ಅತ್ಯಾಚಾರಗೈದು ಮಹಿಳೆಯ ಸಜೀವ ದಹನ: ಇಬ್ಬರ ಬಂಧನ, ಮೂವರು ಭೂಗತ
Team Udayavani, Jul 16, 2018, 5:28 PM IST
ಸಂಭಾಲ್, ಉತ್ತರ ಪ್ರದೇಶ : ಸಂಭಾಲ್ ಜಿಲ್ಲೆಯ ರಾಜಾಪುರ ಪ್ರದೇಶದಲ್ಲಿ 30ರ ಹರೆಯದ ಓರ್ವ ವಿವಾಹಿತ ಮಹಿಳೆಯನ್ನು ರೇಪ್ ಮಾಡಿ ಬಳಿಕ ಆಕೆಯನ್ನು ಜೀವಂತ ಸುಟ್ಟ ಪ್ರಕರಣದ ಐವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಶನಿವಾರ ಮಹಿಳೆಯನ್ನು ಆಕೆಯ ಮನೆಯಲ್ಲಿ ಐವರು ಕಾಮುಕರು ಅತ್ಯಾಚಾರ ಮಾಡಿದ ಬಳಿಕ ದೇವಳದ ಆವರಣದೊಳಗೆ ಆಕೆಯನ್ನು ಜೀವಂತ ಸುಟ್ಟಿದ್ದರು.
ಈ ಘಟನೆಯ ಮುಖ್ಯ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಈ ತಂಡದವರು ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಇನ್ನುಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಎಸ್ಪಿ ಆರ್ ಎಂ ಭಾರದ್ವಾಜ್ ಹೇಳಿದರು. ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಜೀವಂತ ಸುಟ್ಟ ಆರೋಪಿಗಳು ಆಕೆಯ ಸಂಬಂಧಿಕರೇ ಆಗಿದ್ದಾರೆ ಎಂದು ಭಾರದ್ವಾಜ್ ಹೇಳಿದರು.
ಕಳದ ಶನಿವಾರ 30ರ ಹರೆಯದ ಸಂತ್ರಸ್ತ ಮಹಿಳೆಯು ತನ್ನ ಮನೆಯಲ್ಲಿ ತನ್ನ ಮಗಳೊಂದಿಗೆ ಇದ್ದಾಗ ಐವರು ಆರೋಪಿಗಳು ನಸುಕಿನ 2.30ರ ಹೊತ್ತಿಗೆ ಮನೆಯನ್ನು ಪ್ರವೇಶಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದರು. ಆಕೆಯ ಪತಿ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ