ಪ್ರತ್ಯೇಕ ಧರ್ಮ ಮಾನ್ಯತೆ ಸದ್ಯಕ್ಕಿಲ್ಲ

Team Udayavani, Apr 1, 2018, 6:00 AM IST

39.jpg

ಹೊಸದಿಲ್ಲಿ: ಸದ್ಯಕ್ಕೆ ಪ್ರತ್ಯೇಕ ಲಿಂಗಾಯತ/ವೀರ ಶೈವ ಧರ್ಮದ ಘೋಷಣೆ ದೂರದ ಮಾತಾಗಿಯೇ ಉಳಿವ ಸಾಧ್ಯತೆ ಹೆಚ್ಚಾಗಿದೆ. ಕೇಂದ್ರ ಗೃಹ ಇಲಾಖೆ ಈ ಸಂಬಂಧ ಆಂತರಿಕ ಟಿಪ್ಪಣಿಯೊಂದನ್ನು ಸಿದ್ಧ ಮಾಡಿದ್ದು, ಒಂದು ವೇಳೆ ಪ್ರತ್ಯೇಕ ಧರ್ಮವೆಂದು ಘೋಷಣೆ ಮಾಡಿದಲ್ಲಿ ಸದ್ಯ ಲಿಂಗಾಯತ/ವೀರಶೈವ ಧರ್ಮದ ಕೆಲವರು ಪಡೆಯುತ್ತಿರುವ ಪರಿಶಿಷ್ಟ ಜಾತಿ ಸೌಲಭ್ಯವೂ ಹೋಗಲಿದೆ ಎಂದು ಅಭಿಪ್ರಾಯ ಪಡಲಾಗಿದೆ. ಹೀಗಾಗಿ, ಕರ್ನಾಟಕದ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಈ ಸಂಬಂಧ ಯಾವುದೇ ನಿರ್ಧಾರ ಹೊರ ಬೀಳುವುದಿಲ್ಲ ಎಂದು ಹೇಳಲಾಗಿದೆ.

ಇದಷ್ಟೇ ಅಲ್ಲ, ಈಗ ಕರ್ನಾಟಕದಲ್ಲಿನ ಲಿಂಗಾಯತ/ವೀರಶೈವ ಧರ್ಮದ ಬೇಡಿಕೆಗೆ ಮನ್ನಣೆ ನೀಡಿದರೆ, ಹಿಂದೂ ಸಮುದಾಯದ ಉಳಿದ ಪಂಗಡಗಳೂ ತಮಗೆ ಕೂಡ ಪ್ರತ್ಯೇಕ ಧರ್ಮ ಎಂಬ ಮಾನ್ಯತೆ ನೀಡಬೇಕು ಎಂಬ ಬೇಡಿಕೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖೀಸಲಾಗಿದೆ. ಈ ಸಂಬಂಧ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಸರಕಾರದ ಟಿಪ್ಪಣಿಯಲ್ಲಿ “ಈ ಬಗ್ಗೆ ತೀರ್ಮಾನ ತೆಗೆದುಕೊಂಡರೆ ಆರ್ಯ ಸಮಾಜ, ರಾಧಾಸ್ವಾಮಿ, ವೈಷ್ಣವ ಎಂಬ ಹಿಂದೂ ಧರ್ಮದ ಇತರ ಪಂಗಡಗಳೂ ಪ್ರತ್ಯೇಕ ಧರ್ಮಕ್ಕಾಗಿ ಬೇಡಿಕೆ ಮಂಡಿಸುವ ಸಾಧ್ಯತೆ ಇದೆ. ಏಕೆಂದರೆ ಅವುಗಳು ಬ್ರಾಹ್ಮಣ ಸಮುದಾಯ ಅನುಸರಿಸುವ ಹಿಂದೂ ಧಾರ್ಮಿಕ ವಿಧಾನಗಳನ್ನು ಅನುಸರಿಸುತ್ತಿಲ್ಲ’ ಎಂದು ಅಭಿಪ್ರಾಯಪಟ್ಟಿರುವುದಾಗಿ ಹೇಳಿದೆ.

ರಾಷ್ಟ್ರೀಯ ಅಲ್ಪಸಂಖ್ಯಾಕರ ಆಯೋಗದ ಕಾಯ್ದೆ 1992ರ ಸೆಕ್ಷನ್‌ 2ರ ಪ್ರಕಾರ ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಕ್ಖರು, ಬೌದ್ಧರು, ಪಾರ್ಸಿಗಳು ಮತ್ತು ಜೈನ ಸಮುದಾಯವನ್ನು ಮಾತ್ರ ಅಲ್ಪಸಂಖ್ಯಾಕರು ಎಂದು ಪರಿಗಣಿಸಲಾಗಿದೆ ಎಂದು ಕೇಂದ್ರ ಗೃಹ  ಖಾತೆ ರಿಜಿಸ್ಟ್ರಾರ್‌ ಜನರಲ್‌ ಆಫ್ ಇಂಡಿಯಾ (ಆರ್‌ಜಿಐ) ಮಾಹಿತಿ ನೀಡಿದೆ. 2014ರಲ್ಲಿ ಜೈನ ಸಮುದಾಯಕ್ಕೆ “ಅಲ್ಪಸಂಖ್ಯಾಕ’ ಎಂಬ ಮಾನ್ಯತೆ ನೀಡಲಾಯಿತು.

2011ರ ಜನಗಣತಿಯ ಮಾಹಿತಿಯಂತೆ ಹಿಂದೂ ಧರ್ಮದಲ್ಲಿ ಅಲಖ್‌, ಮಹಿಮಾ, ಆನಂದ ಮಾರ್ಗಿ, ವೈಷ್ಣವ, ವಾಲ್ಮೀಕಿ, ಬ್ರಹ್ಮಕುಮಾರಿ, ಸನಾತನ ಧರ್ಮ ಎಂಬ ಪಂಗಡಗಳು ಇವೆ. ಪ್ರತಿ ಬಾರಿ ಸಮೀಕ್ಷೆ ನಡೆಸಿದಾಗಲೂ ಅವರು ತಮ್ಮ ಸಮುದಾಯವನ್ನು ಬದಲಿಸಿಕೊಳ್ಳುತ್ತಿರುವುದರಿಂದ ನಿಗದಿತ ಸಮುದಾಯವರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂದು ಕರಾರು ವಾಕ್ಕಾಗಿ ಹೇಳಲು ಸಾಧ್ಯವಾಗಿಲ್ಲ.

ಅವಸರ ಮಾಡಲ್ಲ: ಲಿಂಗಾಯತ / ವೀರಶೈವ ಸಮು ದಾಯಕ್ಕೆ ಅಲ್ಪಸಂಖ್ಯಾಕ ಸ್ಥಾನಮಾನ ನೀಡಿಕೆ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಯುತ್ತಿದೆ. ಆದರೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸದ್ಯ ಕರ್ನಾಟಕದಲ್ಲಿ ಮೇ 12ರಂದು ವಿಧಾನಸಭೆ ಚುನಾವಣೆ ನಡೆಯುವುದಾಗಿ ಘೋಷಣೆಯಾಗಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅವಸರವಾಗಿ ತೀರ್ಮಾನ ಕೈಗೊಂಡು ಜಾರಿ ಮಾಡಲು ಸಾಧ್ಯವಿಲ್ಲ  ಎಂದು ಮೂಲಗಳು ಹೇಳಿವೆ.

ಕರ್ನಾಟಕ ಸರಕಾರ ಮಾ. 22ರಂದು ನಿರ್ಧಾರದ ಬಗ್ಗೆ ಅಧಿಕೃತ ಪ್ರಕಟನೆ ಹೊರಡಿಸಿ, ಕೇಂದ್ರ ಸರಕಾರಕ್ಕೆ ಮಾ.23ರಂದು ಲಿಂಗಾಯತ ಹಾಗೂ ಬಸವಣ್ಣನವರ ತತ್ವಗಳನ್ನು ಅನುಸರಿಸುವ ವೀರಶೈವ ಸಮುದಾಯವನ್ನು ರಾಷ್ಟ್ರೀಯ ಅಲ್ಪಸಂಖ್ಯಾಕ ಆಯೋಗ ಕಾಯ್ದೆ 1992ರ ಅನ್ವಯ ಧಾರ್ಮಿಕ  ಅಲ್ಪಸಂಖ್ಯಾಕರು ಎಂದು ಮಾನ್ಯತೆ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ವಿಧ್ಯುಕ್ತವಾಗಿ ಮನವಿ ಸಲ್ಲಿಸಿತ್ತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.