ಆಂಧ್ರದಲ್ಲಿ ಯುವತಿ ಮೇಲೆ ಅತ್ಯಾಚಾರ
Team Udayavani, Jul 1, 2018, 6:00 AM IST
ಹೈದರಾಬಾದ್: ಆಂಧ್ರ ಪ್ರದೇಶದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳ ಮೇಲೆ ಹಿರಿಯ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ಎಸಗಿ, ಅದರ ವೀಡಿಯೋ ಚಿತ್ರೀಕರಿಸಿ, ಆಕೆಗೆ ಬೆದರಿಕೆ ಒಡ್ಡುತ್ತಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಕುರಿತು 22 ವರ್ಷದ ಯುವತಿಯೇ ಪೊಲೀಸರಿಗೆ ದೂರು ನೀಡಿದ್ದು, “ಇಬ್ಬರು ಹಿರಿಯ ವಿದ್ಯಾರ್ಥಿಗಳು ತನ್ನನ್ನು ಹುಟ್ಟು ಹಬ್ಬದ ಸಮಾರಂಭವೊಂದರಲ್ಲಿ ಪಾನೀಯಕ್ಕೆ ಮದ್ಯ ಬೆರೆಸಿ, ಕುಡಿಸಿ ಅತ್ಯಾಚಾರ ಎಸಗಿದರು. ಅದನ್ನು ವಿಡಿಯೋ ಚಿತ್ರೀಕರಿಸಿ ನನಗೆ ಬೆದರಿಕೆ ಒಡ್ಡುತ್ತಿದ್ದಾರೆ’ ಎಂದು ಆರೋಪಿಸಿದ್ದಾಳೆ.