ವಿಧಾನಸಭಾ ಚುನವಾಣೆ: ಬಿಜೆಪಿ ಸೋಲಿಸಲು ಕಾಂಗ್ರೆಸ್, ಬಿಎಸ್ಪಿ ಮೈತ್ರಿ
Team Udayavani, Jun 1, 2018, 7:18 PM IST
ಹೊಸದಿಲ್ಲಿ : ಈಚಿನ ಉಪ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ ಕಂಡಿರುವ ಸೋಲಿನಿಂದ ಪ್ರೇರಿತವಾಗಿರುವ ಕಾಂಗ್ರೆಸ್ ಈಗಿನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ವಿಧಾನಸಭಾ ಚುನಾವಣೆಗಳಿಗೆ ಸಂಘಟಿತ ಶಕ್ತಿಯ ರಣತಂತ್ರ ಹೂಡಲು ಮುಂದಾಗಿದೆ.
ಮಾಧ್ಯಮ ವರದಿಗಳ ಪ್ರಕಾರ ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ವಿಧಾನಸಭಾ ಚುನಾವಣೆಗಳನ್ನು ಎದುರಿಸಲು ಕೈಜೋಡಿಸಿರುವುದಾಗಿ ತಿಳಿದುಬಂದಿದೆ.
ಸಂಭಾವ್ಯ ಕಾಂಗ್ರೆಸ್ ಮತ್ತು ಬಿಎಸ್ಪಿ ಮೈತ್ರಿಯು ದಲಿತ ಮತಗಳನ್ನು ಬಾಚಿಕೊಳ್ಳುವ ಉದ್ದೇಶ ಹೊಂದಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಾಗಿ ಬಿಎಸ್ಪಿಗೆ 30 ಸ್ಥಾನಗಳನ್ನು ಬಿಟ್ಟುಕೊಡಲು ಕಾಂಗ್ರೆಸ್ ಒಪ್ಪಿಕೊಂಡಿದೆ.
ಅಂತೆಯೇ ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಮತ್ತು ಬಿಎಸ್ಪಿ ಸೀಟು ಹಂಚಿಕೆಯನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿವೆ.