ರಾಜ್ಯಗಳಿಗೆ ಇದೆ ಪೆಟ್ರೋಲ್ ಬೆಲೆ ಇಳಿಕೆ ಅವಕಾಶ: ಎಸ್ಬಿಐ
Team Udayavani, Jun 17, 2018, 6:00 AM IST
ನವದೆಹಲಿ: ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಲೀಟರ್ಗೆ ತಲಾ ರೂ. 5.75 ಮತ್ತು ರೂ. 3.75 ರಷ್ಟು ಇಳಿಸುವ ಅವಕಾಶವಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ. ಜಿಎಸ್ಟಿ ಜಾರಿಗೊಳಿಸಿರುವುದು ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ 37,426 ಕೋಟಿ ರೂ. ಹೆಚ್ಚುವರಿ ಗಳಿಕೆ ರಾಜ್ಯಕ್ಕೆ ಲಭಿಸಿದ್ದು, ರಾಜ್ಯದ ಬೊಕ್ಕಸಕ್ಕೆ ಯಾವುದೇ ಹೊರೆಯಾಗದಂತೆ ದರ ಇಳಿಕೆ ಮಾಡಬಹುದಾಗಿದೆ ಎಂದು ಎಸ್ಬಿಐ ಸಂಶೋಧನಾ ವರದಿಯಲ್ಲಿ ವಿವರಿಸಲಾಗಿದೆ.
24 ರಾಜ್ಯಗಳ ಪೈಕಿ ಗುಜರಾತ್, ಹರ್ಯಾಣ, ಮಹಾರಾಷ್ಟ್ರ ಸೇರಿದಂತೆ 16 ರಾಜ್ಯಗಳ ಆದಾಯವು ಶೇ. 14ರಷ್ಟು ಏರಿಕೆಯಾಗಿದೆ. ಇದರಿಂದ ಕಳೆದ ವರ್ಷವೇ ರಾಜ್ಯಗಳಿಗೆ ಜಿಎಸ್ಟಿಯಿಂದಾಗಿ 18 ಸಾವಿರ 700 ಕೋಟಿ ರೂ. ಹಾಗೂ ತೈಲ ಬೆಲೆ ಏರಿಕೆಯಿಂದ 18 ಸಾವಿರ 700 ಕೋಟಿ ರೂ. ಆದಾಯ ಹೆಚ್ಚುವರಿಯಾಗಿ ಹರಿದುಬಂದಿದೆ. ಆದರೆ ಕರ್ನಾಟಕ, ಪ.ಬಂಗಾಳ, ಉ.ಪ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಿಎಸ್ಟಿಯಿಂದಾಗಿ ತೆರಿಗೆ ಸಂಗ್ರಹ ಇಳಿಕೆಯಾಗಿದೆ. ಆದರೂ ನಷ್ಟದಲ್ಲಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ನಷ್ಟವನ್ನು ಭರಿಸಿಕೊಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…