CONNECT WITH US  

ಬಿಜೆಪಿ ವಿರುದ್ಧ ಪ್ರಚಾರಕ್ಕೆ ಆರೆಸ್ಸೆಸ್‌ ಮಾದರಿ ಪಡೆ

ಅಹ್ಮದಾಬಾದ್‌: ಗುಜರಾತ್‌ನಲ್ಲಿರುವ ಬಿಜೆಪಿ ಸರಕಾರದ ವಿರುದ್ಧದ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಪಟೇಲರ ಮೀಸಲು ಹೋರಾಟದ ನಾಯಕ ಹಾರ್ದಿಕ್‌ ಪಟೇಲ್‌ ಮುಂದಾಗಿದ್ದಾರೆ. ಅದಕ್ಕೆ ಆರ್‌ಎಸ್‌ಎಸ್‌ ಹೊಂದಿರುವ ಪ್ರಚಾರಕರ ರೀತಿಯಲ್ಲಿ ಕಾರ್ಯಕರ್ತರನ್ನು ನೇಮಿಸಲು ಮುಂದಾಗಿದ್ದಾರೆ. ಅದಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ 2,490 ಮಂದಿ ಪ್ರಚಾರ ಕಾರ್ಯಕರ್ತರನ್ನು ನೇಮಕ ಮಾಡಲು ಮುಂದಾಗಿದ್ದಾರೆ. ನಗರ ಪ್ರದೇಶದಲ್ಲಿ ಬಿಜೆಪಿಗೆ ಮತ ಹಾಕದಿರುವ ಪಟೇಲ್‌ ಸಮುದಾಯದವರನ್ನು ಗುರುತು ಹಿಡಿದು ಅಭಿವೃದ್ಧಿಯ ಬಗ್ಗೆ ಬಿಜೆಪಿ ಮಾಡುತ್ತಿರುವ ಪ್ರಚಾರದ ವಿರುದ್ಧ ಅಭಿಯಾನ ಕೈಗೊಳ್ಳಲಾಗುತ್ತದೆ 

ಎಂದಿದ್ದಾರೆ. ಆರಂಭದಲ್ಲಿ ಪ್ರತಿ ತಾಲೂಕಿಗೆ 256 ಮಂದಿಯನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 


Trending videos

Back to Top