ಇಶ್ರತ್ ಜಹಾನ್ ಕೇಸ್: ಪಾಂಡೆ ನಿರ್ದೋಷಿ
Team Udayavani, Feb 22, 2018, 12:52 PM IST
ಅಹಮದಾಬಾದ್: 2004ರಲ್ಲಿ ನಡೆದ ಇಶ್ರತ್ ಜಹಾನ್ ಎನ್ಕೌಂಟರ್ ಪ್ರಕರಣದಲ್ಲಿ ಗುಜರಾತ್ನ ಮಾಜಿ ಡಿಜಿಪಿ ಪಿ ಪಿ ಪಾಂಡೆಯನ್ನು ಇಲ್ಲಿನ ಸಿಬಿಐ ಕೋರ್ಟ್ ಆರೋಪಮುಕ್ತಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆ ಕಾರಣ ನೀಡಿ ಇವರ ಜೊತೆಗೆ ಇತರ ಮೂವರನ್ನೂ ದೋಷಮುಕ್ತಗೊಳಿಸಿದೆ.
ಇಶ್ರತ್ ಜಹಾನ್ ಹಾಗೂ ಇತರ ಮೂವರನ್ನು ಅಪಹರಿಸಿ ಹತ್ಯೆಗೈದ ಆರೋಪ ಇವರ ಮೇಲಿತ್ತು. ಪ್ರಕರಣದಲ್ಲಿ ಹಾಜರುಪಡಿಸಿದ ಸಾಕ್ಷಿ ಗಳ ಹೇಳಿಕೆಗಳು ವ್ಯತಿರಿಕ್ತವಾಗಿವೆ. ಅಲ್ಲದೆ ಪಾಂಡೆ ವಿರು ದ್ಧ ಆರೋಪಪಟ್ಟಿ ಸಲ್ಲಿಸುವ ಮುನ್ನ ಸರಕಾರದ ಪರವಾ ನಗಿಯನ್ನೂ ಪಡೆದಿಲ್ಲ ಎಂದು ಕೋರ್ಟ್ ಹೇಳಿದೆ.
2004ರ ಜೂನ್ 15ರಂದು ಸಿಟಿ ಕ್ರೈಮ್ ಬ್ರಾಂಚ್ ಅಧಿಕಾರಿಗಳು ಅಹಮದಾಬಾದ್ನಲ್ಲಿ ಇಶ್ರತ್ ಜಹಾನ್, ಆಕೆಯ ಸ್ನೇಹಿತ ಜಾವೇದ್ ಶೇಖ್, ಜೀಶಾನ್ ಜೋಹರ್ ಹಾಗೂ ಅಮ್ಜದ್ ರಾಣಾರನ್ನು ಎನ್ಕೌಂಟರ್ನಲ್ಲಿ ಹತ್ಯೆಗೈದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ