ಮೋಸ ಮಾಡಿ ದೇಶ ತೊರೆದರೆ ಆಸ್ತಿ ಜಪ್ತಿ

Team Udayavani, Feb 27, 2018, 10:50 AM IST

shah.jpg

ಹೊಸದಿಲ್ಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಉದ್ಯಮಿ ನೀರವ್‌ ಮೋದಿ 11,400 ಕೋಟಿ ರೂ. ಮೋಸ ಮಾಡಿದ ಹಿನ್ನೆಲೆಯಲ್ಲಿ ವಸೂಲಾತಿ ಕಾನೂನು ಬಿಗಿಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಸಂಬಂಧ ಈಗಾಗಲೇ ಕಾನೂನು ಕರಡು ಸಿದ್ಧವಾಗಿದ್ದು, ಕಾನೂನು ಸಚಿವಾಲಯ ಕೆಲವು ಶಿಫಾರಸುಗಳನ್ನು ಸೂಚಿಸಿದೆ. ಈ ಕಾನೂನು ಜಾರಿಗೆ ಬಂದರೆ 100 ಕೋಟಿ ರೂ.ಗಿಂತ ಹೆಚ್ಚು ಸಾಲ ಮಾಡಿ ಮರುಪಾವತಿ ಮಾಡದೇ ವಿದೇಶಗಳಿಗೆ ಪರಾರಿಯಾಗಿದ್ದರೆ ಮತ್ತು ವಾಪಸಾಗದಿದ್ದರೆ ಅವರ ಸ್ವತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ಇತರ ದೇಶಗಳಲ್ಲಿ ಈ ಕಾನೂನು ಇದ್ದು, ಅಲ್ಲಿ ಯಾವ ಅಂಶಗಳನ್ನು ಸೇರಿಸಲಾಗಿದೆ ಎಂದು ವಿಶ್ಲೇಷಿಸಿ ಕಳೆದ ಮೇಯಲ್ಲೇ ಕರಡು ಮಸೂದೆ ಸಿದ್ಧಪಡಿಸಲಾಗಿತ್ತು. ಅಲ್ಲದೆ ಈ ಮಸೂದೆಯ ಬಗ್ಗೆ 2017-18 ರ ಬಜೆಟ್‌ನಲ್ಲೇ ಪ್ರಸ್ತಾವಿಸಲಾಗಿದೆ. ಉದ್ಯಮಿ ವಿಜಯ್‌ ಮಲ್ಯ 9 ಸಾವಿರ ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್‌ಗಳಿಗೆ ಮರುಪಾವತಿ ಮಾಡದೇ ಲಂಡನ್‌ಗೆ ತೆರಳಿದ್ದ ನಂತರದಲ್ಲಿ ಈ ಕಾನೂನು ರೂಪಿಸಲಾಗಿದೆ.

ಪಂಜಾಬ್‌ ಸಿಎಂ ಅಳಿಯನ ವಿರುದ್ಧ ಕೇಸ್‌: ಸಿಂಭೌಲಿ ಶುಗರ್ಸ್‌ ಲಿಮಿಟೆಡ್‌ ಕಂಪನಿಯು ಒರಿಯೆಂಟಲ್‌ ಬ್ಯಾಂಕ್‌ ಆಫ್ ಕಾಮರ್ಸ್‌ಗೆ (ಒಬಿಸಿ) 97.85 ಕೋಟಿ ರೂ. ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಪಂಜಾಬ್‌ ಸಿಎಂ ಕ್ಯಾ| ಅಮರೀಂದರ್‌ ಸಿಂಗ್‌ರ ಅಳಿಯನನ್ನೂ ಹೆಸರಿಸಲಾಗಿದೆ. ಅವರು ಕಂಪನಿಯ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಈ ಬಗ್ಗೆ ಕಿಡಿಕಾರಿದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ರೈತರು ಕಷ್ಟಪಟ್ಟು ಗಳಿಸಿದ ಹಣವನ್ನು ಸಿಎಂ ಸಂಬಂಧಿ ತಮ್ಮ ಜೇಬಿಗಿಳಿಸಿದ್ದಾರೆ. ಇದಕ್ಕಿಂತ ನಾಚಿಕೆಯ ಸಂಗತಿ ಇನ್ನೇನಿದೆ ಎಂದು ಟೀಕಿಸಿದ್ದಾರೆ. ಈ ಮಧ್ಯೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಕಂಪೆನಿಯ ಮುಖ್ಯಸ್ಥ ಗುರ್ಮೀತ್‌ ಸಿಂಗ್‌ ಮಾನ್‌, ಉಪ ನಿರ್ದೇಶಕ ಗುರ್ಪಾಲ್‌ ಸಿಂಗ್‌ಗೆ ಸಂಬಂಧಿಸಿದ ಎಂಟು ಕಡೆಗಳಲ್ಲಿ ಶೋಧ ನಡೆಸಿದೆ. ದಿಲ್ಲಿ, ಹಾಪುರ್‌ ಹಾಗೂ ನೋಯ್ಡಾದಲ್ಲಿರುವ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ವಿದೇಶಿ ವಹಿವಾಟು ವಿಚಾರಣೆ: ನೀರವ್‌ ಪ್ರಕರಣಕ್ಕೆ ಸಂಬಂಧಿಸಿ ವಿದೇಶಿ ಶಾಖೆಗಳಿಗೆ ಹಣ ವರ್ಗಾವಣೆ ಯಾಗಿರುವುದನ್ನು ಗಮನಿಸಿರುವ ಸಿಬಿಐ, ಐದು ಬ್ಯಾಂಕ್‌ಗಳ ವಿದೇಶಿ ವಹಿವಾಟುಗಳ ಬಗ್ಗೆ ವಿವರಣೆ ಕೇಳಿದೆ. ತನಿಖೆ ಆರಂಭದಲ್ಲೇ ಈ ಬಗ್ಗೆ ಸಿಬಿಐಗೆ ಮಾಹಿತಿ ಲಭ್ಯವಾಗಿತ್ತು.

ರಿದಂ ಹೌಸ್‌ ಖರೀದಿಗೆ ಮಹಿಂದ್ರಾ ಒಲವು
ಮುಂಬಯಿಯಲ್ಲಿ ನೀರವ್‌ ಮಾಲಕತ್ವದ ರಿದಂ ಹೌಸ್‌ ಅನ್ನು ಜಾರಿ ನಿರ್ದೇಶನಾಲಯ ವಶಪಡಿಸಿ ಕೊಳ್ಳು ತ್ತಿದ್ದಂತೆ, ಇದನ್ನು ಸಂಗೀತಗಾರರಿಗಾಗಿ ಮರುರೂಪಿಸುವ ಯೋಜನೆಯೊಂದನ್ನು ಮಹಿಂದ್ರಾ ಸಮೂಹದ ಮುಖ್ಯಸ್ಥರಾದ ಆನಂದ್‌ ಮಹಿಂದ್ರಾ ಟ್ವಿಟರ್‌ನಲ್ಲಿ ಪ್ರಸ್ತಾವಿಸಿದ್ದಾರೆ. ಇದನ್ನು ಹರಾಜಿನಲ್ಲಿ ಖರೀದಿಸಿ ಯುವ ಸಂಗೀತಗಾರರಿಗೆ ವೇದಿಕೆಯನ್ನಾಗಿಸುವ ಇವರ ಉದ್ದೇಶಕ್ಕೆ, ಈಗಾಗಲೇ ಟ್ವಿಟರ್‌ನಲ್ಲಿ ಅಪಾರ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ.

ಅಪಾಯದಲ್ಲಿರುವ ಸಂಸ್ಥೆಗಳ ಪಟ್ಟಿ ಬಿಡುಗಡೆ
ಹಣ ದುರ್ಬಳಕೆ ಕಾನೂನಿಗೆ ಬದ್ಧವಾಗಿರದ 9500 ಬ್ಯಾಂಕೇತರ ಹಣಕಾಸು ಸಂಸ್ಥೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದೆ. ಇವುಗಳನ್ನು ಹೈ ರಿಸ್ಕ್ ಎನ್‌ಬಿಎಫ್ಸಿಗಳು ಎಂದು ಘೋಷಿಸಿದ ಹಣಕಾಸು ಗುಪ್ತಚರ ವಿಭಾಗ, ಕಳೆದ ಜನವರಿಯವರೆಗಿನ ಮಾಹಿತಿಯನ್ನು ಕಲೆ ಹಾಕಿ ಪಟ್ಟಿ ಬಿಡುಗಡೆ ಮಾಡಿದೆ. ಇವು ನೋಟು ಅಮಾನ್ಯದ ನಂತರದಲ್ಲಿ ನಡೆಸಿದ ವಹಿವಾಟುಗಳ ಬಗ್ಗೆಯೂ ಹಣಕಾಸು ಗುಪ್ತಚರ ವಿಭಾಗ ತನಿಖೆ ನಡೆಸುತ್ತಿದೆ. ಅಲ್ಲದೆ 10 ಲಕ್ಷ ರೂ.ಗಿಂತ ಹೆಚ್ಚು ಮೊತ್ತದ ನಗದು ವಹಿವಾಟು ಮತ್ತು ಅನುಮಾನಾಸ್ಪದ ವಹಿವಾಟುಗಳ ಪತ್ತೆಯ ಮೇಲೆ ಗಮನ ಹರಿಸಲಾಗದೆ.

ಟಾಪ್ ನ್ಯೂಸ್

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.