ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಮಾ.3 ಫಲಿತಾಂಶ
Team Udayavani, Jan 18, 2018, 3:38 PM IST
ಹೊಸದಿಲ್ಲಿ : ಭಾರತದ ಚುನಾವಣಾ ಆಯೋಗ ಇಂದು ಗುರುವಾರ 2018ರ ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ.
ಮುಖ್ಯ ಚುನಾವಣಾ ಆಯುಕ್ತ ಎ ಕೆ ಜೋತಿ ಅವರು ಈ ಮೂರು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು.
ಪ್ರಕಟಿತ ಚುನಾವಣಾ ವೇಳಾ ಪಟ್ಟಿ ಇಂತಿದೆ :
ತ್ರಿಪುರ : ಎಲ್ಲ 60 ಸ್ಥಾನಗಳಿಗೆ ಫೆ.18ರಂದು ಚುನಾವಣೆ.
ಮೇಘಾಲಯ : ಎಲ್ಲ 60 ಸ್ಥಾನಗಳಿಗೆ ಫೆ.27ರಂದು ಚುನಾವಣೆ.
ನಾಗಾಲ್ಯಾಂಡ್ : ಎಲ್ಲ 60 ಸ್ಥಾನಗಳಿಗೆ ಫೆ.27ರಂದು ಚುನಾವಣೆ
ಈ ಎಲ್ಲ ಮೂರು ರಾಜ್ಯಗಳ ಮತ ಎಣಿಕೆ ದಿನಾಂಕ : ಮಾರ್ಚ್ 3, 2018.
ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರದ ಹಾಲಿ ವಿಧಾನಸಭಾ ಕಾರ್ಯಾವಧಿ ಅನುಕ್ರಮವಾಗಿ ಮಾರ್ಚ್ 6, 13 ಮತ್ತು 14ರಂದು ಮುಗಿಯಲಿದೆ.
ನಾಗಾಲ್ಯಾಂಡ್ನಲ್ಲಿ ಬಿಜೆಪಿ ಬೆಂಬಲಿತ, ನಾಗಾ ಪೀಪಲ್ಸ್ ಫ್ರಂಟ್ ನೇತೃತ್ವದ ಡೆಮೋಕ್ರಾಟಿಕ್ ಮೈತ್ರಿಕೂಟ ಅಧಿಕಾರದಲ್ಲಿದೆ.
ತ್ರಿಪುರದಲ್ಲಿ ಎಡ ರಂಗ ಅಧಿಕಾರದಲ್ಲಿದೆ. ಮೇಘಾಲಯದಲ್ಲಿ ಕಾಂಗ್ರೆಸ್ ಸರಕಾರವಿದೆ.
ವೇಳಾ ಪಟ್ಟಿ ಘೋಷಿಸಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ ಜೋತಿ ಅವರು “ಈ ಎಲ್ಲ ಮೂರು ರಾಜ್ಯಗಳಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು; ಇವುಗಳ ಮೊದಲ ಹಂತದ ತಪಾಸಣೆಯನ್ನು ಮುಗಿಸಲಾಗಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ