ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್
Team Udayavani, Dec 28, 2017, 6:40 AM IST
ಜಮ್ಮು: ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರು ಸರ್ಜಿಕಲ್ ಸ್ಟ್ರೈಕ್ ಮಾದರಿಯ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು-ಕಾಶ್ಮೀರದ ರಜೌರಿ ವಲಯದಲ್ಲಿ ಪಾಕ್ ಪಡೆ ಮಂಗಳವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರೂ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಸುಮಾರು 4 ಗಂಟೆಗಳ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ರಕ್ಷಣಾ ಮೂಲಗಳು ತಿಳಿಸಿವೆ.