ರಿಟರ್ನ್ಸ್ ಸಲ್ಲಿಕೆ; ತಪ್ಪು ಮಾಹಿತಿ ಕೊಟ್ಟರೆ ಕ್ರಮ
Team Udayavani, Apr 19, 2018, 6:00 AM IST
ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ನಲ್ಲಿ ತಪ್ಪು ಮಾಹಿತಿ ಸಲ್ಲಿಸುವ ಉದ್ಯೋಗಿಗಳಿಗೆ ಎಚ್ಚರಿಕೆ ನೀಡಿರುವ ಇಲಾಖೆ, ಅಂಥವರ ವಿರುದ್ಧ ಉದ್ಯೋಗದಾತರಿಗೆ ಮಾಹಿತಿ ನೀಡುವುದಾಗಿ ಹೇಳಿದೆ. ರಿಟರ್ನ್ಸ್ ಸಲ್ಲಿಕೆ ವೇಳೆ ಕಡಿಮೆ ಸಂಬಳ ಎಂದು ನಮೂದಿಸುವುದು, ಅಗತ್ಯಕ್ಕಿಂತ ಹೆಚ್ಚು ಕಡಿತಗಳನ್ನು ದಾಖಲಿಸುವುದು ಮಾಡಿದರೆ ತನಿಖೆ ನಡೆಸಲಾಗುವುದು. ಜತೆಗೆ, ಕ್ರಮ ಕೈಗೊಳ್ಳುವಂತೆ ಆಯಾ ತೆರಿಗೆದಾರರ ಕಂಪನಿಗಳಿಗೆ ಶಿಫಾರಸು ಮಾಡುವುದಾಗಿ ಬೆಂಗಳೂರಿನಲ್ಲಿರುವ ಸೆಂಟ್ರಲ್ ಪ್ರೊಸೆಸಿಂಗ್ ಸೆಂಟರ್ ಸುತ್ತೋಲೆ ಕಳುಹಿಸಿದೆ.
ಆದಾಯ ತೆರಿಗೆ ಇಲಾಖೆಯ ನಿಯಮಗಳ ನ್ವಯ ಇಂಥ ಕೆಲಸಗಳು ಶಿಕ್ಷಾರ್ಹ ಅಪರಾಧ ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ. ಬೆಂಗಳೂರಿನಲ್ಲಿ ಕೆಲ ಕಂಪನಿಗಳು ಉದ್ಯೋಗಿಗಳ ಹೆಸರಿನಲ್ಲಿ ನಕಲಿ ರಿಟರ್ನ್ಸ್ ಸಲ್ಲಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಕೇಸು ದಾಖಲಿಸಿಕೊಂಡಿದೆ. ಹೀಗಾಗಿ ಆದಾಯ ತೆರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ