.ಮೀ. ಉದ್ದದ ಸ್ಟೀಲ್‌ ಪೈಪ್‌ಗ್ಳನ್ನು ಅಳವಡಿಸಬೇಕಾಗುತ್ತದೆ. ಗೋದಾವರಿಯ ನೀರು ತಿರುಚಿರಾಪಳ್ಳಿಯವರೆಗೆ ಸಾಗಲು ವಾರಗಳೇ ಬೇಕಾಗಬಹುದು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.