ಕಂಬಳಕ್ಕೆ ಮಧ್ಯಾಂತರ ತಡೆಯಾಜ್ಞೆ ಇಲ್ಲ
Team Udayavani, Feb 13, 2018, 8:20 AM IST
ಹೊಸದಿಲ್ಲಿ: ಕಂಬಳಕ್ಕೆ ಮಧ್ಯಾಂತರ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕರ್ನಾಟಕ ಸರಕಾರ ಅಧ್ಯಾದೇಶ ಮೂಲಕ ಕಂಬಳಕ್ಕೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಪೇಟಾ ಸಂಘಟನೆ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಮಧ್ಯಾಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಜತೆಗೆ ಮಾ.12ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸುವುದಾಗಿ ಹೇಳಿದೆ.
ಪೇಟಾ ಪರ ವಾದ ಮಂಡಿಸಿದ ಸಿದ್ಧಾರ್ಥ ಲೂಥಾ, ಕರ್ನಾಟಕ ಸರಕಾರ ಹೊರಡಿಸಿದ ಅಧ್ಯಾದೇಶದ ಅವಧಿ ಈಗ ಮುಕ್ತಾಯವಾಗಿದೆ. ಹೀಗಾಗಿ ಅದಕ್ಕೆ ಯಾವುದೇ ಕಾನೂನಿನ ಮಾನ್ಯತೆ ಇಲ್ಲ ಎಂದು ಪ್ರತಿ ಪಾದಿಸಿದರು. ಆದರೆ ಈ ವಾದವನ್ನು ನ್ಯಾಯಪೀಠ ಒಪ್ಪದೆ, ಮಧ್ಯಾಂತರ ತಡೆಯಾಜ್ಞೆಗೆ ನಿರಾಕರಿಸಿತು.
ಕಳೆದ ವರ್ಷದ ಜ. 28ರಂದು ಕರ್ನಾಟಕ ಸರಕಾರ ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆಗೆ ತಿದ್ದುಪಡಿ ತಂದು ಅಧ್ಯಾದೇಶ ಹೊರ ಡಿಸಿತ್ತು. ಅದನ್ನು ಪೇಟಾ ಮಾತ್ರವಲ್ಲದೆ, ಎಫ್ಐಎಪಿಒ ಎಂಬ ಸಂಘಟನೆಯೂ ವಿರೋಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್