ಪೆಟ್ರೋಲ್ಗೆ ಶೇ.28 ಜಿಎಸ್ಟಿ
Team Udayavani, Jun 30, 2018, 6:00 AM IST
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಒಳಪಡಿಸಿದರೆ, ಅದನ್ನು ಅತಿ ಹೆಚ್ಚಿನ ತೆರಿಗೆ ಸ್ಲಾಬ್ ಶೇ. 28ಕ್ಕೆ ನಿಗದಿಸಲಾಗುತ್ತದೆ. ಜೊತೆಗೆ ರಾಜ್ಯಕ್ಕೂ ತೆರಿಗೆ ವಿಧಿಸುವ ಅವಕಾಶ ವಿರುತ್ತದೆ ಎಂದು ಬಿಹಾರ ಡಿಸಿ ಎಂ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲು ಇನ್ನೂ ಕಾಲಾವಕಾಶ ಬೇಕಿದೆ. ಯಾಕೆಂದರೆ ರಾಜ್ಯಗಳಲ್ಲಿ ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ ಎಂದು ಸುಶೀಲ್ ಹೇಳಿದ್ದಾರೆ.
ತೈಲೋತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸಿದರೂ, ಬೆಲೆಯಲ್ಲಿ ಹೆಚ್ಚೇನೂ ಪರಿಣಾಮ ಆಗುವುದಿಲ್ಲ. ಶೇ. 45-50ರಷ್ಟು ತೆರಿಗೆ ಆದಾಯ ರಾಜ್ಯಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ನಿಂದಲೇ ಲಭ್ಯವಾಗುತ್ತದೆ. ಸದ್ಯಕ್ಕೆ ಜಿಎಸ್ಟಿ ರಿಟರ್ನ್ ಫೈಲಿಂಗ್ ವ್ಯವಸ್ಥೆಯ ಮೇಲೆ ಜಿಎಸ್ಟಿ ಸಮಿತಿ ಗಮನ ಹರಿಸಲಿದೆ. ನಂತರದಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
1 ಕೋಟಿ ಹೊಸ ತೆರಿಗೆದಾರರು: ತೆರಿಗೆ ಸಂಗ್ರಹ ಮತ್ತು ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ಜಿಎಸ್ಟಿ ನಂತರ ಗಮನಾರ್ಹ ಏರಿಕೆಯಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 2018 ಮಾರ್ಚ್ನಲ್ಲಿ ಕೊನೆಯಾದ ವಿತ್ತ ವರ್ಷದಲ್ಲಿ 6.86 ಕೋಟಿ ತೆರಿಗೆದಾರರು ತೆರಿಗೆ ಪಾವತಿ ಮಾಡಿದ್ದಾರೆ. ಹೊಸದಾಗಿ 1.06 ಕೋಟಿ ಹೊಸ ತೆರಿಗೆದಾರರು ಸೃಷ್ಟಿಯಾಗಿದ್ದಾರೆ. ಅತ್ಯಂತ ಪ್ರಮುಖ ಸಂಗತಿಯೆಂದರೆ, ವೈಯಕ್ತಿಕ ತೆರಿಗೆ ವಿಭಾಗದಲ್ಲಿ ಶೇ.44ರಷ್ಟು ಏರಿಕೆಯಾಗಿದೆ ಮತ್ತು ಕಾರ್ಪೊರೇಟ್ ತೆರಿಗೆ ವಿಭಾಗದಲ್ಲಿ ಶೇ. 17ರಷ್ಟು ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ